Congress President Election : ಅಕ್ಟೋಬರ್‌ನಲ್ಲಿ ಕಾಂಗ್ರೆಸ್‌ಗೆ ಹೊಸ ಅಧ್ಯಕ್ಷರು ಆಯ್ಕೆಯಾಗಲಿದ್ದಾರೆ. ಇಂದು ನಡೆದ ಪಕ್ಷದ ಕೇಂದ್ರ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡಲು ಅಕ್ಟೋಬರ್ 17 ರಂದು ಪಕ್ಷದಿಂದ ಚುನಾವಣೆ ನಡೆಯಲಿದೆ. 


COMMERCIAL BREAK
SCROLL TO CONTINUE READING

ಚುನಾವಣೆ ಮುಗಿದ ನಂತರ ಅಕ್ಟೋಬರ್ 19 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಸೋನಿಯಾ ಗಾಂಧಿ ಅವರು ಸಿಡಬ್ಲ್ಯುಸಿ ಸಭೆಯಲ್ಲಿ ಭಾಗವಹಿಸಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ. ಸಭೆಯ ಅಧ್ಯಕ್ಷತೆಯನ್ನು ಸೋನಿಯಾ ಗಾಂಧಿ ವಹಿಸಿದ್ದರು. ಸೋನಿಯಾ ಗಾಂಧಿ ಆರೋಗ್ಯ ತಪಾಸಣೆಗಾಗಿ ವಿದೇಶ ಪ್ರವಾಸದಲ್ಲಿದ್ದಾರೆ. ಅವರ ಜೊತೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಕೂಡ ಇದ್ದಾರೆ.


ಇದನ್ನೂ ಓದಿ : Video : 9 ಸೆಕೆಂಡ್ ನಲ್ಲಿ ನೆಲಸಮವಾಯಿತು 337 ಅಡಿ ಎತ್ತರದ ಅವಳಿ ಗೋಪುರ


ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯ ಸಂಪೂರ್ಣ ವೇಳಾಪಟ್ಟಿ:


- ಅಧಿಸೂಚನೆ 22 ಸೆಪ್ಟೆಂಬರ್
- ನೋಂದಣಿ ಸೆಪ್ಟೆಂಬರ್ 24
- ನೋಂದಣಿಗೆ ಕೊನೆಯ ದಿನಾಂಕ ಸೆಪ್ಟೆಂಬರ್ 30
- ಅಕ್ಟೋಬರ್ 17 ರಂದು ಚುನಾವಣೆ
- ಅಕ್ಟೋಬರ್ 19 ರಂದು ಮತ ಎಣಿಕೆ


ಗೋಧಿ ಹಿಟ್ಟು, ಮೈದಾ, ರವೆ ರಫ್ತು ನಿಷೇಧಿಸಿದ ಭಾರತ.. ಕಾರಣ ಇಲ್ಲಿದೆ


ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರು


2019ರ ಲೋಕಸಭೆ ಚುನಾವಣೆಯಲ್ಲಿ ಸತತ ಎರಡನೇ ಸೋಲಿನ ನಂತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರು. ಇದಾದ ನಂತರ ಸೋನಿಯಾ ಗಾಂಧಿ ಮತ್ತೆ ಹಂಗಾಮಿ ಅಧ್ಯಕ್ಷರಾಗಿ ಪಕ್ಷದ ಅಧಿಕಾರವನ್ನು ವಹಿಸಿಕೊಂಡರು. ಪಕ್ಷದ ಒಂದು ವಿಭಾಗದಿಂದ ಬಹಿರಂಗ ಬಂಡಾಯದ ನಂತರ ಸೋನಿಯಾ ಗಾಂಧಿ ಅವರು ಆಗಸ್ಟ್ 2020 ರಲ್ಲಿ ಕೆಳಗಿಳಿಯಲು ಪ್ರಸ್ತಾಪಿಸಿದರು. ಕಾಂಗ್ರೆಸ್‌ನ ಜಿ-23 ಗುಂಪು ಬಹಳ ದಿನಗಳಿಂದ ಪಕ್ಷ ಬದಲಾವಣೆಗೆ ಒತ್ತಾಯಿಸುತ್ತಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.