Karnataka Rain Alert: ರಾಜ್ಯದಲ್ಲಿ ಮಳೆಯ ಪ್ರಮಾಣ ವಾಡಿಕೆಗಿಂತ ಕಡಿಮೆಯಾಗಿದೆ. ಕೆಲವೆಡೆ ಮಳೆ ಆಗಾಗ ಸಿಂಚನವಾಗುತ್ತಿದ್ದರೂ, ಇನ್ನೂ ಕೆಲವೆಡೆ ಮಳೆರಾಯ ನಾಪತ್ತೆಯಾಗಿದ್ದಾನೆ. ಇನ್ನು ಈ ಮಳೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟಂಬರ್ 12ರವರೆಗೂ ಮುಂದುವರಿಯಲಿದೆ ಎಂದು ತಿಳಿದುಬಂದಿದೆ. ಜೊತೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಕೂಡ ಘೋಷಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಫ್ಯಾನ್ಸ್ “ಕೊಹ್ಲಿ…ಕೊಹ್ಲಿ” ಎನ್ನುತ್ತಿದ್ದಂತೆ ಮಧ್ಯದ ಬೆರಳು ತೋರಿಸಿದ ಗಂಭೀರ್! ವಿಡಿಯೋ ನೋಡಿ


ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ 7 ದಿನಗಳಲ್ಲಿ ಮುಂಗಾರು ಸಕ್ರಿಯವಾಗಿರಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ನಂತರ ಅಂದರೆ ಗುರುವಾರದ ಬಳಿಕ ನಿರಂತರವಾಗಿ ಮಳೆ ಬೀಳಲಿದೆ.  ಈ ಹಿನ್ನೆಲೆಯಲ್ಲಿ ಸೆಪ್ಟಂಬರ್ 7ರಿಂದ ಮೂರು ದಿನ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


ಇದನ್ನೂ ಓದಿ: ಗವಾಸ್ಕರ್, ಧೋನಿಯಿಂದಲೂ ಸಾಧ್ಯವಾಗದ ಈ ಅದ್ಭುತ ವಿಶ್ವದಾಖಲೆ ಬರೆದರು ವಿರಾಟ್ ಕೊಹ್ಲಿ!


ಇಂದಿನಿಂದ ಅಂದರೆ ಸೆಪ್ಟಂಬರ್ 5ರಿಂದ ಉತ್ತರ ಒಳನಾಡು ಜಿಲ್ಲೆಗಳಾದ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಸೆಪ್ಟೆಂಬರ್ 7 ಮತ್ತು 8ರಂದು ಕಲಬುರಗಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ