ನವದೆಹಲಿ: ಕೇಂದ್ರೀಯ ತನಿಖಾ ದಳ (CBI) ಮತ್ತು ಜಾರಿ ನಿರ್ದೇಶನಾಲಯ (ED) ತನಿಖೆ ನಡೆಸುತ್ತಿರುವ ಏರ್‌ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ (Aircel Maxis case) ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಮತ್ತು ಇತರರಿಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.


COMMERCIAL BREAK
SCROLL TO CONTINUE READING

ಈ ಪ್ರಕರಣದಲ್ಲಿ ತನಿಖಾ ಸಂಸ್ಥೆಗಳು ಸಲ್ಲಿಸಿರುವ ಚಾರ್ಜ್ ಶೀಟ್‌ಗಳನ್ನು (Chargesheet) ವಿಶೇಷ ನ್ಯಾಯಾಧೀಶರಾದ ಎಂ.ಕೆ.ನಾಗ್ಪಾಲ್ ಶನಿವಾರ ವಿಚಾರಣೆಗೆ ತೆಗೆದುಕೊಂಡರು.ಸಿಬಿಐ ಮತ್ತು ಇಡಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾದ ಎಲ್ಲಾ ಆರೋಪಿಗಳು ಡಿಸೆಂಬರ್ 20, 2021 ರಂದು ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ನ್ಯಾಯಾಲಯ ಆದೇಶಿಸಿತು.


ಇದನ್ನೂ ಓದಿ : ಈ 5 ರಾಶಿಯವರು ಬೇರೊಬ್ಬರ ಬಗ್ಗೆ ಸದಾ ಚಾಡಿ ಹೇಳುತ್ತಲೇ ಇರುತ್ತಾರೆ..!


ಇದಕ್ಕೂ ಮೊದಲು, ಚಿದಂಬರಂ ಮತ್ತು ಇತರರನ್ನು ಒಳಗೊಂಡಿರುವ ಏರ್‌ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ ಸಿಬಿಐ-ಇಡಿ ಚಾರ್ಜ್ ಶೀಟ್‌ನ ಕಾಗ್ನಿಜೆನ್ಸ್ ಪಾಯಿಂಟ್‌ನಲ್ಲಿ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿತ್ತು.


ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ತನಿಖಾ ಸಂಸ್ಥೆಗಳು ಸಲ್ಲಿಸಿರುವ ಚಾರ್ಜ್ ಶೀಟ್‌ಗಳನ್ನು ನ್ಯಾಯಾಲಯವು ಪರಿಗಣನೆಗೆ ತೆಗೆದುಕೊಂಡಿದೆ.ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಒಳಗೊಂಡಿರುವ ಏರ್‌ಸೆಲ್ ಮ್ಯಾಕ್ಸಿಸ್ ಪ್ರಕರಣದ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯವು ಈ ಹಿಂದೆ ಏಜೆನ್ಸಿಗಳಿಗೆ ನಿರ್ದೇಶನ ನೀಡಿತ್ತು. ನ್ಯಾಯಾಲಯವು ಏಜೆನ್ಸಿಗಳಿಂದ ವರದಿಗಳನ್ನು ಕೇಳಿದಾಗ, ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾದ ಆರೋಪಗಳು ಸ್ವರೂಪದಲ್ಲಿ ಸಾಕಷ್ಟು ಗಂಭೀರವಾಗಿದೆ" ಎಂದು ತೋರುತ್ತಿದೆ ಎಂದು ಹೇಳಿದರು.


ಇದನ್ನೂ ಓದಿ : "ರೈತರ ಬೇಡಿಕೆ ಈಡೇರುವರೆಗೆ ಚಳುವಳಿ ಮುಂದುವರೆಯಲಿದೆ"


ಸಿಬಿಐ ಮತ್ತು ಇಡಿ ತನಿಖೆ ನಡೆಸುತ್ತಿರುವ ಪ್ರಕರಣವು ಏರ್‌ಸೆಲ್-ಮ್ಯಾಕ್ಸಿಸ್ ಒಪ್ಪಂದದಲ್ಲಿ ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿಯ ಅನುಮೋದನೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದೆ. 2006 ರಲ್ಲಿ ಪಿ ಚಿದಂಬರಂ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಇದಕ್ಕೆ ಅನುಮೋದನೆ ನೀಡಲಾಗಿತ್ತು ಎಂದು ತನಿಖಾ ಸಂಸ್ಥೆಗಳು ಹೇಳಿವೆ.ನಿಯಮಗಳು ಮತ್ತು ಆ ಸಮಯದಲ್ಲಿ ಜಾರಿಯಲ್ಲಿದ್ದ ವಿದೇಶಿ ನೇರ ಹೂಡಿಕೆ ನೀತಿಯ ಪ್ರಕಾರ, ಚಿದಂಬರಂ ಅವರು 600 ಕೋಟಿ ರೂಪಾಯಿಗಳವರೆಗಿನ ವಿದೇಶಿ ಹೂಡಿಕೆಯನ್ನು ಒಳಗೊಂಡಿರುವ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲು ಅಧಿಕಾರ ಹೊಂದಿದ್ದರು.


ಇದನ್ನೂ ಓದಿ : '83' ಸಿನೆಮಾ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ, ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಹೆಚ್ಚಿಸಿದ ಟೀಸರ್​


ಚಿದಂಬರಂ ಅವರು ತಮ್ಮ ಪುತ್ರ ಕಾರ್ತಿ ಚಿದಂಬರಂ ಕಂಪನಿಯಲ್ಲಿನ ಶೇಕಡಾ ಐದರಷ್ಟು ಪಾಲನ್ನು ಪಡೆಯುವವರೆಗೆ, ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿ (ಎಫ್‌ಐಪಿಬಿ) ಒಪ್ಪಂದದ ಅನುಮತಿಯನ್ನು ನೀಡದೆ ತಡೆಹಿಡಿದಿದ್ದಾರೆ ಎಂದು ಆರೋಪಿಸಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.