ಚಂಡೀಗಢ, ಮಾರ್ಚ್ 2: ಹರಿಯಾಣ ರಾಜ್ಯದ ರೋಹ್ಟಕ್ ಜಿಲ್ಲೆಯಲ್ಲಿ ಒಂದು ಕ್ರೂರ ಘಟನೆ ನಡೆದಿದೆ. ಮಹಿಳಾ ಕಾಂಗ್ರೆಸ್ ನಾಯಕಿ ಹಿಮಾನಿ ನರ್ವಾಲ್ (22) ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ದುಷ್ಕರ್ಮಿಗಳು ಆಕೆಯನ್ನು ಕೊಲೆ ಮಾಡಿ, ನಂತರ ಸೂಟ್‌ಕೇಸ್‌ನಲ್ಲಿ ಸುತ್ತಿ ನಿರ್ಜನ ಪ್ರದೇಶದಲ್ಲಿ ಎಸೆದು ಹೋಗಿದ್ದಾರೆ. ಶನಿವಾರ (ಮಾರ್ಚ್ 1) ಸೂಟ್‌ಕೇಸ್‌ನಲ್ಲಿ ಆಕೆಯ ಶವ ಪತ್ತೆಯಾಗಿದೆ. ಸುಪ್ಲಾ ಬಸ್ ನಿಲ್ದಾಣದ ಬಳಿ ಸೂಟ್‌ಕೇಸ್‌ನಲ್ಲಿ ಹಿಮಾನಿ ನರ್ವಾಲ್ ಅವರ ಮೃತದೇಹ ಪತ್ತೆಯಾಗಿದ್ದು ಸ್ಥಳೀಯವಾಗಿ ಕೋಲಾಹಲಕ್ಕೆ ಕಾರಣವಾಯಿತು. ಬಸ್ ನಿಲ್ದಾಣದಲ್ಲಿ ಸೂಟ್‌ಕೇಸ್ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ವಿಧಿವಿಜ್ಞಾನ ತಂಡ ಸ್ಥಳಕ್ಕೆ ತಲುಪಿ ಸೂಟ್‌ಕೇಸ್ ತೆರೆದಾಗ ನಡೆದ ಭೀಕರ ಕೃತ್ಯ ಬೆಳಕಿಗೆ ಬಂದಿದೆ. ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಈ ಹಿಂದೆ ಕೈಗೊಂಡ ಜೋಡೋ ಯಾತ್ರೆಯಲ್ಲಿ ಹಿಮಾನಿ ನರ್ವಾಲ್ ಸಕ್ರಿಯವಾಗಿ ಭಾಗವಹಿಸಿದ್ದರು.
ಇದನ್ನೂ ಓದಿ-ಸತತ ಏರಿಕೆ ಬೆನ್ನಲ್ಲೇ ಗಣನೀಯವಾಗಿ ಇಳಿಕೆಯಾದ ಚಿನ್ನದ ಬೆಲೆ! ಬಂಗಾರ ಖರೀದಿಗೆ ಇದೇ ಸರಿಯಾದ ಸಮಯ..
ಹರಿಯಾಣ ರಾಜ್ಯದಾದ್ಯಂತ 33 ಸ್ಥಾನಗಳಿಗೆ ನಡೆದ ಪುರಸಭೆ ಚುನಾವಣೆಯ ಮುನ್ನಾದಿನ ಈ ಘಟನೆ ನಡೆದಿದೆ. ಮಾರ್ಚ್ 12 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು. ರೋಹ್ಟಕ್‌ನ ವಿಜಯ್ ನಗರ ಪ್ರದೇಶದವರಾದ ನರ್ವಾಲ್ ಅವರ ಕುತ್ತಿಗೆಗೆ ಚುನ್ನಿ ಸುತ್ತಿಕೊಂಡಿದ್ದಲ್ಲದೆ, ಕೈಗಳಿಗೆ ಮೆಹಂದಿ ಕೂಡ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯನ್ನು ಹಗ್ಗದಿಂದ ಬಿಗಿದು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ನರ್ವಾಲ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಿಜಿಐಎಂಎಸ್ ರೋಹ್ಟಕ್‌ಗೆ ಸ್ಥಳಾಂತರಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರ ಪುತ್ರ ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ ಮತ್ತು ಪಕ್ಷದ ಶಾಸಕಿ ಬೀಬಿ ಬಾತ್ರಾ ಅವರೊಂದಿಗೆ ಇರುವ ಹಲವಾರು ಫೋಟೋಗಳನ್ನು ನರ್ವಾಲ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ-ಸತತ ಏರಿಕೆ ಬೆನ್ನಲ್ಲೇ ಗಣನೀಯವಾಗಿ ಇಳಿಕೆಯಾದ ಚಿನ್ನದ ಬೆಲೆ! ಬಂಗಾರ ಖರೀದಿಗೆ ಇದೇ ಸರಿಯಾದ ಸಮಯ..
ನರ್ವಾಲ್ ಹತ್ಯೆಗೆ ಕಾಂಗ್ರೆಸ್ ನಾಯಕರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಅವರು ಎಸ್‌ಐಟಿ ತನಿಖೆಗೆ ಒತ್ತಾಯಿಸಿದ್ದಾರೆ.. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಸಂಪ್ಲಾ ಪೊಲೀಸ್ ಠಾಣೆಯ ಉಸ್ತುವಾರಿ ವಿಜೇಂದ್ರ ಸಿಂಗ್ ತಿಳಿಸಿದ್ದಾರೆ. ಅಲ್ಲದೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು. ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. "ಇದು ಬರ್ಬರ ಕೊಲೆ" ಎಂದು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಹೂಡಾ ಪ್ರತಿಕ್ರಿಯಿಸಿದ್ದಾರೆ. ಇದು ಆಘಾತಕಾರಿ ಮತ್ತು ಈ ಘಟನೆಯು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂಬುದನ್ನು ತೋರಿಸುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಘಟನೆಯ ಬಗ್ಗೆ ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆ ನಡೆಸಬೇಕು, ಸರ್ಕಾರ ಸಂತ್ರಸ್ತೆಯ ಕುಟುಂಬಕ್ಕೆ ಆದಷ್ಟು ಬೇಗ ನ್ಯಾಯ ಒದಗಿಸಬೇಕು ಮತ್ತು ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಒತ್ತಾಯಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.









