ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ಒಟ್ಟು 18,257 ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಅಷ್ಟೇ ಅಲ್ಲದೆ, ಈ ಅಪಾಯಕಾರಿ ವೈರಸ್‌ನಿಂದ 42 ಜನರು ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ, ದೇಶದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 4,36,22,651 ಕ್ಕೆ ಏರಿದೆ.


COMMERCIAL BREAK
SCROLL TO CONTINUE READING

ಕೇಂದ್ರ ಆರೋಗ್ಯ ಇಲಾಖೆಯ ಪ್ರಕಾರ, ದೇಶದಲ್ಲಿ ಕೋವಿಡ್ -19 ಸಕ್ರಿಯ ಪ್ರಕರಣಗಳು 1,28,690 ಕ್ಕೆ ಏರಿದೆ. ಕಳೆದ ದಿನಕ್ಕೆ ಹೋಲಿಸಿದರೆ ದೇಶದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಸ್ವಲ್ಪ ಇಳಿಕೆಯಾಗಿದೆ. ಶನಿವಾರ ದೇಶದಲ್ಲಿ 18,840 ಹೊಸ ಪ್ರಕರಣಗಳು ದಾಖಲಾಗಿವೆ.


ಇದನ್ನೂ ಓದಿ: Gold-Sliver Price: ಇಂದು ದೇಶದಲ್ಲಿ ಹೇಗಿದೆ ಚಿನ್ನ-ಬೆಳ್ಳಿ ದರ? ಇಲ್ಲಿದೆ ನೋಡಿ ಸಂಪೂರ್ಣ ವಿವರ


ದೆಹಲಿ-ಮಹಾರಾಷ್ಟ್ರದಲ್ಲಿ ಕೋವಿಡ್ ಸ್ಥಿತಿ: 
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ಕಳೆದ 24 ಗಂಟೆಗಳಲ್ಲಿ 544 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ ಇಬ್ಬರು ರೋಗಿಗಳು ಸಾವನ್ನಪ್ಪಿದ್ದಾರೆ. ಜೊತೆಗೆ ಮಹಾರಾಷ್ಟ್ರದಲ್ಲಿ ಒಂದೇ ದಿನದಲ್ಲಿ 2760 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಐದು ಜನರು ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿನ ಬಗ್ಗೆ ಎರಡೂ ರಾಜ್ಯಗಳ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ದೆಹಲಿಯ ಆರೋಗ್ಯ ಇಲಾಖೆಯ ಪ್ರಕಾರ, ಸತತ ಮೂರನೇ ದಿನ, ದೆಹಲಿಯಲ್ಲಿ 500 ರಿಂದ 600 ಸೋಂಕಿನ ಪ್ರಕರಣಗಳು ವರದಿಯಾಗಿವೆ.


ಇದನ್ನೂ ಓದಿ: ಧುಮ್ಮುಕ್ಕಿ ಹರಿಯುತ್ತಿದೆ ಗೋಕಾಕ್‌ ಫಾಲ್ಸ್‌: ಜನಮನ ಸೆಳೆಯುತ್ತಿದೆ ಜಲಪಾತದ ವೈಯಾರ


ದೆಹಲಿಯಲ್ಲಿ ಕಂಡುಬಂದ ರೂಪಾಂತರಿ ಪ್ರಕರಣ: 
ಕೊರೊನಾ ವೈರಸ್‌ನ ಓಮಿಕ್ರಾನ್ ರೂಪಾಂತರದ ಹೊಸ ಉಪ-ವೇರಿಯಂಟ್ BA.2.75 ಭಾರತದಲ್ಲಿ ಪತ್ತೆಯಾಗಿದೆ ಎಂದು ಡಬ್ಲ್ಯೂಹೆಚ್‌ಒ ಹೇಳಿದೆ. ದೆಹಲಿಯಲ್ಲಿ ಓಮಿಕ್ರಾನ್‌ನ ಹೆಚ್ಚು ಸಾಂಕ್ರಾಮಿಕ ಉಪವಿಭಾಗಗಳಾದ BA-4 ಮತ್ತು BA.5 ಪ್ರಕರಣಗಳು ಕಂಡುಬಂದಿವೆ. ಆದರೆ ಇದು ಗಂಭೀರವಾದ ಸೋಂಕುಗಳಿಗೆ ಕಾರಣವಾಗದ ಕಾರಣ ಭಯಪಡುವ ಅಗತ್ಯವಿಲ್ಲ ಎಂದು ತಜ್ಞರು ಹೇಳಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ