ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆ ಮತ ಎಣಿಕೆಯ ಆರಂಭಿಕ ಪ್ರವೃತ್ತಿಗಳಲ್ಲಿ ಕಾಂಗ್ರೆಸ್ಗೆ ಉತ್ತಮ ಪ್ರತಿಕ್ರಿಯೆ ದೊರೆತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ ಎಂದು ಹರಿಯಾಣ ಕಾಂಗ್ರೆಸ್ ಅಧ್ಯಕ್ಷೆ ಕುಮಾರಿ ಸೆಲ್ಜಾ ಗುರುವಾರ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಹರಿಯಾಣ ತೀರ್ಪು ನೀಡಿದೆ - ಇದು ಬಿಜೆಪಿಯ ದುರ್ವರ್ತನೆಯನ್ನು ಇನ್ಮುಂದೆ ಸಹಿಸುವುದಿಲ್ಲ. ಕಳೆದ 5 ವರ್ಷಗಳಲ್ಲಿ ಜನರಿಗೆ ನೀಡಿರುವ ತೊಂದರೆಗಳಿಂದ ಹೊರಬರಲು ಜನತೆ ನಿರ್ಧರಿಸಿದ್ದಾರೆ. ಕಾಂಗ್ರೆಸ್ ನಾಯಕತ್ವದಲ್ಲಿ ನ್ಯಾಯ ಮತ್ತು ಸಮಾನತೆಯ ಹೊಸ ಉದಯವನ್ನು ಸ್ವೀಕರಿಸಲು ರಾಜ್ಯ ಸಿದ್ಧವಾಗಿದೆ" ಎಂದು ಹೇಳಿದ್ದಾರೆ.

ಹರಿಯಾಣದ 90 ವಿಧಾನಸಭಾ ಸ್ಥಾನಗಳಲ್ಲಿ, ಆಡಳಿತಾರೂಢ ಬಿಜೆಪಿ 38 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಹುಮತಕ್ಕೆ ಇನ್ನೂ ಎಂಟು ಸ್ಥಾನಗಳ ಅಗತ್ಯವಿದೆ. ಮತ್ತೊಂದೆಡೆ ಕಾಂಗ್ರೆಸ್ 31 ಸ್ಥಾನಗಳಲ್ಲಿ ಮುನನದೆ ಸಾಧಿಸಿದ್ದು, ಜನನಾಯಕ್ ಜನತಾ ಪಕ್ಷ (ಜೆಜೆಪಿ) 11 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಉಳಿದಂತೆ ಸ್ವತಂತ್ರ ಅಭ್ಯರ್ಥಿಗಳು ಆರು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.