ದೇಶದಲ್ಲಿ ಒಂದೇ ದಿನ ಕರೋನಾ ಸಂಖ್ಯೆಯಲ್ಲಿ 43%ದಷ್ಟು ಹೆಚ್ಚಳ, 13,154 ಹೊಸ ಪ್ರಕರಣ ಪತ್ತೆ
ಕಳೆದ 24 ಗಂಟೆಗಳಲ್ಲಿ 13,154 ಹೊಸ ಕರೋನಾ ಪ್ರಕರಣಗಳು ಪತ್ತೆಯಾಗಿವೆ. ದೆಹಲಿಯಲ್ಲಿ ಕರೋನಾ ಪಾಸಿಟಿವಿಟಿ ದರವು 1% ದಾಟಿದೆ. ಬುಧವಾರಕ್ಕೆ ಹೋಲಿಸಿದರೆ ಇದು 43% ಅಧಿಕವಾಗಿದೆ.
ನವದೆಹಲಿ : ದೆಹಲಿ ಸೇರಿದಂತೆ ಇಡೀ ದೇಶದಲ್ಲಿ ಕೊರೊನಾವೈರಸ್ (Coronavirus) ಸೋಂಕಿನ ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ 13,154 ಹೊಸ ಕರೋನಾ ಪ್ರಕರಣಗಳು ಪತ್ತೆಯಾಗಿವೆ. ದೆಹಲಿಯಲ್ಲಿ ಕರೋನಾ ಪಾಸಿಟಿವಿಟಿ ದರವು 1% ದಾಟಿದೆ. ಬುಧವಾರಕ್ಕೆ ಹೋಲಿಸಿದರೆ ಇದು 43% ಅಧಿಕವಾಗಿದೆ. ನಿನ್ನೆ ದೇಶದಲ್ಲಿ 9 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನಿಂದ (COVID-19) 268 ರೋಗಿಗಳು ಸಾವನ್ನಪ್ಪಿದ್ದಾರೆ.
ಭಾರತದಲ್ಲಿ ಓಮಿಕ್ರಾನ್ :
ಭಾರತದ ಓಮಿಕ್ರಾನ್ ಟ್ಯಾಲಿ (Omicron Tally) ಕೂಡ ವೇಗವಾಗಿ ಬೆಳೆಯುತ್ತಿದೆ. ದೇಶದಲ್ಲಿ ಪ್ರಸ್ತುತ 961 ಒಮಿಕ್ರಾನ್ ಪ್ರಕರಣಗಳಿವೆ. ಇದರಲ್ಲಿ ದೆಹಲಿಯಲ್ಲಿ 263, ಮಹಾರಾಷ್ಟ್ರದಲ್ಲಿ 252 ಓಮಿಕ್ರಾನ್ (Omicron) ಪ್ರಕರಣಗಳು ದಾಖಲಾಗಿವೆ.
ಇದನ್ನೂ ಓದಿ : Encounters in Kashmir: ಎರಡು ಎನ್‌ಕೌಂಟರ್‌ಗಳಲ್ಲಿ ಆರು ಭಯೋತ್ಪಾದಕರ ಹತ್ಯೆ
ಕಳೆದ 24 ಗಂಟೆಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ 71696 ಪರೀಕ್ಷೆಗಳನ್ನು ನಡೆಸಲಾಗಿದೆ. ಇದೀಗ ರಾಜಧಾನಿಯಲ್ಲಿ ಕರೋನಾ (Coronavirus) ಸಕ್ರಿಯ ಪ್ರಕರಣಗಳ ಸಂಖ್ಯೆ 200 ಕ್ಕಿಂತ ಹೆಚ್ಚಾಗಿದೆ. ಅದೇ ಸಮಯದಲ್ಲಿ, 55 ಜನರು ಆಕ್ಸಿಜನ್ ಸಪೋರ್ಟ್ ನಲ್ಲಿದ್ದಾರೆ.
ಸಕ್ರಿಯ ಪ್ರಕರಣಗಳು ಸಹ ಹೆಚ್ಚಾಗುತ್ತವೆ :
ಹೊಸ ಕರೋನಾ (COVID-19) ಪ್ರಕರಣಗಳ ಹೆಚ್ಚಳದೊಂದಿಗೆ, ಸಕ್ರಿಯ ಪ್ರಕರಣಗಳು ಸಹ ಹೆಚ್ಚುತ್ತಿವೆ. ಪ್ರಸ್ತುತ, ದೇಶದಲ್ಲಿ 82,402 ರೋಗಿಗಳು ಕರೋನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಸ್ತುತ, ಚೇತರಿಕೆಯ ಪ್ರಮಾಣವು 98.38% ಆಗಿದೆ. ಇಲ್ಲಿಯವರೆಗೆ ಒಟ್ಟು 4,80,860 ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಮಧ್ಯೆ, ಓಮಿಕ್ರಾನ್ ರೂಪಾಂತರಗಳ ಪ್ರಕರಣಗಳ ಹೆಚ್ಚಳ ಕೂಡಾ ಆತಂಕವನ್ನು ಹೆಚ್ಚಿಸುತ್ತಿದೆ.
ಇದನ್ನೂ ಓದಿ : ಮುಂಬೈನಲ್ಲಿ ಕೇವಲ 24 ಗಂಟೆಗಳಲ್ಲಿ ಶೇ 82 ರಷ್ಟು ಕೊರೊನಾ ಪ್ರಕರಣಗಳ ಹೆಚ್ಚಳ
ಯೂನಿಯನ್ ಹೆಲ್ತ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ 7,486 ರೋಗಿಗಳು ಗುಣಮುಖರಾಗಿದ್ದಾರೆ. ಆದರೆ, ಇದುವರೆಗೆ ಒಟ್ಟು 3,42,58,778 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೈನಂದಿನ ಪಾಸಿಟಿವಿಟಿ ದರವು 1.10 ಪ್ರತಿಶತವಾಗಿದ್ದರೆ ವಾರದ ಧನಾತ್ಮಕತೆಯ ದರವು 0.76 ಪ್ರತಿಶತವಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.