ನವದೆಹಲಿ: ಮೊದಲ ಹಂತದ ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರ ಹಾಗು ಸಿದ್ಧತೆಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಇಂದು ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಕರೆದಿದೆ. 


COMMERCIAL BREAK
SCROLL TO CONTINUE READING

ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸಚೆ ನಡೆಯಲಿದ್ದು ಚುನಾವಣಾ ಪ್ರಣಾಳಿಕೆ ಅಂತಿಮಗೊಳಿಸಿ, ಬಿಡುಗಡೆ ದಿನಾಂಕದ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ. 


ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್, ಅಹ್ಮದ್ ಪಟೇಲ್, ಎಕೆ ಆಂಟನಿ, ಗುಲಾಂ ನಬಿ ಆಜಾದ್, ಪಿ. ಚಿದಂಬರಂ, ಮಲ್ಲಿಕಾರ್ಜುನ್ ಖರ್ಗೆ, ಅಂಬಿಕಾ ಸೋನಿ, ಆನಂದ್ ಶರ್ಮಾ ಸೇರಿದಂತೆ ಹಿರಿಯ ನಾಯಕರು ಸೋಮವಾರ ನಡೆಯುವ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಿಯಾಂಕಾ ಗಾಂಧಿ ವದ್ರಾ ಮತ್ತು ಜ್ಯೋತಿರಾದಿತ್ಯ ಸಿಂಧ್ಯಾ ಸಹ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.


ಮಾರ್ಚ್ 12 ರಂದು ಅಹಮದಾಬಾದ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಮಿತಿ ಸಭೆ ನಡೆದಿತ್ತು.