ನ.30 ರಂದು ಕಾಂಗ್ರೆಸ್ ನಿಂದ ರಾಮಲೀಲಾ ಮೈದಾನದಲ್ಲಿ 'ಭಾರತ್ ಬಚಾವೊ ರ್ಯಾಲಿ'

ಕೇಂದ್ರದ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಜಿಲ್ಲಾ ಮಟ್ಟದ ಮತ್ತು ರಾಜ್ಯಮಟ್ಟದ ಆಂದೋಲನಗಳನ್ನು ಹಮ್ಮಿಕೊಳ್ಳಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.

Last Updated : Nov 16, 2019, 06:26 PM IST
ನ.30 ರಂದು ಕಾಂಗ್ರೆಸ್ ನಿಂದ ರಾಮಲೀಲಾ ಮೈದಾನದಲ್ಲಿ 'ಭಾರತ್ ಬಚಾವೊ ರ್ಯಾಲಿ' title=
file photo

ನವದೆಹಲಿ: ಕೇಂದ್ರದ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಜಿಲ್ಲಾ ಮಟ್ಟದ ಮತ್ತು ರಾಜ್ಯಮಟ್ಟದ ಆಂದೋಲನಗಳನ್ನು ಹಮ್ಮಿಕೊಳ್ಳಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.

ನವೆಂಬರ್ 30 ರಂದು ದೆಹಲಿ ರಾಮಲೀಲಾ ಮೈದಾನದಲ್ಲಿ ಬೃಹತ್ ರ್ಯಾಲಿ ಮೂಲಕ ಸಮಾರೋಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದೆ ಎಂದು ಕಾಂಗ್ರೆಸ್ ಪ್ರಕಟಿಸಿದೆ.ನವೆಂಬರ್ 5 ರಿಂದ 15 ರವರೆಗೆ ದೇಶದ ವಿವಿಧ ಭಾಗಗಳಲ್ಲಿ ಆಂದೋಲನಗಳನ್ನು ನಡೆಸಲು ಪಕ್ಷ ಯೋಜಿಸಿದೆ, ಈ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ವೈಫಲ್ಯಗಳನ್ನು ಎತ್ತಿ ಹಿಡಿಯಲು ಈ ಪ್ರತಿಭಟನೆ ನಡೆಸಲಿದೆ ಎನ್ನಲಾಗಿದೆ.

ಪ್ರತಿಭಟನೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ 'ನವೆಂಬರ್ 25 ರ ಮೊದಲು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಪ್ರತಿಭಟನೆಗಳನ್ನು ಪೂರ್ಣಗೊಳಿಸಲು ನಿರ್ಧರಿಸಿದ್ದೇವೆ. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ನವೆಂಬರ್ 30 ರಂದು ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಬೃಹತ್ ರ್ಯಾಲಿ ನಡೆಸಲು ನಿರ್ಧರಿಸಿದ್ದೇವೆ' ಎಂದು ಹೇಳಿದರು.

ದೇಶದ ಜನರು ಸಂಕಷ್ಟ ಎದುರಿಸುತ್ತಿರುವುದರಿಂದ ಇದನ್ನು 'ಭಾರತ್ ಬಚಾವೊ ರ್ಯಾಲಿ' ಎಂದು ಹೆಸರಿಸಲು ಸಭೆ ನಿರ್ಧರಿಸಿದೆ 'ಎಂದು ಅವರು ಹೇಳಿದರು. ಕಾಂಗ್ರೆಸ್ ಪಕ್ಷವು ಪ್ರಧಾನ ಕಾರ್ಯದರ್ಶಿಗಳು, ಅದರ ಪಕ್ಷದ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ವಿಭಾಗದ ಮುಖ್ಯಸ್ಥರು, ರಾಜ್ಯ ಘಟಕದ ಮುಖ್ಯಸ್ಥರು ಮತ್ತು ಸಿಎಲ್‌ಪಿ ನಾಯಕರ ಸಭೆಯಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.

ಶನಿವಾರದಂದು ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳು, ಆರ್ಥಿಕ ಕುಸಿತ, ರೈತರ ತೊಂದರೆ, ನಿರುದ್ಯೋಗ ಮತ್ತು ಇತರ ವಿಷಯಗಳ ವಿರುದ್ಧ ಆಂದೋಲನ ಕಾರ್ಯಕ್ರಮದ ಬಗ್ಗೆ ಚರ್ಚಿಸಲು ಸಭೆ ಕರೆಯಲಾಯಿತು ಎಂದು ವೇಣುಗೋಪಾಲ್ ಹೇಳಿದರು.

Trending News