ನವದೆಹಲಿ: ಮಾರಣಾಂತಿಕ ಕೊರೋನಾ ವೈರಸ್ (Coronavirus) ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶದಲ್ಲಿ ಜಾರಿಗೊಳಿಸಲಾಗಿರುವ ಲಾಕ್ ಡೌನ್ ಬಗ್ಗೆ ನಿತ್ಯ ಒಂದಲ್ಲಾ ಒಂದು ರೀತಿಯ ಸುಳ್ಳು ವದಂತಿ ಹರಡುತ್ತಿದೆ. ಇತ್ತೀಚೆಗೆ ಸರ್ಕಾರ ವಾಟ್ಸಾಪ್ ಸಂದೇಶಗಳನ್ನು ಸ್ಕ್ರೀನಿಂಗ್ ಮಾಡುತ್ತಿದೆ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿತ್ತು. ಇದೀಗ ರೆಸ್ಟೋರೆಂಟ್ ಮತ್ತು ಹೋಟೆಲ್‌ಗಳನ್ನು ಅಕ್ಟೋಬರ್ 15 ರವರೆಗೆ ಮುಚ್ಚುವಂತೆ ಆದೇಶಿಸಿದೆ ಪ್ರವಾಸೋದ್ಯಮ ಸಚಿವಾಲಯವು ಆದೇಶಿಸಿದೆ ಎಂಬ ವದಂತಿ ಹರಿದಾಡುತ್ತಿದೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಸ್ಪಷ್ಟನೆ ನೀಡಿರುವ ಸರ್ಕಾರಿ ಸುದ್ಧಿ ಸಂಸ್ಥೆ ಪ್ರಸಾರ ಭಾರತಿ ಅಕ್ಟೋಬರ್ 15 ರವರೆಗೆ ರೆಸ್ಟೋರೆಂಟ್ ಮತ್ತು ಹೋಟೆಲ್‌ಗಳನ್ನು ಮುಚ್ಚುವಂತೆ ಆದೇಶಿಸಿರುವುದಾಗಿ ಹರಿದಾಡುತ್ತಿರುವ ಸುದ್ದಿ ನಕಲಿ ಮತ್ತು ಆಧಾರರಹಿತವಾಗಿದೆ ಎಂದು ತಿಳಿಸಿದೆ.


ಲಾಕ್​​ಡೌನ್ (Lockdown) ಘೋಷಣೆ ಮಾಡುವ ಸಂದರ್ಭದಲ್ಲಿ ರೆಸ್ಟೋರೆಂಟ್‌ಗಳು ತೆರೆಯದಂತೆಯೂ, ರೆಸ್ಟೋರೆಂಟ್‌ಗಳಲ್ಲಿ ಇರುವ ಅತಿಥಿಗಳಿಗೆ ಆಹಾರವನ್ನು ನೀಡುವ ಹೊರತು ಹೊರಗಡೆಯವರಿಗೆ ಹೋಟೆಲ್‌ಗಳನ್ನು ಮುಚ್ಚುವಂತೆ ಸರ್ಕಾರ ಆದೇಶ ಹೊರಡಿಸಿತ್ತು.


ಆದಾಗ್ಯೂ, 21 ದಿನಗಳ ಲಾಕ್‌ಡೌನ್ ಅವಧಿಯಲ್ಲೂ ಆಹಾರ ವಿತರಣಾ ಕಾರ್ಯಗಳನ್ನು ನಿರ್ವಹಿಸಲು ಅನುಮತಿ ನೀಡಲಾಗಿದ್ದು, ಇವುಗಳು ಅಗತ್ಯ ಸೇವೆಗಳ ಅಡಿಯಲ್ಲಿ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.
                                   
ಏತನ್ಮಧ್ಯೆ, ಕರೋನವೈರಸ್ COVID-19 ಸಾಂಕ್ರಾಮಿಕ ರೋಗದಿಂದಾಗಿ ದೇಶವು "ಸಾಮಾಜಿಕ ತುರ್ತುಸ್ಥಿತಿ" ಯನ್ನು ಎದುರಿಸುತ್ತಿರುವ ಕಾರಣ ಒಂದೇ ಬಾರಿಗೆ ಲಾಕ್‌ಡೌನ್‌ನಿಂದ ಸಂಪೂರ್ಣ ನಿರ್ಗಮನ ಸಾಧ್ಯವಿಲ್ಲ ಎಂಬ ಬಗ್ಗೆ ಹಲವು ಸುಳಿವು ದೊರೆತಿದೆ.