ಶ್ರೀನಗರ : ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಶುಕ್ರವಾರ ಶ್ರೀನಗರದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂತ್ರಸ್ತರನ್ನು ಭೇಟಿಯಾದರು. ಈ ವೇಳೆ ಅವರು, ಸಹೋದರರು ಪರಸ್ಪರ ಜಗಳವಾಡುವಂತೆ ಮಾಡಲು ಭಯೋತ್ಪಾದಕರು ಈ ದಾಳಿ ನಡೆಸಿದ್ದಾರೆ, ಆದರೆ ಭಾರತೀಯರು ಒಗ್ಗಟ್ಟಾಗಿದ್ದಾರೆ ಮತ್ತು ಭಯೋತ್ಪಾದಕರ ಪ್ರಯತ್ನ ವಿಫಲಗೊಳ್ಳುತ್ತದೆ ಎಂದು ಹೇಳಿದರು.
ಸಂತ್ರಸ್ತರ ಭೇಟಿ ನಂತರ ಮಾತನಾಡಿದ ರಾಹುಲ್ ಗಾಂಧಿ ಅವರು, ಭಯೋತ್ಪಾದಕ ಹಿಂಸಾಚಾರದಿಂದ ಕುಟುಂಬ ಸದಸ್ಯರನ್ನು ಕಳೆದುಕೊಂಡ ಎಲ್ಲರಿಗೂ ಸಾಂತ್ವಾನ ತಿಳಿಸಿದರು. ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಇಡೀ ದೇಶ ಒಟ್ಟಾಗಿ ನಿಂತಿದೆ ಎಂದು ಎಲ್ಲರಿಗೂ ಹೇಳಲು ಬಯಸುತ್ತೇನೆ ಎಂದರು.
ಇದನ್ನೂ ಓದಿ:ಪಾಕಿಸ್ತಾನದ ನೀಚ ಕೃತ್ಯವನ್ನು ಬೆಂಬಲಿಸಿದ ಶಾಸಕನ ಬಂಧನ : ಜೈಲಿಗೆ ಕಳುಹಿಸಿಕೊಟ್ಟ ಪೊಲೀಸ್
ಗುರುವಾರ ಸರ್ಕಾರದೊಂದಿಗೆ ಸರ್ವಪಕ್ಷ ಸಭೆ ನಡೆಸಲಾಗಿದೆ ಎಂದು ತಿಳಿಸಿದ ರಾಹುಲ್ ಗಾಂಧಿ, ಈ ಸಭೆಯಲ್ಲಿ ಪ್ರತಿಪಕ್ಷಗಳು ಭಯೋತ್ಪಾದಕ ದಾಳಿಯನ್ನು ಒಗ್ಗಟ್ಟಿನಿಂದ ಖಂಡಿಸಿವೆ. ಉಗ್ರರ ವಿರುದ್ಧದ ಕ್ರಮಕ್ಕೆ ವಿರೋಧ ಪಕ್ಷವು ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಸಭೆಯಲ್ಲಿ ತಮ್ಮ ವಿರೋಧ ಪಕ್ಷವು ಸರ್ಕಾರಕ್ಕೆ ಸ್ಪಷ್ಟವಾಗಿ ತಿಳಿಸಿದೆ ಎಂದು ಹೇಳಿದರು.
Jammu and Kashmir | Leader of Opposition and Congress MP Rahul Gandhi met the injured people and victim families of #PahalgamTerrroristAttack
(Source: Congress) pic.twitter.com/VlTMNUz6ui
— ANI (@ANI) April 25, 2025
ಪಹಲ್ಗಾಮ್‌ನಲ್ಲಿ ಏನೇ ನಡೆದಿದ್ದರೂ, ಅದರ ಹಿಂದೆ ಸಮಾಜವನ್ನು ವಿಭಜಿಸುವ ಮತ್ತು ಸಹೋದರರು ಪರಸ್ಪರ ಜಗಳವಾಡುವಂತೆ ಮಾಡುವ ಪಿತೂರಿ ಇದೆ. ಆದರೆ ದೇಶದ ಪ್ರತಿಯೊಬ್ಬ ನಾಗರಿಕ, ಪ್ರತಿಯೊಬ್ಬ ಭಾರತೀಯ, ಒಗ್ಗಟ್ಟಾಗಿರುವುದು ಬಹಳ ಮುಖ್ಯ. ಆಗ ಮಾತ್ರ ನಾವು ಭಯೋತ್ಪಾದಕರ ಪ್ರಯತ್ನಗಳನ್ನು ವಿಫಲಗೊಳಿಸಬಹುದು ಎಂದರು.
ನಾನು ಮುಖ್ಯಮಂತ್ರಿ ಮತ್ತು ಲೆಫ್ಟಿನೆಂಟ್ ಗವರ್ನರ್ ಅವರನ್ನು ಭೇಟಿಯಾದೆ. ಅವರಿಂದ ಘಟನೆಯ ಬಗ್ಗೆ ಮಾಹಿತಿ ಪಡೆದೆ. ನನ್ನ ಪಕ್ಷ ಮತ್ತು ನಾನು ಅವರನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ ಎಂದು ಇಬ್ಬರಿಗೂ ಭರವಸೆ ನೀಡಿದ್ದೇನೆ ಎಂದು ರಾಹುಲ್ ಗಾಂಧಿಯವರು ತಿಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









