ನವದೆಹಲಿ: ಐದು ವರ್ಷದ ಬಾಲಕಿ ಮೇಲೆ ಸೋದರ ಸಂಬಂಧಿಯೊಬ್ಬ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ಗಾಜಿಯಾಬಾದ್ ನಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಸರಾನಾ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಸೋಮವಾರ ಬೆಳಿಗ್ಗೆ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಮುರಾದ್‌ ನಗರದ ಪುರಿ ಕಾಲೊನಿಯಲ್ಲಿ ಮನೆ ಹೊರಗೆ ಆಟವಾಡುತ್ತಿದ್ದ ಬಾಲಕಿಯನ್ನು ಅಪಹರಿಸಿದ್ದ ಆಕೆಯ ತಾಯಿಯ ಸೋದರ ಸಂಬಂಧಿ ಮಹಾಜನ್ ಎಂಬಾತ ಅತ್ಯಾಚಾರ ಎಸಗಿದ್ದಾನೆ. ಈ ಸಂದರ್ಭದಲ್ಲಿ ಬಾಲಕಿ ಕಿರುಚಲು ಆರಂಭಿಸಿದಾಗ ಆಕೆಯನ್ನು ಹತ್ಯೆ ಮಾಡಿದ್ದಾನೆ ಎಂದು ಎಸ್‌ಪಿ ನೀರಜ್‌ ಕುಮಾರ್‌ ಜಾಡೌನ್‌ ತಿಳಿಸಿದ್ದಾರೆ.


ಈ ಘಟನೆ ನಡೆದ ಸಂದರ್ಭದಲ್ಲಿ ಬಾಲಕಿಯ ಮನೆಯವರು ಸಂಬಂಧಿಕರನ್ನು ಭೇಟಿ ಮಾಡಲು ಹೊರಗೆ ಹೋಗಿದ್ದರು ಎನ್ನಲಾಗಿದ್ದು, ಮನೆಗೆ ಮರಳಿದ ಬಳಿಕ ಮನೆಯಲ್ಲಿದ್ದ ಮತ್ತಿಬ್ಬರು ಮಕ್ಕಳು ಈ ವಿಷಯವನ್ನು ತಿಳಿಸಿದ್ದಾರೆ. ಕೂಡಲೇ ಬಾಲಕಿ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಬಳಿಕ ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದಾಗ ಆರೋಪಿ ಮಹಾಜನ್‌ನ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಕೃತ್ಯ ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.