ಸಿಜೆಐ ದೀಪಕ್ ಮಿಶ್ರಾ ಉಚ್ಚಾಟನೆ ಅರ್ಜಿ ಹಿಂಪಡೆದ ಕಾಂಗ್ರೆಸ್
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಮಹಾಭಿಯೋಗ ಕುರಿತ ನೋಟಿಸ್ ಅನ್ನು ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ತಿರಸ್ಕರಿಸಿದ್ದನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಕಾಂಗ್ರೆಸ್ ಹಿಂಪಡೆದಿದೆ.
ನವದೆಹಲಿ: ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಮಹಾಭಿಯೋಗ ಕುರಿತ ನೋಟಿಸ್ ಅನ್ನು ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ತಿರಸ್ಕರಿಸಿದ್ದನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಕಾಂಗ್ರೆಸ್ ಹಿಂಪಡೆದಿದೆ. ಈ ಅರ್ಜಿಯನ್ನು ಕಾಂಗ್ರೆಸ್ ನಾಯಕ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಹಿಂಪಡೆದಿದ್ದಾರೆ.
ಕಾಂಗ್ರೆಸ್ ರಾಜ್ಯಸಭೆ ಸದಸ್ಯರಾದ ಪ್ರತಾಪ್ ಸಿಂಗ್ ಬಾಜ್ವಾ ಮತ್ತು ಅಮೀ ಹರ್ಷದ್ರೇ ಯಜ್ನಿಕ್ ಅವರು ಉಪರಾಷ್ಟ್ರಪತಿ ವೆಂಕಯನಾಯ್ದು ಅವರು ನೋಟಿಸ್ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಎರಡೂ ಅರ್ಜಿಗಳನ್ನು ಸುಪ್ರೀಂ ಕೋರ್ಟ್ನ ಐವರು ನ್ಯಾಯಾಧೀಶರ ಪೀಠವು ವಿಚಾರಣೆಗೆ ಒಳಪಡಿಸಿತ್ತು.
ಇಂದು ವಿಚಾರಣೆ ನಡೆದ ಸಂದರ್ಭದಲ್ಲಿ ಕಾಂಗ್ರೆಸ್ ವಕೀಲ ಕಲ್ಪಿ ಸಿಬಲ್ ಅವರು, ಆಡಳಿತಾತ್ಮಕ ಆದೇಶದ ಮೂಲಕ ಐವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠದ ಮುಂದೆ ಪಟ್ಟಿ ಮಾಡಲಾಗಿರುವ ವಿಷಯಗಳಲ್ಲಿ ಮುಖ್ಯ ನ್ಯಾಯಮೂರ್ತಿಗಳು ಆದೇಶ ನೀಡುವ ಅಧಿಕಾರ ಹೊಂದಿರುವುದಿಲ್ಲ. ಇಂತಹ ನ್ಯಾಯಪೀಠ ರಚನೆಯ ಆದೇಶದ ಪ್ರತಿ ನೀದಬೇಕೆಂದು ಕೇಳಿದಾಗ, ಅದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದರು ಅರ್ಜಿಯನ್ನು ಹಿಂತೆಗೆದುಕೊಂಡಿದ್ದಾರೆ.