ಪ್ರವಾದಿ ಮೊಹಮ್ಮದ್ ಬಗ್ಗೆ ಭಾರತೀಯ ಜನತಾ ಪಕ್ಷದ ನಾಯಕರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮುಸ್ಲಿಂ ರಾಷ್ಟ್ರಗಳಾದ ಕತಾರ್, ಇರಾನ್ ಮತ್ತು ಕುವೈತ್, ಭಾರತೀಯ ರಾಯಭಾರಿಗಳನ್ನು ಕರೆದು ಮಾತುಕತೆ ನಡೆಸಿವೆ. ಗಲ್ಫ್‌ನ ಪ್ರಮುಖ ರಾಷ್ಟ್ರಗಳು ಈ ಹೇಳಿಕೆಗಳನ್ನು ಖಂಡಿಸಿದ್ದು, ತೀವ್ರ ಆಕ್ಷೇಪಣೆಯನ್ನು ವ್ಯಕ್ತಪಡಿಸಿವೆ. 


COMMERCIAL BREAK
SCROLL TO CONTINUE READING

ಕತಾರ್ ಮತ್ತು ಕುವೈತ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ವಕ್ತಾರರು ಪತ್ರಿಕಾ ಪ್ರಕಟಣೆಯಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ; “  ನಾಯಕರು ಮಾಡಿರುವ ಟ್ವೀಟ್‌ಗಳು ಯಾವುದೇ ರೀತಿಯಲ್ಲಿ ಭಾರತ ಸರ್ಕಾರದ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ” ಎಂದು ಹೇಳಿದ್ದಾರೆ. ಕತಾರ್‌ನಲ್ಲಿರುವ ಭಾರತೀಯ ರಾಯಭಾರಿ ದೀಪಕ್ ಮಿತ್ತಲ್ ಅವರು ವಿದೇಶಾಂಗ ಕಚೇರಿಯಲ್ಲಿ ಸಭೆ ನಡೆಸಿದ್ದು, ಆಕ್ಷೇಪಾರ್ಹ ಟ್ವೀಟ್‌ಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ .


ಇದನ್ನು ಓದಿ: Norovirus: ಕರೋನಾ ಮತ್ತು ಮಂಕಿಪಾಕ್ಸ್‌ನ ಭೀತಿಯ ನಡುವೆ ಭಾರತಕ್ಕೆ ಹೊಸ ವೈರಸ್ ಬೆದರಿಕೆ


ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಪ್ರಸ್ತುತ ಕತಾರ್ ಪ್ರವಾಸದಲ್ಲಿದ್ದು, ಭಾನುವಾರ ಅವರು ಕತಾರ್ ಪ್ರಧಾನಿ ಮತ್ತು ಆಂತರಿಕ ಸಚಿವ ಶೇಖ್ ಖಾಲಿದ್ ಬಿನ್ ಖಲೀಫಾ ಬಿನ್ ಅಬ್ದುಲ್ ಅಜೀಜ್ ಅಲ್ ಸಾನಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 


ಭಾರತೀಯ ರಾಯಭಾರಿ ಕಚೇರಿ ಹೇಳಿದ್ದೇನು?
ಇದಕ್ಕೂ ಮುನ್ನ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಸುಲ್ತಾನ್ ಬಿನ್ ಸಾದ್ ಅಲ್-ಮುರೈಖಿ ಅವರು ಭಾರತದ ರಾಯಭಾರಿಗೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ಅದರಲ್ಲಿ "ಭಾರತ ಸರ್ಕಾರವು ಪಕ್ಷದ ನಾಯಕರನ್ನು ಅಮಾನತುಗೊಳಿಸುವುದಾಗಿ ಘೋಷಿಸಿದೆ. ಕತಾರ್ ಭಾರತ ಸರ್ಕಾರದಿಂದ ಸಾರ್ವಜನಿಕ ಕ್ಷಮೆಯಾಚನೆಯನ್ನು ನಿರೀಕ್ಷಿಸುತ್ತದೆ" ಎಂದು ಹೇಳಿದೆ.


ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಈಗಾಗಲೇ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಭಾರತೀಯ ರಾಯಭಾರಿ ಕಚೇರಿಯ ವಕ್ತಾರರು ತಿಳಿಸಿದ್ದಾರೆ. "ನಮ್ಮ ನಾಗರಿಕ ಪರಂಪರೆ ಮತ್ತು ವೈವಿಧ್ಯತೆಯಲ್ಲಿ ಏಕತೆಯ ಬಲವಾದ ಸಾಂಸ್ಕೃತಿಕ ಸಂಪ್ರದಾಯಗಳಿಗೆ ಅನುಗುಣವಾಗಿ, ಭಾರತ ಸರ್ಕಾರವು ಎಲ್ಲಾ ಧರ್ಮಗಳಿಗೆ ಅತ್ಯುನ್ನತ ಗೌರವವನ್ನು ನೀಡುತ್ತದೆ. ಭಾರತ-ಕತಾರ್ ಸಂಬಂಧಗಳ ವಿರುದ್ಧ ಕೆಲಸ ಮಾಡುತ್ತಿರುವ ಪಟ್ಟಭದ್ರ ಹಿತಾಸಕ್ತಿಗಳು ಈ ಅವಹೇಳನಕಾರಿ ಹೇಳಿಕೆಗಳನ್ನು ಬಳಸಿಕೊಂಡು ಜನರನ್ನು ಪ್ರಚೋದಿಸುತ್ತಿವೆ. ದ್ವಿಪಕ್ಷೀಯ ಸಂಬಂಧಗಳ ಬಲವನ್ನು ಹಾಳುಮಾಡಲು ಬಯಸುವ ಇಂತಹ ದುಷ್ಕರ್ಮಿಗಳ ವಿರುದ್ಧ ಎರಡೂ ಕಡೆಯವರು ಒಟ್ಟಾಗಿ ಕೆಲಸ ಮಾಡಬೇಕು" ಎಂದು ವಕ್ತಾರರು ಹೇಳಿದ್ದಾರೆ. 


ಕುವೈತ್‌ನ ಭಾರತೀಯ ರಾಯಭಾರಿ ಸಿಬಿ ಜಾರ್ಜ್ ಮತ್ತು ಏಷ್ಯಾ ವ್ಯವಹಾರಗಳ ಸಹಾಯಕ ವಿದೇಶಾಂಗ ಸಚಿವ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇನ್ನು ಇರಾನ್‌ನಲ್ಲಿರುವ ಭಾರತೀಯ ರಾಯಭಾರಿ ಧಮು ಗದ್ದಮ್ ಅವರನ್ನು ದಕ್ಷಿಣ ಏಷ್ಯಾದ ಮಹಾನಿರ್ದೇಶಕರು ಭಾನುವಾರ ಸಂಜೆ ಟೆಹ್ರಾನ್‌ನಲ್ಲಿರುವ ವಿದೇಶಾಂಗ ಸಚಿವಾಲಯಕ್ಕೆ ಕರೆಸಿಕೊಂಡು, ಅಲ್ಲಿ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಅರೆ-ಅಧಿಕೃತ ಸುದ್ದಿ ಸಂಸ್ಥೆ 'ಮೆಹರ್' ಪ್ರಕಾರ, ಭಾರತೀಯ ರಾಯಭಾರಿ ವಿಷಾದ ವ್ಯಕ್ತಪಡಿಸಿದ್ದಾರೆ ಮತ್ತು ಪ್ರವಾದಿಯ ಯಾವುದೇ ಅವಮಾನವನ್ನು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ. 


ಇದನ್ನು ಓದಿ: Nupur Sharma : ಬಿಜೆಪಿಯಿಂದ ನೂಪುರ್ ಶರ್ಮಾ ಅಮಾನತು!


ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಬಿಜೆಪಿಯ ರಾಷ್ಟ್ರೀಯ ವಕ್ತಾರ ನೂಪುರ್ ಶರ್ಮಾ ಮತ್ತು ದೆಹಲಿ ಘಟಕದ ಮಾಧ್ಯಮ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದು ತೀವ್ರ ಖಂಡನೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷವು ಅವರನ್ನು ಅಮಾನತುಗೊಳಿಸಿದೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ