Coronavirus ಬಿಕ್ಕಟ್ಟಿನ ನಡುವೆ ತೆರೆಯಲಿದೆಯೇ ಶಾಲಾ-ಕಾಲೇಜು? ಗೃಹ ಸಚಿವಾಲಯ ಹೇಳಿದ್ದೇನು?

ಕೊರೊನಾವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ಮಾರ್ಚ್ ಮಧ್ಯ ಭಾಗದಿಂದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ.

Last Updated : May 27, 2020, 08:50 AM IST
Coronavirus ಬಿಕ್ಕಟ್ಟಿನ ನಡುವೆ ತೆರೆಯಲಿದೆಯೇ ಶಾಲಾ-ಕಾಲೇಜು? ಗೃಹ ಸಚಿವಾಲಯ ಹೇಳಿದ್ದೇನು? title=

ನವದೆಹಲಿ: ಶಾಲೆಗಳು ಮತ್ತು ಕಾಲೇಜುಗಳನ್ನು ತೆರೆಯುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಮತ್ತು ದೇಶಾದ್ಯಂತ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಇನ್ನೂ ನಿಷೇಧವಿದೆ ಎಂದು ಕೇಂದ್ರ ಗೃಹ ಸಚಿವಾಲಯ (MHA) ಮಂಗಳವಾರ ರಾತ್ರಿ ತಿಳಿಸಿದೆ. 

ಎಲ್ಲಾ ರಾಜ್ಯಗಳಲ್ಲಿ ಶಾಲೆಗಳನ್ನು (Schools) ತೆರೆಯಲು ಸಚಿವಾಲಯವು ಅನುಮತಿ ನೀಡಿದೆ ಎಂದು ಮಾಧ್ಯಮಗಳ ಒಂದು ವಿಭಾಗದಲ್ಲಿ ವರದಿ ಬಂದಿದ್ದು ನಂತರ ಗೃಹ ಸಚಿವಾಲಯದ ವಕ್ತಾರರು  ಈ ಹೇಳಿಕೆಯನ್ನು ನೀಡಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ವಕ್ತಾರರು ಕೇಂದ್ರ ಗೃಹ ಸಚಿವಾಲಯ ಅಂತಹ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ದೇಶಾದ್ಯಂತ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಇನ್ನೂ ನಿಷೇಧವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕರೋನವೈರಸ್ (Coronavirus) ಸೋಂಕು ಹರಡುವುದನ್ನು ತಡೆಗಟ್ಟಲು ಮಾರ್ಚ್ ಮಧ್ಯ ಭಾಗದಿಂದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ. 

ಏತನ್ಮಧ್ಯೆ ದೇಶದಲ್ಲಿ  ಲಾಕ್‌ಡೌನ್ (Lockdown)‌ ನಡುವೆಯೂ ಕರೋನಾ ವೈರಸ್ ಸೋಂಕಿತರ ಸಂಖ್ಯೆ ಮಂಗಳವಾರ 1.47 ಲಕ್ಷ ತಲುಪಿದೆ. ಅದೇ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ವಲಸೆ ಕಾರ್ಮಿಕರು ಆಯಾ ರಾಜ್ಯಗಳಿಗೆ ಮರಳುವ ಕಾರಣ ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಒಡಿಶಾದಲ್ಲಿ ಕೋವಿಡ್ -19 ರೋಗಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ.

ಕಳೆದ 24 ಗಂಟೆಗಳಲ್ಲಿ, ಮಹಾರಾಷ್ಟ್ರ, ಗುಜರಾತ್ ಮತ್ತು ತಮಿಳುನಾಡಿನಲ್ಲಿ ಕರೋನಾವೈರಸ್  ಕೋವಿಡ್ -19 (Covid-19) ಸೋಂಕಿನಿಂದ ಹೆಚ್ಚು ಹಾನಿಗೊಳಗಾದ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯ ಹೊಸ ಪ್ರಕರಣಗಳು ವರದಿಯಾಗಿವೆ. ಅದೇ ಸಮಯದಲ್ಲಿ ದೆಹಲಿ, ಪಂಜಾಬ್, ಮಧ್ಯಪ್ರದೇಶ, ಛತ್ತೀಸ್‌ಗಢ, ಕೇರಳ, ಕರ್ನಾಟಕ, ಆಂಧ್ರಪ್ರದೇಶ ಮತ್ತು ಇತರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದಲೂ ಹೊಸ ಪ್ರಕರಣಗಳು ಬಂದಿವೆ.

ವಲಸೆ ಕಾರ್ಮಿಕರು ಹಿಂದಿರುಗುವ ಪ್ರದೇಶಗಳಲ್ಲಿ ತೀವ್ರ ನಿಗಾ ವಹಿಸಬೇಕು ಎಂದು ಕೆಲವು ತಜ್ಞರು ಸಲಹೆ ನೀಡಿದ್ದಾರೆ. ಆದಾಗ್ಯೂ ದೇಶದಲ್ಲಿ ಚಿಕಿತ್ಸೆಯ ನಂತರ ಕರೋನಾವೈರಸ್ ಸೋಂಕಿನಿಂದ ಮುಕ್ತರಾಗುವವರ ಪ್ರಮಾಣ ಹೆಚ್ಚುತ್ತಿದೆ ಮತ್ತು ಇದು ಅನೇಕ ದೇಶಗಳಿಗಿಂತ ಉತ್ತಮವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

Trending News