Covid19 Cases in India : ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ಪ್ರಕರಣಗಳಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಕಳೆದ ಕೆಲವು ವರ್ಷಗಳಿಂದ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಇದೇ ಮೊದಲು. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಜೂನ್ ವೇಳೆಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗರಿಷ್ಠ ಮಟ್ಟ ತಲುಪುವುದು ಖಚಿತ. ಕಳೆದ 24 ಗಂಟೆಗಳಲ್ಲಿ 10,000 ಕ್ಕೂ ಹೆಚ್ಚು ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಒಟ್ಟು ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 44,998 ಕ್ಕೆ ತಲುಪಿದೆ. ಇದರಿಂದ ಸಾರ್ವಜನಿಕರ ಆತಂಕ ಹೆಚ್ಚುತ್ತಿದೆ.


COMMERCIAL BREAK
SCROLL TO CONTINUE READING

ನಿನ್ನೆ, ದೇಶದಲ್ಲಿ 7,830 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಒಂದೇ ದಿನದಲ್ಲಿ ಹತ್ತು ಸಾವಿರ ದಾಟುತ್ತಿದ್ದಂತೆ ನಾಲ್ಕನೇ ಅಲೆ ತಲುಪುವ ಲಕ್ಷಣಗಳಿವೆ. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲು ಜನರಿಗೆ ಸೂಚಿಸಲಾಗಿದೆ. ಇನ್ನು 10-12 ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ಹೇಳಲಾಗುತ್ತಿದೆ. ಈ ಸ್ಥಿತಿಗೆ Omicron ಸಬ್‌ವೇರಿಯಂಟ್ XBB.1.16 ಕಾರಣವಾಗಿದೆ.


ಇದನ್ನೂ ಓದಿ: White Crow Video: ನೀವು ಎಂದಾದ್ರೂ ಬಿಳಿ ಕಾಗೆ ನೋಡಿದ್ದೀರಾ? ಭಾರತದಲ್ಲಿ ಮೊದಲ ಬಾರಿಗೆ ಕಾಣಿಸಿತು ಈ ಅಪರೂಪದ ಪಕ್ಷಿ


ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು ಶೇಕಡಾ 0.10 ರಷ್ಟಿದ್ದರೆ, ಚೇತರಿಕೆಯ ಪ್ರಮಾಣವು ಶೇಕಡಾ 98.71 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 5,356 ಜನರು ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡಿದ್ದಾರೆ, ಇದುವರೆಗೆ 4,42,10,127 ಜನರು ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ 10,158 ಹೊಸ ಪ್ರಕರಣಗಳು ವರದಿಯಾಗಿವೆ. 


ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 2,29,958 ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದುವರೆಗೆ 92.34 ಕೋಟಿ ಜನರನ್ನು ಪರೀಕ್ಷಿಸಲಾಗಿದೆ. ಮತ್ತೊಂದೆಡೆ, ಕೋವಿಡ್ ಲಸಿಕೆ ಪ್ರಕ್ರಿಯೆಯನ್ನು ತೀವ್ರಗೊಳಿಸಲಾಗಿದೆ. ದೇಶದಲ್ಲಿ ಇದುವರೆಗೆ 220.66 ಕೋಟಿ ಲಸಿಕೆ ಡೋಸ್ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 327 ಡೋಸ್ ಲಸಿಕೆ ನೀಡಲಾಗಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.