`Work From Home`ಗೆ ಸಂಬಂಧಿಸಿದಂತೆ ಹೊಸ ಸೂಚನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ
Corona New Instructions - ಕೊರೊನಾ (Covid-19) ಕಾರಣ ಕೇಂದ್ರ ಸರ್ಕಾರಿ ನೌಕರರಿಗೆ ಮನೆಯಿಂದಲೇ ಕಾರ್ಯನಿರ್ವಹಿಸಲು ಸೂಚಿಸಲಾಗಿತ್ತು. ಆದರೆ, ಬರುವ ಸೋಮವಾರದಿಂದ ಎಲ್ಲಾ ಸರ್ಕಾರಿ ನೌಕರರಿಗೆ ಕಚೇರಿಗೆ ಬಂದು ಹಾಜರಾಗಲು ಸೂಚಿಸಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ (Jitendra Singh) ಹೇಳಿದ್ದಾರೆ.
ನವದೆಹಲಿ: Corona New Instructions - ಸೋಮವಾರದಿಂದ ಕೇಂದ್ರ ಸರ್ಕಾರದ (Central Government Employees) ಎಲ್ಲಾ ನೌಕರರ ಕಚೇರಿ ಹಾಜರಾತಿಯನ್ನು ಪುನಃಸ್ಥಾಪಿಸಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಭಾನುವಾರ ಹೇಳಿದ್ದಾರೆ.
ಕಚೇರಿಯಲ್ಲಿ ಪೂರ್ಣ ಹಾಜರಾತಿಯನ್ನು ಪುನಃಸ್ಥಾಪಿಸಲಾಗಿದೆ
ಈ ಕುರಿತು ಮಾಹಿತಿ ನೀಡಿರುವ ಸಿಬ್ಬಂದಿ ಖಾತೆ ರಾಜ್ಯ ಸಚಿವರು, 'ಸಾಂಕ್ರಾಮಿಕ (Corona Pandemic) ಪರಿಸ್ಥಿತಿಯನ್ನು ಇಂದು ಪರಿಶೀಲಿಸಲಾಗಿದೆ ಮತ್ತು ಕೋವಿಡ್ ಪ್ರಕರಣಗಳ ಜೊತೆಗೆ ಸೋಂಕಿನ ಪ್ರಮಾಣದಲ್ಲಿನ ಇಳಿಕೆಯನ್ನು ಗಮನದಲ್ಲಿಟ್ಟುಕೊಂಡು, ನಾಳೆಯಿಂದ ಕಚೇರಿಯಲ್ಲಿ ಪೂರ್ಣ ಹಾಜರಾತಿಯನ್ನು ಪುನಃಸ್ಥಾಪಿಸಲು ನಿರ್ಧರಿಸಲಾಗಿದೆ ಮತ್ತು ಎಲ್ಲಾ ಮಟ್ಟದಲ್ಲಿ ಯಾವುದೇ ರೀತಿಯ ವಿನಾಯಿತಿ ನೀಡದೆ 7ನೇ ಫೆಬ್ರವರಿ 2022 ರಿಂದ ನಿಯಮಿತವಾಗಿ ಕಚೇರಿಯಲ್ಲಿ ಹಾಜರಿರಬೇಕು ಎಂದು ಸೂಚಿಸಲಾಗಿದೆ' ಎಂದಿದ್ದಾರೆ.
ಇದನ್ನೂ ಓದಿ-ಅಂಗೈಯಲ್ಲಿರುವ ಕೇತು ಪರ್ವತದ ಮೇಲಿನ ಈ ಚಿಹ್ನೆ ಜೀವನದಲ್ಲಿ ಸಾಕಷ್ಟು ಹಣ ತರುತ್ತದೆ
ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸಿ
'ಆದರೆ, ಇಲಾಖೆಗಳ ಮುಖ್ಯಸ್ಥರು, ನೌಕರರು ಎಲ್ಲಾ ಸಮಯದಲ್ಲೂ ಮುಖವಾಡಗಳನ್ನು ಧರಿಸುತ್ತಾರೆ ಮತ್ತು COVID ಸೂಕ್ತ ನಡವಳಿಕೆಯನ್ನು ಅನುಸರಿಸುತ್ತಾರೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು' ಎಂದು ಅವರು ಹೇಳಿದ್ದಾರೆ. ಜನವರಿ 31 ರಿಂದ ಫೆಬ್ರವರಿ 15 ರವರೆಗೆ, ಕೇಂದ್ರವು ಅಂಡರ್ ಸೆಕ್ರೆಟರಿ ಮಟ್ಟಕ್ಕಿಂತ ಕಡಿಮೆ ಇರುವ ಶೇ.50ರಷ್ಟು ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡುವ ವ್ಯವಸ್ಥೆಯನ್ನು ವಿಸ್ತರಿಸಿತ್ತು ಎಂಬುದು ಇಲ್ಲಿ ಉಲ್ಲೇಖನೀಯ.
ಇದನ್ನೂ ಓದಿ-'ಜಾಗತಿಕ ಬೆಳವಣಿಗೆಗಳಿಂದ ಉಂಟಾಗುವ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸಿದ್ಧ'
'ಮನೆಯಿಂದ ಕೆಲಸ' ಇನ್ನು ಮುಂದೆ ಆಯ್ಕೆಯಾಗಿರುವುದಿಲ್ಲ
ಸಂಬಂಧಪಟ್ಟ ವಿಭಾಗಗಳಿಂದ ಅಭಿಪ್ರಾಯ ಪಡೆದು ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಹೊಸ ಕಛೇರಿಯ ಜ್ಞಾಪಕ ಪತ್ರವನ್ನು ಹೊರಡಿಸಿದ್ದು, ನಾಳೆಯಿಂದ ಎಲ್ಲಾ ಹಂತದ ಎಲ್ಲಾ ಉದ್ಯೋಗಿಗಳು ಯಾವುದೇ ರೀತಿಯ ವಿನಾಯ್ತಿ ಇರುವುದಿಲ್ಲ ಎಂದು ಸಿಂಗ್ ಹೇಳಿದ್ದಾರೆ. ಫೆಬ್ರವರಿ 7 ರಿಂದ ಕಚೇರಿಯಲ್ಲಿ ಉಪಸ್ಥಿತಿ ಇರಲಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.
ಇದನ್ನೂ ಓದಿ-Corona ಬಹು ರೂಪಾಂತರಿ ವಿರೋಧಿ ಲಸಿಕೆ ರೆಡಿ ! ಭಾರತೀಯ ವಿಜ್ಞಾನಿಗಳ ಮತ್ತೊಂದು ಮಹತ್ತರ ಸಾಧನೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.