ನವದೆಹಲಿ: ದೇಶಾದ್ಯಂತ ಘೋಷಿಸಲಾಗಿರುವ ಲಾಕ್ ಡೌನ್ ಹಿನ್ನೆಲೆ ವಿವಿಧ ಕ್ಷೇತ್ರಗಳಲ್ಲಿ ಆರ್ಥಿಕ ಹಿನ್ನಡೆತ ಉಂಟಾಗುವ ಸಾಧ್ಯತೆ ಇದೆ. ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ್ಮ ನೌಕರಿ ಕಳೆದುಕೊಳ್ಳುವ ಸಾಧ್ಯತೆ ಇದೆ. ಈ ಶಂಕೆಯನ್ನು ಇತ್ತೀಚಿಗೆ ಬಿಡುಗಡೆಯಾದ ವರದಿಯೊಂದರಲ್ಲಿ ವ್ಯಕ್ತಪಡಿಸಲಾಗಿದೆ.


COMMERCIAL BREAK
SCROLL TO CONTINUE READING

ವಿಶ್ವ ವಿಮಾನಯಾನ ಸಂಘಟನೆಯೊಂದು ಈ ಕುರಿತು ವರದಿಯೋದನ್ನು ಬಿಡುಗಡೆ ಮಾಡಿದ್ದು, ಕೊರೊನಾ ವೈರಸ್ ಮಹಾಮಾರಿಯ ಹಿನ್ನೆಲೆ ಭಾರತೀಯ ವಿಮಾನಯಾನ ಕ್ಷೇತ್ರ ಹಾಗೂ ಅದಕ್ಕೆ ಸಂಬಂಧಿಸಿದ ಉದ್ಯೋಗಗಳಲ್ಲಿ 29 ಲಕ್ಷಕ್ಕೂ ಅಧಿಕ ನೌಕರಿಗಳು ಆತಂಕ ಎದುರಿಸುತ್ತಿವೆ ಎಂದು ಹೇಳಿದೆ.


ಕೊರೊನಾ ವೈರಸ್ ಪ್ರಕೋಪವನ್ನು ತಡೆಯಲು ದೇಶಾದ್ಯಂತ ಮೇ 3ರವರೆಗೆ ಘೋಷಿಸಲಾಗಿರುವ ಲಾಕ್ ಡೌನ್ ಹಿನ್ನೆಲೆ ವಾಣಿಜ್ಯಾತ್ಮಕ ವಿಮಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.


ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ವಿಮಾನಯಾನ ಸಂಘಟನೆ (IATA) ಬಿಡುಗಡೆಗೊಳಿಸಿರುವ ವರದಿಯೊಂದರ ಪ್ರಕಾರ ಏಷ್ಯಾ-ಪೆಸಿಫಿಕ್ ಕ್ಷೇತ್ರದಲ್ಲಿ ಕೊರೊನಾ ವೈರಸ್ ಮಹಾಮಾರಿಯ ಪ್ರಕೋಪ ಹೆಚ್ಚಾಗುತ್ತಿರುವುದರಿಂದ ಭಾರತದ ಮೇಲೆ ಇದು ಹೆಚ್ಚಿನ ಪ್ರಭಾವ ಬೀರುತ್ತಿದೆ ಎಂದು ಹೇಳಿದೆ. ಮಹಾಮಾರಿ ಹಾಗೂ ಲಾಕ್ ಡೌನ್ ಆರ್ಥಿಕ ಚಟುವಟಿಕೆಗಳ ಮೇಲೆ ಭಾರಿ ಪ್ರಭಾವ ಬೀರಿದ್ದು, ಇದರಿಂದ ವಿಮಾನಯಾನ ಕ್ಷೇತ್ರ ಹಾಗೂ ಪ್ರವಾಸೋದ್ಯಮ ಅತಿ ಹೆಚ್ಚು ಪ್ರಭಾವಕ್ಕೆ ಒಳಗಾಗಿವೆ ಎಂದು ಹೇಳಿದೆ.


PTIನಲ್ಲಿ ಪ್ರಕಟಗೊಂಡ ಒಂದು ವರದಿಯ ಪ್ರಕಾರ ಕೊರೊನಾ ವೈರಸ್ ಮಹಾಮಾರಿಯ ಹಿನ್ನೆಲೆ ಭಾರತದಲ್ಲಿ ವಿಮಾನಯಾನ ಕ್ಷೇತ್ರ ಮತ್ತು ಅದಕ್ಕೆ ಸಂಬಂಧಿಸಿದ ಉದ್ಯೋಗಗಳಲ್ಲಿ 29,32,900 ನೌಕರಿಗಳು ಸಂಕಷ್ಟ ಎದುರಿಸುತ್ತಿವೆ ಎಂದು IATA ಶಂಕೆ ವ್ಯಕ್ತಪಡಿಸಿದೆ ಎನ್ನಲಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ವಿಮಾನ ಕಂಪನಿಗಳ ಆದಾಯದಲ್ಲಿ 85,000 ಕೋಟಿ ರೂ.ಗಿಂತ ಹೆಚ್ಚಿನ ಹೊಡೆತ ಬಿದ್ದಿದ್ದು, 2019ರ ಹೋಲಿಕೆಯಲ್ಲಿ ಯಾತ್ರೆಯಿಂದ ಬರುವ ಆದಾಯಕ್ಕಿಂತ ಕಡಿಮೆಯಾಗಿದೆ ಎಂದು ಸಂಘಟನೆ ಹೇಳಿದೆ.


IATA ಸುಮಾರು 29೦ ವಿಮಾನಯಾನ ಕಂಪನಿಗಳನ್ನು ಹೊದಿರುವ ಒಂದು ಸಂಘಟನೆಯಾಗಿದೆ. ಇದರಲ್ಲಿ ಭಾತೀಯ ವಿಮಾನಯಾನ ಕಂಪನಿಗಲಾಗಿರುವ ಏರ್ ಇಂಡಿಯಾ, ವಿಸ್ತಾರಾ, ಇಂಡಿಗೋ ಹಾಗೂ ಸ್ಪೈಸ್ ಜೆಟ್ ಗಳೂ ಕೂಡ ಶಾಮೀಲಾಗಿವೆ.