ನವದೆಹಲಿ: ಕೊರೊನಾ 3ನೇ ಅಲೆ ಮನೆ ಬಾಗಿಲಿನಲ್ಲಿಯೇ ಇದೆ, ನಂತರವೂ ನಾಬು ಹಬ್ಬಗಳನ್ನು ಆಚರಿಸಬಹುದು ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ(Uddhav Thackeray) ಎಚ್ಚರಿಕೆ ನೀಡಿದ್ದಾರೆ. ಸೋಮವಾರ ಆರೋಗ್ಯಾಧಿಕಾರಿಗಳೊಂದಿಗೆ ವಿಪತ್ತು ನಿರ್ವಹಣಾ ಸಭೆ ನಡೆಸಿದ ಅವರು, ‘ಹಬ್ಬಗಳನ್ನು ನಾವು ಆನಂತರವೂ ಆಚರಿಸಬಹುದು. ಸದ್ಯಕ್ಕೆ ಜನರ ಆರೋಗ್ಯಕ್ಕೆ ಹೆಚ್ಚು ಆದ್ಯತೆ ನೀಡೋಣ’ ಅಂತಾ ಹೇಳಿದ್ದಾರೆ.  


COMMERCIAL BREAK
SCROLL TO CONTINUE READING

ದೇಶದಲ್ಲಿ ಹಬ್ಬಗಳ ಸೀಸನ್ ಆರಂಭವಾಗುತ್ತಿದ್ದು, ಕೊರೊನಾ 3ನೇ ಅಲೆ(Corona 3rd Wave)ಯ ಭೀತಿ ಇರುವುದರಿಂದ ಜನರ ಆರೋಗ್ಯಕ್ಕೆ ಆದ್ಯತೆ ನೀಡಬೇಕಿದೆ. ಹಬ್ಬದ ಆಚರಣೆಯನ್ನು ನಾವು ಆನಂತರವೂ ಮಾಡಬಹುದು. ಆದರೆ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಕೋವಿಡ್-19 ಪ್ರಕರಣಗಳು ದಾಖಲಾಗುತ್ತಿರುವ ಈ ಸಂದರ್ಭದಲ್ಲಿ ತುಂಬಾ ಎಚ್ಚರಿಕೆಯಿಂದ ಇರುವುದು ಅವಶ್ಯಕ’ ಅಂತಾ ಠಾಕ್ರೆ ಹೇಳಿದ್ದಾರೆ.


ಇದನ್ನೂ ಓದಿ: ಏನಿದು ಹೊಸ 'ಬಿಎಚ್' ಭಾರತ್ ಸರಣಿ?: ಪ್ರಯೋಜನೆಗಳು, ಅರ್ಜಿ ಸಲ್ಲಿಸುವ ಮಾಹಿತಿ ಇಲ್ಲಿದೆ…


ದೇಶದಲ್ಲಿ ಮತ್ತು ರಾಜ್ಯದಲ್ಲಿ ಕೊರೊನಾ(CoronaVirus) ಪ್ರಕರಣಗಳ ಸಂಖ್ಯೆಯಲ್ಲಿ ದಿನೇ ದಿನೇ ಏರಿಕೆಯಾಗುತ್ತಿದ್ದು, ಪರಿಸ್ಥಿತಿ ಕೈಮೀರುವ ಸಾಧ್ಯತೆಯಿದೆ. ಹೀಗಾಗಿ ಹೆಚ್ಚಿನ ಜನಸಂದಣಿಯನ್ನು ತಪ್ಪಿಸಲು ಆಂದೋಲನಗಳು, ಸಭೆಗಳು ಮತ್ತು ಇತರ ಕಾರ್ಯಕ್ರಮಗಳನ್ನು ತಕ್ಷಣವೇ ನಿಲ್ಲಿಸುವಂತೆ ಶಿವಸೇನಾ(Shiv Sena) ನಾಯಕ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದ್ದಾರೆ.


‘ಹಬ್ಬಗಳು ಮತ್ತು ಧಾರ್ಮಿಕ ಕಾರ್ಯಕ್ರಮಗಳ ಮೇಲೆ ನಿರ್ಬಂಧಗಳನ್ನು ವಿಧಿಸಲು ಯಾರು ಬಯಸುತ್ತಾರೆ ಹೇಳಿ..? ಆದರೆ ನಮಗೆ ಜನರ ಜೀವನವೇ ಮುಖ್ಯ. ಮುಂಬರುವ ಹಬ್ಬದ ದಿನಗಳು ನಮಗೆ ನಿರ್ಣಾಯಕ ಮತ್ತು ಸವಾಲು ಆಗಿದೆ. ಕೋವಿಡ್-19 3ನೇ ಅಲೆ(Corona 3rd wave) ನಮ್ಮ ಮನೆ ಬಾಗಿಲಿನಲ್ಲೇ ಇರುವುದರಿಂದ ರಾಜಕೀಯ ಪಕ್ಷಗಳ ಮೇಲೆ ಮಹತ್ತರ ಜವಾಬ್ದಾರಿ ಇದೆ’ ಎಂದು ಅವರು ಹೇಳಿದರು. ‘ಕೇರಳದಲ್ಲಿ ಪ್ರತಿದಿನ 30 ಸಾವಿರಕ್ಕೂ ಹೆಚ್ಚಿನ ಪ್ರಕರಣಗಳ ದಾಖಲಾಗುತ್ತಿವೆ. ಇದು ಅಪಾಯದ ಸಂಕೇತವಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಮಹಾರಾಷ್ಟ್ರ ಭಾರೀ ಬೆಲೆ ತೆರಬೇಕಾಗುತ್ತದೆ’ ಎಂದು ಠಾಕ್ರೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.


ಇದನ್ನೂ ಓದಿ: Smartphone Tips: ನಿಮ್ಮ ಫೋನ್ ಅನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಟ್ರೈ ಮಾಡಿ


ಮಹಾರಾಷ್ಟ್ರ(Maharashtra)ದಲ್ಲಿ ಭಾನುವಾರ 4,057 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಇದರಿಂದ ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ  64,86,174 ಕ್ಕೆ ಏರಿಕೆಯಾಗಿದೆ. ಒಂದೇ ದಿನ ವೈರಸ್ ಗೆ 67 ಮಂದಿ ಬಲಿಯಾಗಿದ್ದು, ಇದುವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 1,37,774 ಕ್ಕೆ ಏರಿಕೆಯಾಗಿದೆ. ಈ ಮಧ್ಯೆ ಭಾರತದಲ್ಲಿ ಸೋಮವಾರ 38,948 ಹೊಸ ಕೋವಿಡ್ -19 ಪ್ರಕರಣಗಳು ಮತ್ತು 219 ಸಾವುಗಳು ದಾಖಲಾಗಿವೆ. ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 3,30,27,621 ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 4,40,752 ಗೆ ತಲುಪಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.