ಪಂಚರಾಜ್ಯ ಫಲಿತಾಂಶ.. ಆತ್ಮಾವಲೋಕನಕ್ಕೆ ಶೀಘ್ರದಲ್ಲೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ!

ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ (Five State Election result) ಹೊರಬಿದ್ದಿದ್ದು, ಐದು ರಾಜ್ಯಗಳಾದ ಮಣಿಪುರ, ಉತ್ತರಾಖಂಡ, ಉತ್ತರ ಪ್ರದೇಶ, ಗೋವಾ ಮತ್ತು ಪಂಜಾಬ್‌ಗಳಲ್ಲಿ ಕಾಂಗ್ರೆಸ್ ಕಳಪೆ ರಿಸಲ್ಟ್ ಪಡೆದುಕೊಂಡಿದೆ. 

Written by - Zee Kannada News Desk | Last Updated : Mar 10, 2022, 06:01 PM IST
  • ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ
  • ಐದು ರಾಜ್ಯಗಳಾದ ಮಣಿಪುರ, ಉತ್ತರಾಖಂಡ, ಉತ್ತರ ಪ್ರದೇಶ, ಗೋವಾ ಮತ್ತು ಪಂಜಾಬ್‌ಗ
  • ಕಾರ್ಯಕಾರಿ ಸಮಿತಿ ಸಭೆಯನ್ನು ಕರೆಯಲು ನಿರ್ಧರಿಸಿದ ಕಾಂಗ್ರೆಸ್
  • ಫಲಿತಾಂಶವನ್ನು ಆತ್ಮಾವಲೋಕನ ಮಾಡಲು ಶೀಘ್ರದಲ್ಲೇ ಸಭೆ
  • ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿಕೆ
ಪಂಚರಾಜ್ಯ ಫಲಿತಾಂಶ.. ಆತ್ಮಾವಲೋಕನಕ್ಕೆ ಶೀಘ್ರದಲ್ಲೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ!   title=
ರಣದೀಪ್ ಸಿಂಗ್ ಸುರ್ಜೇವಾಲಾ

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ (Five State Election result) ಹೊರಬಿದ್ದಿದ್ದು, ಐದು ರಾಜ್ಯಗಳಾದ ಮಣಿಪುರ, ಉತ್ತರಾಖಂಡ, ಉತ್ತರ ಪ್ರದೇಶ, ಗೋವಾ ಮತ್ತು ಪಂಜಾಬ್‌ಗಳಲ್ಲಿ ಕಾಂಗ್ರೆಸ್ ಕಳಪೆ ರಿಸಲ್ಟ್ ಪಡೆದುಕೊಂಡಿದೆ. ಈ ಹಿನ್ನೆಲೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯನ್ನು ಕರೆಯಲು ನಿರ್ಧರಿಸಿದೆ. ಫಲಿತಾಂಶವನ್ನು ಆತ್ಮಾವಲೋಕನ ಮಾಡಲು ಶೀಘ್ರದಲ್ಲೇ ಸಭೆ ನಡೆಸಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ (Surjewala) ಗುರುವಾರ ಹೇಳಿದ್ದಾರೆ. 

ಇದನ್ನೂ ಓದಿ: ಮೊಬೈಲ್ ರಿಪೇರಿ ಮಾಡಿದವನು ಸಿಎಂ ಚನ್ನಿಯನ್ನು ಸೋಲಿಸಿದ : ಸಿಎಂ ಕೇಜ್ರಿವಾಲ್ 

5 ರಾಜ್ಯಗಳ ಫಲಿತಾಂಶವು ಕಾಂಗ್ರೆಸ್ ಪಕ್ಷದ ನಿರೀಕ್ಷೆಗೆ ವಿರುದ್ಧವಾಗಿದೆ. ಆದರೆ ನಾವು ಜನರ ಆಶೀರ್ವಾದವನ್ನು (assembly poll results) ಪಡೆಯುವಲ್ಲಿ ವಿಫಲರಾಗಿದ್ದೇವೆ ಎಂಬುದನ್ನು ನಾವು ಒಪ್ಪಿಕೊಳ್ಳುತ್ತೇವೆ. ಫಲಿತಾಂಶಗಳ ಆತ್ಮಾವಲೋಕನಕ್ಕಾಗಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯನ್ನು ಶೀಘ್ರದಲ್ಲೇ ಕರೆಯಲು ಸೋನಿಯಾ ಗಾಂಧಿ (Sonia Gandhi) ನಿರ್ಧರಿಸಿದ್ದಾರೆ ಎಂದು ಸುರ್ಜೇವಾಲಾ ಹೇಳಿದರು. 

ಚುನಾವಣಾ ಫಲಿತಾಂಶಗಳ ಟ್ರೆಂಡ್‌ಗಳ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜನರ ತೀರ್ಪನ್ನು ವಿನಮ್ರವಾಗಿ ಸ್ವೀಕರಿಸುತ್ತೇನೆ ಮತ್ತು ಪಕ್ಷವು ಅದರಿಂದ ಪಾಠ ಕಲಿಯುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಕಾಮಿಡಿ ಶೋ ಯಿಂದ ಸಿಎಂ ಗಾದಿಯವರೆಗೆ ಹೀಗಿತ್ತು ಭಗವಂತ್ ಮಾನ್ ಪಯಣ

ಜನರ ತೀರ್ಪನ್ನು ವಿನಮ್ರತೆಯಿಂದ ಸ್ವೀಕರಿಸಿ. ಜನಾದೇಶದಲ್ಲಿ ಗೆದ್ದವರಿಗೆ ಶುಭಾಶಯಗಳು. ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ವಯಂಸೇವಕರ ಶ್ರಮ ಮತ್ತು ಸಮರ್ಪಣೆಗಾಗಿ ನನ್ನ ಕೃತಜ್ಞತೆಗಳು. ನಾವು ಇದರಿಂದ ಪಾಠ ಕಲಿಯುತ್ತೇವೆ ಮತ್ತು ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ರಾಹುಲ್ ಗಾಂಧಿ (Rahul Gandhi) ಟ್ವೀಟ್ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News