ನವದೆಹಲಿ : ಕೊರೋನಾ ಮೂರನೇ ಅಲೆ ಶಾಂತವಾದ ನಂತರ, ಜನ ಮತ್ತೆ ಟ್ರ್ಯಾಕ್‌ಗೆ ಮರಳುತ್ತಿದ್ದಾರೆ.ಆದ್ರೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಕೊರೋನಾ ಆತಂಕ ಶುರುವಾಗಿದೆ.


COMMERCIAL BREAK
SCROLL TO CONTINUE READING

ಹೌದು, ದೆಹಲಿಯಲ್ಲಿ ಕಳೆದ ಮೂರು ದಿನಗಳಿಂದ ಒಂದು ಸಾವಿರಕ್ಕೂ ಹೆಚ್ಚು ಹೊಸ ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ, 1083 ಹೊಸ ಪ್ರಕರಣಗಳು ವರದಿಯಾಗಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ, ಆದರೆ ಪಾಸಿಟಿವ್ ರೇಟ್ ಪ್ರಮಾಣವು 4.48 ಕ್ಕೆ ತಲುಪಿದೆ. ಇದರ ಮಧ್ಯ, 812 ರೋಗಿಗಳು ಗುಣಮುಖರಾಗಿದ್ದಾರೆ. ಇದರೊಂದಿಗೆ ಸಕ್ರಿಯ ರೋಗಿಗಳ ಸಂಖ್ಯೆ 3975 ಕ್ಕೆ ಏರಿದೆ.


ಇದನ್ನೂ ಓದಿ : ಲಖಿಂಪುರ ಖೇರಿ ಪ್ರಕರಣ: ಆಶಿಶ್ ಮಿಶ್ರಾ ನ್ಯಾಯಾಲಯದ ಮುಂದೆ ಶರಣು


ದೆಹಲಿಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ಪತ್ತೆ


ಶನಿವಾರ ದೆಹಲಿಯಲ್ಲಿ 1,094 ಹೊಸ ಪ್ರಕರಣಗಳು ವರದಿಯಾಗಿವೆ. ಈ ಇಬ್ಬರು ರೋಗಿಗಳು ಸಾವನ್ನಪ್ಪಿದ್ದಾರೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಸೋಂಕಿನ ಪ್ರಮಾಣದಲ್ಲಿ ಸ್ಥಿರವಾದ ಏರಿಕೆ ಕಂಡುಬಂದಿದೆ. ಇದೀಗ ಆಸ್ಪತ್ರೆಗೆ ಬರುವ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, ಜನರ ಪಾಲಿಗೆ ಸಮಾಧಾನದ ಸುದ್ದಿಯಾಗಿದೆ.


ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳಿಗೆ ಕರೆ ನೀಡಿದ್ದಾರೆ.  ಮನ್ ಕಿ ಬಾತ್ ನಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಈದ್, ಅಕ್ಷಯ ತೃತೀಯ, ಪರಶುರಾಮನ ಜನ್ಮದಿನ ಮತ್ತು ವೈಶಾಖ ಬುದ್ಧ ಪೂರ್ಣಿಮೆಯ ಆಚರಣೆಗಳು ಬರಲಿವೆ. ಈ ಹಬ್ಬಗಳನ್ನು ಅತ್ಯಂತ ಸಡಗರದಿಂದ ಮತ್ತು ಸೌಹಾರ್ದತೆಯಿಂದ ಆಚರಿಸಿ, ಆದರೆ ಇದೆಲ್ಲದರ ನಡುವೆ ಎಲ್ಲರೂ ಕೊರೋನಾ ಬಗ್ಗೆ ಎಚ್ಚರದಿಂದಿರಬೇಕು ಎಂದು ಹೇಳಿದರು.


ಇದನ್ನೂ ಓದಿ : ಹನುಮಾನ್ ಚಾಲೀಸಾ ವಿವಾದ: ರಾಣಾ ದಂಪತಿಗೆ 14ದಿನ ಜೈಲು ಶಿಕ್ಷೆ ನೀಡಿದ ಕೋರ್ಟ್‌


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.