Corona Update India: ದೇಶದಲ್ಲಿ ಹೆಚ್ಚುತ್ತಿರುವ ಕರೋನಾ ಪ್ರಕರಣಗಳ ಮಧ್ಯೆ ದೈನಂದಿನ ಕೂಲಿ ಕಾರ್ಮಿಕರು ಮತ್ತೆ ತಮ್ಮ ಗ್ರಾಮಗಳತ್ತ ಮುಖಮಾಡುತ್ತಿರುವ (Daily wage workers return home) ದೃಶ್ಯ ದೇಶದ ಹಲವು ಭಾಗಗಳಲ್ಲಿ ಕಂಡು ಬರುತ್ತಿದೆ. ಮತ್ತೊಂದೆಡೆ, ಬೂಸ್ಟರ್ ಡೋಸ್ಗಳಿಗಾಗಿ ಲಸಿಕೆ ಕೇಂದ್ರಗಳ ಹೊರಗೆ ಉದ್ದುದ್ದ ಸಾಲುಗಳನ್ನು ನೋಡಬಹುದಾಗಿದೆ. ಹೆಚ್ಚುತ್ತಿರುವ ಕೋವಿಡ್-19 ಸೋಂಕನ್ನು ತಡೆಗಟ್ಟಲು ರಾಜ್ಯ ಸರ್ಕಾರಗಳು ಬಿಗಿ ನಿರ್ಬಂಧಗಳನ್ನು ಕೈಗೊಳ್ಳಲು ಮುಂದಾಗಿವೆ. ಈ ನಡುವೆ, ದೊಡ್ಡ ನಗರಗಳಿಂದ ಕಾರ್ಮಿಕರ ವಲಸೆ ಪ್ರಾರಂಭವಾಗಿದೆ. ಈ ಕುರಿತಂತೆ ಸುದ್ದಿ ಸಂಸ್ಥೆ ಎಎನ್ಐ ಜೊತೆ ಮಾತನಾಡಿರುವ ಚಾಲಕ ಅಮರಿಂದರ್ ಕುಮಾರ್ ಯಾದವ್, ಕರೋನಾ ನಿರ್ಬಂಧಗಳಿಂದಾಗಿ ನಮಗೆ ಕೆಲಸ ಸಿಗುತ್ತಿಲ್ಲ. ಆದಾಯವಿಲ್ಲದೆ ಬದುಕಲು ಸಾಧ್ಯವಿಲ್ಲ ಎಂದಿದ್ದಾರೆ.
ಗಮನಾರ್ಹವಾಗಿ, ಮಂಗಳವಾರ, ಭಾರತದಲ್ಲಿ ಹೊಸ ಕರೋನಾ ವೈರಸ್ ಸೋಂಕಿತ ಪ್ರಕರಣಗಳಲ್ಲಿ ಶೇಕಡಾ 6.4 ರಷ್ಟು ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,68,063 ಹೊಸ ಕರೋನಾ ಪ್ರಕರಣಗಳು (Covid-19 New Cases Today) ದಾಖಲಾಗಿದ್ದು, 277 ಜನರು ಸಾವನ್ನಪ್ಪಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈ ಮಾಹಿತಿಯನ್ನು ನೀಡಿದೆ. ಒಂದೇ ದಿನದಲ್ಲಿ 277 ಮಂದಿ ಕೊರೊನಾಗೆ ಬಲಿಯಾಗಿದ್ದು, ಇದರೊಂದಿಗೆ ಕರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 4,84,213ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು 8,21,446 ಕ್ಕೆ ಏರಿಕೆಯಾಗಿದ್ದು, ಇದರೊಂದಿಗೆ ಒಟ್ಟು ಪಾಸಿಟಿವ್ ದರವು 2.29 ಪ್ರತಿಶತಕ್ಕೆ ಏರಿದೆ.
ಇದನ್ನೂ ಓದಿ- ಕೊರೊನಾ ಪ್ರಕೋಪದ ಹಿನ್ನೆಲೆ ಈ ಬಾರಿ ಹರಿದ್ವಾರದಲ್ಲಿ ನಡೆಯಲ್ಲ ಗಂಗಾ ಸ್ನಾನ
ಕರೋನಾ ಸೋಂಕಿನಿಂದ ರಕ್ಷಣೆ ಪಡೆಯಲು ನಿನ್ನೆಯಿಂದ (ಜ.10) ದೇಶಾದ್ಯಂತ ಕರೋನಾ ಲಸಿಕೆಯ ಬೂಸ್ಟರ್ ಡೋಸ್ (Booster Dose) ನೀಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ದೇಶದ ಹಲವು ರಾಜ್ಯಗಳಲ್ಲಿ, ಬೂಸ್ಟರ್ ಡೋಸ್ ಪಡೆಯಲು ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು ಹಿರಿಯ ನಾಗರಿಕರು (Healthcare workers, frontline workers, & senior citizens) ಲಸಿಕೆ ಕೇಂದ್ರಗಳ (vaccination centres) ಹೊರಗೆ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಕೂಡ ಕಂಡು ಬಂದಿದೆ.
ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಕೂಡ ಇಂದು ಕರೋನಾ ಬೂಸ್ಟರ್ ಡೋಸ್ ತೆಗೆದುಕೊಳ್ಳಲು ಲಸಿಕೆ ಕೇಂದ್ರಕ್ಕೆ ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ನಮ್ಮ ಬೂಸ್ಟರ್ ಡೋಸ್ ತೆಗೆದುಕೊಂಡಿದ್ದೇವೆ. ಜನರು ಭಯಪಡುವ ಅಗತ್ಯವಿಲ್ಲ, ಭರವಸೆ ಬೇಕು. ಜನರಿಗೆ ಸೇವೆ ಸಲ್ಲಿಸಲು ನಮ್ಮಲ್ಲಿ ಸಾಕಷ್ಟು ಸಂಪನ್ಮೂಲಗಳಿವೆ ಎಂದು ಹೇಳಿದರು.
ಇದನ್ನೂ ಓದಿ - Arvind Kejriwal: ಹೆಚ್ಚುತ್ತಿರುವ ಕರೋನಾ ಪ್ರಕರಣಗಳ ನಡುವೆ ದೆಹಲಿ ಸಿಎಂ ಮಹತ್ವದ ಘೋಷಣೆ
ಆರೋಗ್ಯ ಸಚಿವಾಲಯದ ಪ್ರಕಾರ, ಸೋಮವಾರ ದೇಶದಲ್ಲಿ ಒಟ್ಟು 9,84,676 ಪ್ರಿಕಾಶನ್ ಡೋಸ್ಗಳನ್ನು ನೀಡಲಾಗಿದ್ದು, ಅದರಲ್ಲಿ 5,19,604 ಆರೋಗ್ಯ ಕಾರ್ಯಕರ್ತರಿಗೆ, 2,01,205 ಮುಂಚೂಣಿ ಕೆಲಸಗಾರರಿಗೆ ಮತ್ತು 60 ವರ್ಷ ಮೇಲ್ಪಟ್ಟ 2,63,867 ಜನರಿಗೆ ಬೂಸ್ಟರ್ ಡೋಸ್ ನೀಡಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.