Coronavirus : ರಾಜಸ್ಥಾನದಲ್ಲಿ Section 144 ವಿಸ್ತರಣೆ
ದೇಶದ ಕೆಲವು ರಾಜ್ಯಗಳಲ್ಲಿ ಕರೋನಾವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಈ ರಾಜ್ಯಗಳಲ್ಲಿ ಮಹಾರಾಷ್ಟ್ರ, ಪಂಜಾಬ್, ಗುಜರಾತ್ ಮತ್ತು ಕೇರಳ ಮುಂಚೂಣಿಯಲ್ಲಿವೆ. ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 39 ಸಾವಿರಕ್ಕೂ ಹೆಚ್ಚು ಕರೋನಾ ಸೋಂಕು ಪ್ರಕರಣಗಳು ವರದಿಯಾಗಿವೆ ಎಂದು ತಿಳಿದು ಬಂದಿದೆ.
Section 144 Imposed in Rajasthan: ದೇಶದ ಕೆಲವು ರಾಜ್ಯಗಳಲ್ಲಿ ಕರೋನಾವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಈ ರಾಜ್ಯಗಳಲ್ಲಿ ಮಹಾರಾಷ್ಟ್ರ, ಪಂಜಾಬ್, ಗುಜರಾತ್ ಮತ್ತು ಕೇರಳ ಮುಂಚೂಣಿಯಲ್ಲಿವೆ. ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 39 ಸಾವಿರಕ್ಕೂ ಹೆಚ್ಚು ಕರೋನಾ ಸೋಂಕು ಪ್ರಕರಣಗಳು ವರದಿಯಾಗಿವೆ ಎಂದು ತಿಳಿದು ಬಂದಿದೆ.
ಈ ಹಿನ್ನಲೆಯಲ್ಲಿ ಹೆಚ್ಚುತ್ತಿರುವ ಕರೋನಾ ಪ್ರಕರಣಗಳನ್ನು ನಿಯಂತ್ರಿಸಲು ಹಲವು ರಾಜ್ಯಗಳಲ್ಲಿ ಲಾಕ್‌ಡೌನ್, ರಾತ್ರಿ ಕರ್ಫ್ಯೂ ಮತ್ತು ಸೆಕ್ಷನ್ 144 (Section 144) ಅನ್ನು ಜಾರಿಗೆ ತರಲಾಗಿದೆ. ಈ ಮಧ್ಯೆ ರಾಜಸ್ಥಾನ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದ್ದು ರಾಜಸ್ಥಾನದಲ್ಲಿ (Rajasthan) ಸೆಕ್ಷನ್ 144 ಅನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ - Covid 2nd wave ನಿಯಂತ್ರಿಸಲು ಪೂರ್ವಸಿದ್ಧತೆ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ರಾಜ್ಯದಲ್ಲಿ ಹೆಚ್ಚುತ್ತಿರುವ ಕರೋನಾ (Coronavirus) ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ರಾಜಸ್ಥಾನ ಸರ್ಕಾರ ಏಪ್ರಿಲ್ 21 ರವರೆಗೆ ಸೆಕ್ಷನ್ 144ಅನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಹಿನ್ನಲೆಯಲ್ಲಿ ಮಾರ್ಚ್ 22 ರಿಂದ ಏಪ್ರಿಲ್ 21 ರವರೆಗೆ ರಾಜಸ್ಥಾನದಲ್ಲಿ ಕೆಲವು ನಿರ್ಬಂಧಗಳು ಜಾರಿಯಲ್ಲಿರುತ್ತವೆ.
ಇದನ್ನೂ ಓದಿ - Covid-19 ಜಾಸ್ತಿಯಾಗದಂತೆ ಎಚ್ಚರ ವಹಿಸೋಣ: ಸಚಿವ ಎಸ್.ಟಿ. ಸೋಮಶೇಖರ್
ಮಹಾರಾಷ್ಟ್ರದ ಅನೇಕ ನಗರಗಳು ಮತ್ತು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಮತ್ತು ಲಾಕ್‌ಡೌನ್ (Lockdown) ಜಾರಿಗೆ ತರಲಾಗಿದೆ. ಅದೇ ಸಮಯದಲ್ಲಿ, ಪಂಜಾಬ್ನ 9 ನಗರಗಳಲ್ಲಿ ರಾತ್ರಿ ಕರ್ಫ್ಯೂ ಅವಧಿಯನ್ನು 2 ಗಂಟೆಗಳವರೆಗೆ ವಿಸ್ತರಿಸಲಾಗಿದೆ. ಕರೋನಾ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ತಮ್ಮ ಸರ್ಕಾರ ಈ ನಿರ್ಧಾರ ಕೈಗೊಂಡಿರುವುದಾಗಿ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೇಳಿದ್ದಾರೆ. ಅದೇ ಸಮಯದಲ್ಲಿ, ರಾಜಧಾನಿ ದೆಹಲಿಯಲ್ಲಿ ಕರೋನಾ ಪ್ರಕರಣಗಳು ಮತ್ತೊಮ್ಮೆ ಹೆಚ್ಚುತ್ತಿವೆ, ಈ ಕಾರಣದಿಂದಾಗಿ ಕೇಜ್ರಿವಾಲ್ ಸರ್ಕಾರವೂ ಸಹ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.