ನವದೆಹಲಿ: ಕೊರೊನಾ ವೈರಸ್ ನಿಂದಾಗಿ ಮುಂದೂಡಲ್ಪಟ್ಟಿರುವ ಭಾರತ-ಯುರೋಪ್ ಒಕ್ಕೂಟ ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಲ್ಜಿಯಂನ ರಾಜಧಾನಿ ಬ್ರಸೆಲ್ಸ್ ಗೆ ತೆರಳುವುದಿಲ್ಲ ಎಂದು ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ.


COMMERCIAL BREAK
SCROLL TO CONTINUE READING

'ಭಾರತ-ಯುರೋಪ್ ಒಕ್ಕೂಟ ಶೃಂಗಸಭೆಗೆ ಸಂಬಂಧಿಸಿದಂತೆ, ಪ್ರಧಾನಿ ಮೋದಿ ಹಾಜರಾಗಬೇಕಾಗಿತ್ತು, ಎರಡೂ ದೇಶಗಳ ಆರೋಗ್ಯ ಅಧಿಕಾರಿಗಳು ಪ್ರಸ್ತುತ ಪ್ರಯಾಣ ನಡೆಯಬಾರದು ಎಂದು ಸೂಚಿಸಿದ್ದರಿಂದಾಗಿ,ಶೃಂಗಸಭೆಯನ್ನು ಪರಸ್ಪರ ಅನುಕೂಲಕರ ದಿನಾಂಕದಂದು ಮರು ನಿಗದಿಪಡಿಸಲಾಗಿದೆ ಎಂದು ನಿರ್ಧರಿಸಲಾಗಿದೆ' ಎಂದು ವಿದೇಶಾಂಗ ಇಲಾಖೆವಕ್ತಾರ ರವೀಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.


"ಯುರೋಪ್ ಒಕ್ಕೂಟ ಮತ್ತು ಭಾರತದ ನಡುವಿನ ನಿಕಟ ಸಹಕಾರದ ಉತ್ಸಾಹದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ, ಅವರು ಜಾಗತಿಕ ಆರೋಗ್ಯದ ಬಗ್ಗೆ ಒಂದೇ ರೀತಿಯ ಕಾಳಜಿ ಮತ್ತು ಬದ್ಧತೆಯನ್ನು ಹಂಚಿಕೊಳ್ಳುತ್ತಾರೆ ಮತ್ತು ಕೊರೊನಾ ವೈರಸ್ ಶೀಘ್ರದಲ್ಲೇ ನಿಯಂತ್ರಣಕ್ಕೆ ಬರಲಿದೆ ಎಂದು ಭಾವಿಸುತ್ತೇವೆ" ಎಂದು ಅವರು ಹೇಳಿದರು.


ಬ್ರಸೆಲ್ಸ್‌ನಲ್ಲಿನ ಯುರೋಪಿಯನ್ ಒಕ್ಕೂಟದಲ್ಲಿ ಕೆಲಸ ಮಾಡುತ್ತಿರುವ ಕನಿಷ್ಠ ಇಬ್ಬರು ಸಿಬ್ಬಂದಿ ಕರೋನವೈರಸ್ ಧನಾತ್ಮಕ ಪರೀಕ್ಷೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಯುರೋಪಿಯನ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಚೀನಾದಲ್ಲಿ ವೈರಸ್ ಸ್ಫೋಟಗೊಂಡಾಗಿನಿಂದ ವಿಶ್ವದಾದ್ಯಂತ 90,000 ಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ ಮತ್ತು ಸುಮಾರು 3,200 ಜನರು ಸಾವನ್ನಪ್ಪಿದ್ದಾರೆ.