ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಗೆ ಸಮನ್ಸ್ ಜಾರಿ

ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 28ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಅಮಿತ್ ಷಾ ಗೆ ಕೋರ್ಟ್ ಆದೇಶ ನೀಡಿದೆ. 

Last Updated : Aug 31, 2018, 01:16 PM IST
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಗೆ ಸಮನ್ಸ್ ಜಾರಿ title=

ಕೋಲ್ಕತ್ತಾ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾಗೆ ಕೊಲ್ಕತ್ತಾ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. 

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಂಬಂಧಿ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಬಗ್ಗೆ ಆಗಸ್ಟ್ 11ರಂದು ನಡೆದ ರ್ಯಾಲಿಯಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 28ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಕೋರ್ಟ್ ಆದೇಶ ನೀಡಿದೆ. 

ಆಗಸ್ಟ್ 13 ರಂದು, ಅಭಿಷೇಕ್ ಬ್ಯಾನರ್ಜಿ ಅವರು ಅವಹೇಳನಕಾರಿ ಹೇಳಿಕೆಗಳಿಗಾಗಿ ಕ್ಷಮಾಪಣೆ ಕೇಳಬೇಕೆಂದು ಶಾಗೆ ಕಾನೂನುಬದ್ಧ ನೋಟಿಸ್ ನೀಡಿದ್ದರು. ಆಗಸ್ಟ್ 11ರಂದು ನಡೆದ ಬಿಜೆಪಿಯ ಯುವ ಸ್ವಾಭಿಮಾನ್ ಸಮಾವೇಶದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಭ್ರಷ್ಟಾಚಾರದ ಆರೋಪ ಹೊರಿಸಿದ್ದ ಟಿಎಂಸಿ ನಾಯಕನ ಮೇಲೆ ನೇರ ದಾಳಿ ನಡೆಸಿದ್ದರು.

ಆದರೆ, ಕ್ಷಮೆ ಕೋರಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ನಿರಾಕರಿಸಿದ ಹಿನ್ನೆಲೆಯಲ್ಲಿ, ಬ್ಯಾನರ್ಜಿ ಅವರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500ರ ಅಡಿಯಲ್ಲಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ಗೆ ಮಂಗಳವಾರ ಮಾನನಷ್ಟ ಪ್ರಕರಣ (77441/2018 ದೂರು) ದಾಖಲಿಸಿದ್ದರು.

Trending News