Punjab Election 2022 : ಪಂಜಾಬ್ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆ!

ಫೆಬ್ರವರಿ 14 ರಂದು ಒಂದು ಹಂತದ ಮತದಾನಕ್ಕೆ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಅಂತಿಮಗೊಳಿಸಿದೆ.

Written by - Channabasava A Kashinakunti | Last Updated : Jan 13, 2022, 09:18 AM IST
  • ಪಂಜಾಬ್‌ಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಬಹುದು
  • ಮೊದಲ ಪಟ್ಟಿಯಲ್ಲಿ 80 ಅಭ್ಯರ್ಥಿಗಳ ಘೋಷಣೆ ಸಾಧ್ಯತೆ
  • ರಾಜ್ಯಸಭಾ ಸಂಸದರು ಚುನಾವಣೆಗೆ ಸ್ಪರ್ಧಿಸಬಹುದು
Punjab Election 2022 : ಪಂಜಾಬ್ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆ! title=

ಚಂಡೀಗಢ : ಪಂಜಾಬ್ ವಿಧಾನಸಭೆ ಚುನಾವಣೆ 2022ಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಎಲ್ಲಾ ರಾಜಕೀಯ ಪಕ್ಷಗಳು ಚುರುಕುಗೊಳಿಸಿವೆ. ಫೆಬ್ರವರಿ 14 ರಂದು ಒಂದು ಹಂತದ ಮತದಾನಕ್ಕೆ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಅಂತಿಮಗೊಳಿಸಿದೆ.

ಕೊನೆಯ ಪಟ್ಟಿಯಲ್ಲಿ 80 ಅಭ್ಯರ್ಥಿಗಳ ಘೋಷಣೆ ಸಾಧ್ಯತೆ

ಮೂಲಗಳ ಪ್ರಕಾರ ಇಂದು (ಜನವರಿ 13) ಅಂದರೆ ಲೋಹ್ರಿಯ ಶುಭ ದಿನದಂದು ಕಾಂಗ್ರೆಸ್ ಪಂಜಾಬ್(Punjab Assembly Election) ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ತಡರಾತ್ರಿ ಬಿಡುಗಡೆ ಮಾಡಬಹುದು. ಮೊದಲ ಪಟ್ಟಿಯಲ್ಲಿ ಸುಮಾರು 80 ಸ್ಥಾನಗಳಿಗೆ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ ಇದೆ.

ಇದನ್ನೂ ಓದಿ : ದೇಶಾದ್ಯಂತ ಒಮಿಕ್ರಾನ್ ವೈರಸ್‌ನ ಆತಂಕ: ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದ‌ ಪ್ರಧಾನಿ ಮೋದಿ

ರಾಜ್ಯಸಭಾ ಸಂಸದರು ಚುನಾವಣೆಗೆ ಸ್ಪರ್ಧಿಸಬಹುದು

ಕಾಂಗ್ರೆಸ್ ಪಕ್ಷಕ್ಕೆ(Congress) ಸಂಬಂಧಿಸಿದ ಮೂಲಗಳ ಪ್ರಕಾರ, ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವು ಕೆಲವು ರಾಜ್ಯಸಭಾ ಸಂಸದರನ್ನು ಕಣಕ್ಕಿಳಿಸಬಹುದು ಮತ್ತು ಅವರು ಸ್ಪರ್ಧಿಸಬಹುದು.

ಫೆಬ್ರವರಿ 14 ರಂದು ಪಂಜಾಬ್‌ನಲ್ಲಿ ಒಂದೇ ಹಂತದಲ್ಲಿ ಮತದಾನ!

ಚುನಾವಣಾ ಆಯೋಗ(Election Commission of India)ವು ಪಂಜಾಬ್ ಸೇರಿದಂತೆ ಐದು ರಾಜ್ಯಗಳ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದೆ ಮತ್ತು ಪಂಜಾಬ್‌ನ ಎಲ್ಲಾ 117 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ತಿಳಿಸೋಣ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ : ಇಸ್ರೋ ಸಂಸ್ಥೆಯ ಹತ್ತನೇ ಅಧ್ಯಕ್ಷರಾಗಿ ಎಸ್ ಸೋಮನಾಥ್ ನೇಮಕ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News