ನವದೆಹಲಿ: ಏರುತ್ತಿರುವ ಇಂಧನ ಬೆಲೆಗಳ ಮಧ್ಯೆ ಕಾಂಗ್ರೆಸ್ ಮಾರ್ಚ್ 31 ರಿಂದ ಏಪ್ರಿಲ್ 7 ರವರೆಗೆ 'ಮೆಹಂಗೈ ಮುಕ್ತ್ ಭಾರತ್ ಅಭಿಯಾನ (Mehngai Mukt Bharat Abhiyan) ವನ್ನು ಪ್ರಾರಂಭಿಸಲಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಐದು ದಿನಗಳಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿದ ನಂತರ, ಕಾಂಗ್ರೆಸ್ (Congress) ಶನಿವಾರದಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿತು.ಈ ಕುರಿತಾಗಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ "ರಾಜ ಅರಮನೆಗೆ ತಯಾರಿ ನಡೆಸುತ್ತಾನೆ, ಆದರೆ ಪ್ರಜೆಗಳು ಹಣದುಬ್ಬರದಲ್ಲಿ ತತ್ತರಿಸುತ್ತಿದ್ದಾರೆ ಎಂದು ಕಿಡಿ ಕಾರಿದರು.
ಇದನ್ನೂ ಓದಿ: ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಅಂಬೇಡ್ಕರ್‌ವಾದಿಗಳು ಸಮಾಜವಾದಿಗಳೊಂದಿಗೆ ಸೇರಬೇಕು: ಅಖಿಲೇಶ್ ಯಾದವ್
ಇಂಧನ ಬೆಲೆ ಏರಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರು ನಿರಂತರವಾಗಿ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ.ಶನಿವಾರದಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ಗೆ ತಲಾ 80 ಪೈಸೆ ಏರಿಕೆಯಾಗಿದ್ದು, ಐದು ದಿನಗಳಲ್ಲಿ ನಾಲ್ಕನೇ ಏರಿಕೆಯಾಗಿದೆ.ಇದರೊಂದಿಗೆ ಈ ವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 3.20 ರೂ.ದಷ್ಟು ಏರಿಕೆಯಾಗಿದೆ.
ಇದನ್ನೂ ಓದಿ: ಕಾಶ್ಮೀರ ಫೈಲ್ಸ್ ಮಾಡುವುದಾದರೆ ಲಖಿಂಪುರ್ ಫೈಲ್ಸ್ ಕೂಡ ನಿರ್ಮಾಣವಾಗಲಿ- ಅಖಿಲೇಶ್ ಯಾದವ್
ಇನ್ನೊಂದೆಡೆಗೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲಾ 'ಮೋದಿ ಸರ್ಕಾರದಲ್ಲಿ ಹಣದುಬ್ಬರ ವಿಚಾರದಲ್ಲಿ ಕೇವಲ ದಿನಾಂಕವಷ್ಟೇ ಬದಲಾಗಿದೆ, ಆದರೆ ಸಮಸ್ಯೆ ಮಾತ್ರ ಹಾಗೆ ಇದೆ' ಎಂದು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.ನವ ಭಾರತದಲ್ಲಿ ಪ್ರತಿದಿನ ಪೆಟ್ರೋಲ್ ಹಾಗೂ ಡಿಸೇಲ್ ದರ ಏರಿಕೆಯಾಗಿದೆ, ಕಳೆದ ಐದು ದಿನಗಳಲ್ಲಿ ನಾಲ್ಕು ದಾಳಿ ಮಾಡುವುದರ ಮೂಲಕ ಲಿಟರ್ ಗೆ 3.2 ರೂ ಲೂಟಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.