Coronavirus: ಈ ರಾಜ್ಯದ ನಿರುದ್ಯೋಗಿ ಶಿಕ್ಷಕರಿಗೆ ಸರ್ಕಾರದಿಂದ ಸಿಗಲಿದೆ 2000 ರೂ, ಹಣ, 25 ಕೆಜಿ ಅಕ್ಕಿ

ಕರೋನಾ ಯುಗದಲ್ಲಿ ಉದ್ಯೋಗ ಕಳೆದುಕೊಂಡ ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿಗೆ ಸಹಾಯ ಮಾಡಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ. ಆರ್ಥಿಕ ಸಹಾಯದ ಜೊತೆಗೆ, ಅಂತಹ ಶಿಕ್ಷಕರಿಗೆ ಪ್ರತಿ ತಿಂಗಳು ಉಚಿತ ಪಡಿತರವನ್ನು ನೀಡಲಾಗುವುದು ಎಂದು ಹೇಳಲಾಗುತ್ತಿದೆ.

Written by - Yashaswini V | Last Updated : Apr 9, 2021, 07:35 AM IST
  • ಖಾಸಗಿ ಶಾಲಾ ಶಿಕ್ಷಕರಿಗೆ ಸಂಬಂಧಿಸಿದಂತೆ ಕೆಸಿಆರ್ ಸರ್ಕಾರದ ಮಹತ್ವದ ಹೆಜ್ಜೆ
  • ಶಿಕ್ಷಕರಿಗೆ ಪ್ರತಿ ತಿಂಗಳು ಸಿಗಲಿದೆ ಧನ ಸಹಾಯ
  • ಧನ ಸಹಾಯದ ಜೊತೆಗೆ ಉಚಿತ ಪಡಿತರವನ್ನು ವಿತರಿಸಲು ಸರ್ಕಾರದ ನಿರ್ಧಾರ
Coronavirus: ಈ ರಾಜ್ಯದ ನಿರುದ್ಯೋಗಿ ಶಿಕ್ಷಕರಿಗೆ ಸರ್ಕಾರದಿಂದ ಸಿಗಲಿದೆ 2000 ರೂ, ಹಣ, 25 ಕೆಜಿ ಅಕ್ಕಿ  title=
Private School Teachers

ಹೈದರಾಬಾದ್: ಕರೋನಾ ಸಾಂಕ್ರಾಮಿಕ ಯುಗದಲ್ಲಿ ಉದ್ಯೋಗ ಕಳೆದುಕೊಂಡ ಖಾಸಗಿ ಶಾಲೆಗಳ ಶಿಕ್ಷಕರಿಗೆ ನೆರವಾಗಲು ತೆಲಂಗಾಣದ ಸರ್ಕಾರ ಮುಂದಾಗಿದೆ. ಕರೋನಾ ಯುಗದಲ್ಲಿ ಉದ್ಯೋಗ ಕಳೆದುಕೊಂಡ ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿಗೆ ಸಹಾಯ ಮಾಡಲು ಮುಂದಾಗಿರುವ ಕೆಸಿಆರ್ ಸರ್ಕಾರ ಅಂತಹ ಶಿಕ್ಷಕರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಧನ ಸಹಾಯದ ಜೊತೆಗೆ 25 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ.

ಕೆಸಿಆರ್ ಸರ್ಕಾರ ಮಹತ್ವದ ಹೆಜ್ಜೆ :
ದೇಶಾದ್ಯಂತ ಕರೋನಾವೈರಸ್ ಎರಡನೇ ಅಲೆಯು (Corona Second Wave) ಎಲ್ಲರಲ್ಲೂ ತಲ್ಲಣ ಸೃಷ್ಟಿಸಿದೆ. ಕಳೆದ ವರ್ಷ ಕಾಣಿಸಿಕೊಂಡ ಕರೋನಾ ಸಾಂಕ್ರಾಮಿಕದಿಂದಾಗಿ ಜಾರಿಗೆ ತರಲಾಗಿದ್ದ ಲಾಕ್‌ಡೌನ್‌ನಿಂದಾಗಿ ಸಾಕಷ್ಟು ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡಿರುವ ಜನರಲ್ಲಿ ಖಾಸಗಿ ಶಾಲೆಗಳ ಶಿಕ್ಷಕರು ಕೂಡ ಸೇರಿದ್ದಾರೆ. ಇದೀಗ ಕರೋನಾ ಎರಡನೇ ಅಲೆ ಪರಿಸ್ಥಿತಿಯನ್ನು ಇನ್ನೂ ಹದಗೆಡಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ತೆಲಂಗಾಣದ ಖಾಸಗಿ ಶಾಲೆಗಳ ಶಿಕ್ಷಕರಿಗೆ ನೆರವಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ (ಕೆಸಿಆರ್) ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ಇದನ್ನೂ ಓದಿ-  Coronavirus Update : ಭಾರತ ಪ್ರಯಾಣಿಕರಿಗೆ ನಿಷೇಧ ಹೇರಿದ ನ್ಯೂಜಿಲೆಂಡ್ ಸರ್ಕಾರ..!

ಶಿಕ್ಷಕರಿಗೆ ಸರ್ಕಾರದ ನೆರವು:
ತೆಲಂಗಾಣದ ಮಾನ್ಯತೆ ಪಡೆದ ಖಾಸಗಿ ಶಾಲೆಗಳ (Private Schools) ಶಿಕ್ಷಕರು ಮತ್ತು ಇತರ ಸಿಬ್ಬಂದಿಗೆ ತಮ್ಮ ಸರ್ಕಾರ ಸಹಾಯ ಮಾಡುವುದಾಗಿ ಕೆಸಿಆರ್ ಸರ್ಕಾರ ಘೋಷಿಸಿದೆ. ಅಂತಹ ಎಲ್ಲ ಜನರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಧನ ಸಹಾಯದ ಜೊತೆಗೆ 25 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು. ಈ ಸಹಾಯ ಪಡೆಯಲು ಶಿಕ್ಷಕರು ಮತ್ತು ಇತರ ಸಿಬ್ಬಂದಿ ತಮ್ಮ ಜಿಲ್ಲೆಯ ಡಿಎಂ ಅವರನ್ನು ಸಂಪರ್ಕಿಸಬೇಕಾಗುತ್ತದೆ. ಈ ಸಂದರ್ಭದಲ್ಲಿ ಅವರು ತಮ್ಮ ಬ್ಯಾಂಕ್ ಖಾತೆ ಮತ್ತು ಇತರ ಅಗತ್ಯ ಮಾಹಿತಿಯನ್ನು ಡಿಎಂ ಕಚೇರಿಗೆ ಸಲ್ಲಿಸಬೇಕಾಗುತ್ತದೆ ಎಂದು ಹೇಳಲಾಗಿದೆ.

ಶುಕ್ರವಾರ ಬೆಳಿಗ್ಗೆ 11.30 ಕ್ಕೆ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಶಿಕ್ಷಣ ಸಚಿವ ಸಬಿತಾ ಇಂದ್ರ ರೆಡ್ಡಿ, ಸಚಿವ ಗಂಗುಲಾ ಕಮಲಕರ್ ಮತ್ತು ರಾಜ್ಯ ಸರ್ಕಾರದ ಮುಖ್ಯ ಸಲಹೆಗಾರ ರಾಜೀವ್ ಶರ್ಮಾ ಅವರಿಗೆ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ. ಇದರಲ್ಲಿ ಎಲ್ಲಾ ಜಿಲ್ಲೆಗಳ ಡಿಎಂ, ಜಿಲ್ಲಾ ಶಿಕ್ಷಣ ಅಧಿಕಾರಿ ಮತ್ತು ಸರಬರಾಜು ಇಲಾಖೆಯ ಅಧಿಕಾರಿ ಹಾಜರಿರಬೇಕು. ಈ ಸಭೆಯಲ್ಲಿ ಖಾಸಗಿ ಶಾಲೆಗಳ ಸಿಬ್ಬಂದಿಗೆ ಸಹಾಯ ಮಾಡುವ ಯೋಜನೆಯ ಬಗ್ಗೆ ಸೂಚನೆಗಳನ್ನು ನೀಡಲಾಗುವುದು ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ-  Coronavirus: 24 ಗಂಟೆಯಲ್ಲಿ 1.26 ಲಕ್ಷ ಪ್ರಕರಣ ವರದಿ, 685 ಮಂದಿ ಸಾವು

ಒಂದೂವರೆ ಲಕ್ಷ ಶಿಕ್ಷಕರಿಗೆ ಪರಿಹಾರ :
ಸಿಎಂ ಕೆ ಚಂದ್ರಶೇಖರ್ ರಾವ್ ಮಾತನಾಡಿ, ಬೇರೆ ವರ್ಗಗಳಂತೆ ಖಾಸಗಿ ಶಾಲೆಗಳ ಶಿಕ್ಷಕರು ಸಹ ಕರೋನಾ ಯುಗದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ.  ಅಂತಹ ಪರಿಸ್ಥಿತಿಯಲ್ಲಿ ಅವರಿಗೆ ಸಹಾಯ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ತಮ್ಮ ಸರ್ಕಾರದ ಈ ಹೆಜ್ಜೆಯಿಂದ ರಾಜ್ಯದ ಒಂದೂವರೆ ಲಕ್ಷ ಶಿಕ್ಷಕರು ಮತ್ತು ಇತರ ನೌಕರರಿಗೆ ಪರಿಹಾರ ಸಿಗಲಿದೆ ಎಂದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News