ನವದೆಹಲಿ: ಚುನಾವಣಾ ಪ್ರಕ್ರಿಯೆಗೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಶಾಸಕ ಮನೋಜ್ ಕುಮಾರ್ ಗೆ ದೆಹಲಿಯ ವಿಶೇಷ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.


COMMERCIAL BREAK
SCROLL TO CONTINUE READING

ಪೂರ್ವ ದೆಹಲಿಯ ಕೊಂಡ್ಲಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಮನೋಜ್ ಕುಮಾರ್ ಅವರಿಗೆ 3 ತಿಂಗಳ ಜೈಲು ಶಿಕ್ಷೆ ಜೊತೆಗೆ 10 ಸಾವಿರ ರೂ. ದಂಡವನ್ನೂ ನ್ಯಾಯಾಲಯ ವಿಧಿಸಿದೆ.  


ಆದರೆ, ಶಿಕ್ಷೆ ಘೋಷಿಸಿದ ಕೂಡಲೇ ಶಾಸಕ ಮನೋಜ್ ಕುಮಾರ್ ಅವರಿಗೆ ನ್ಯಾಯಾಲಯ ಜಾಮೀನು ಸಹ ನೀಡಿದೆ. ಇದಕ್ಕೆ ಪ್ರತಿಯಾಗಿ ಮನೋಜ್ ಕುಮಾರ್ 10 ಸಾವಿರ ರೂ. ಹಣ ತೆರಬೇಕಾಗಿದೆ. 


ಜೂನ್ 4 ರಂದು ನಡೆದ ವಿಚಾರಣೆಯ ವೇಳೆ, ಚುನಾವಣಾ ಪ್ರಕ್ರಿಯೆಗೆ ಅಡ್ಡಿಪಡಿಸಿದ್ದಕ್ಕಾಗಿ ನ್ಯಾಯಾಲಯ ಮನೋಜ್ ಕುಮಾರ್‌ ಅವರನ್ನು ದೋಷಿ ಎಂದು ಘೋಷಿಸಿತ್ತು. 2013 ರಲ್ಲಿ ನಡೆದ ದೆಹಲಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಡೆದಿದ್ದು, ಕಲ್ಯಾಣ್ಪುರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.