ಸೆ.12 ರವರೆಗೆ ಈ ಭಾಗಗಳಲ್ಲಿ ನಿರಂತರ ವರ್ಷಧಾರೆ: ಗುಡುಗು-ಸಿಡಿಲು ಸಹಿತ ಭಾರೀ ಗಾಳಿ ಮುನ್ಸೂಚನೆ

Karnataka Rain Alert: ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ 7 ದಿನಗಳಲ್ಲಿ ಮುಂಗಾರು ಸಕ್ರಿಯವಾಗಿರಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ನಂತರ ಅಂದರೆ ಗುರುವಾರದ ಬಳಿಕ ನಿರಂತರವಾಗಿ ಮಳೆ ಬೀಳಲಿದೆ.  

Written by - Bhavishya Shetty | Last Updated : Sep 5, 2023, 09:18 AM IST
    • ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ 7 ದಿನಗಳಲ್ಲಿ ಮುಂಗಾರು ಸಕ್ರಿಯ
    • ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಬಳಿಕ ನಿರಂತರ ಮಳೆ
    • ಜೊತೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಕೂಡ ಘೋಷಿಸಲಾಗಿದೆ.
ಸೆ.12 ರವರೆಗೆ ಈ ಭಾಗಗಳಲ್ಲಿ ನಿರಂತರ ವರ್ಷಧಾರೆ: ಗುಡುಗು-ಸಿಡಿಲು ಸಹಿತ ಭಾರೀ ಗಾಳಿ ಮುನ್ಸೂಚನೆ  title=
Karnataka Rain

Karnataka Rain Alert: ರಾಜ್ಯದಲ್ಲಿ ಮಳೆಯ ಪ್ರಮಾಣ ವಾಡಿಕೆಗಿಂತ ಕಡಿಮೆಯಾಗಿದೆ. ಕೆಲವೆಡೆ ಮಳೆ ಆಗಾಗ ಸಿಂಚನವಾಗುತ್ತಿದ್ದರೂ, ಇನ್ನೂ ಕೆಲವೆಡೆ ಮಳೆರಾಯ ನಾಪತ್ತೆಯಾಗಿದ್ದಾನೆ. ಇನ್ನು ಈ ಮಳೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟಂಬರ್ 12ರವರೆಗೂ ಮುಂದುವರಿಯಲಿದೆ ಎಂದು ತಿಳಿದುಬಂದಿದೆ. ಜೊತೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಕೂಡ ಘೋಷಿಸಲಾಗಿದೆ.

ಇದನ್ನೂ ಓದಿ: ಫ್ಯಾನ್ಸ್ “ಕೊಹ್ಲಿ…ಕೊಹ್ಲಿ” ಎನ್ನುತ್ತಿದ್ದಂತೆ ಮಧ್ಯದ ಬೆರಳು ತೋರಿಸಿದ ಗಂಭೀರ್! ವಿಡಿಯೋ ನೋಡಿ

ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ 7 ದಿನಗಳಲ್ಲಿ ಮುಂಗಾರು ಸಕ್ರಿಯವಾಗಿರಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ನಂತರ ಅಂದರೆ ಗುರುವಾರದ ಬಳಿಕ ನಿರಂತರವಾಗಿ ಮಳೆ ಬೀಳಲಿದೆ.  ಈ ಹಿನ್ನೆಲೆಯಲ್ಲಿ ಸೆಪ್ಟಂಬರ್ 7ರಿಂದ ಮೂರು ದಿನ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ಗವಾಸ್ಕರ್, ಧೋನಿಯಿಂದಲೂ ಸಾಧ್ಯವಾಗದ ಈ ಅದ್ಭುತ ವಿಶ್ವದಾಖಲೆ ಬರೆದರು ವಿರಾಟ್ ಕೊಹ್ಲಿ!

ಇಂದಿನಿಂದ ಅಂದರೆ ಸೆಪ್ಟಂಬರ್ 5ರಿಂದ ಉತ್ತರ ಒಳನಾಡು ಜಿಲ್ಲೆಗಳಾದ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಸೆಪ್ಟೆಂಬರ್ 7 ಮತ್ತು 8ರಂದು ಕಲಬುರಗಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News