Jammu Kashmir Covid-19 Updates: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲಾ ಆಸ್ಪತ್ರೆಯ ವಿಡಿಯೋ ತುಣುಕುಗಳು ಸೋಶಿಯಲ್ ಮೀಡಿಯಾದಲ್ಲಿ ತುಂಬಾ ವೈರಲ್ ಆಗುತ್ತಿದೆ. ಇವುಗಳಲ್ಲಿ ಆಸ್ಪತ್ರೆಯೊಳಗೆ ಹಸುಗಳು ತಿರುಗಾಡುತ್ತಿರುವುದು ಕಂಡುಬರುತ್ತದೆ. ಈ ಸಮಯದಲ್ಲಿ, ಆಸ್ಪತ್ರೆಯ ಸಿಬ್ಬಂದಿ, ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಅಲ್ಲಿ ಇರಲಿಲ್ಲ. ಈ ಹಸುಗಳು ಕಾಣಿಸಿಕೊಂಡ ಆಸ್ಪತ್ರೆ ಕೋವಿಡ್ ಡೆಡಿಕೇಟೆಡ್ ಆಸ್ಪತ್ರೆಯಾಗಿದ್ದು, ಅಲ್ಲಿ ಕರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.


Social Media) ವೈರಲ್ ಆದ ಬಳಿಕ ಎಚ್ಚೆತ್ತಿರುವ ಆಸ್ಪತ್ರೆಯ ಅಧಿಕಾರಿಗಳು ಕಾರ್ಯರೂಪಕ್ಕೆ ಬಂದಿದ್ದಾರೆ. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ಇದರೊಂದಿಗೆ ಆಸ್ಪತ್ರೆಯಲ್ಲಿ ಇದೀಗ ನಿರ್ಮಾಣ ಕಾರ್ಯಗಳು ನಡೆಯುತ್ತಿವೆ. ಆಸ್ಪತ್ರೆಯಲ್ಲಿ ಗೇಟ್ ನಿರ್ಮಿಸದ ಕಾರಣ, ಪ್ರಾಣಿಗಳು ಹೆಚ್ಚಾಗಿ ಆಸ್ಪತ್ರೆಯೊಳಗೆ ಬರುತ್ತಿವೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ - ಭಾರತದಲ್ಲಿ ಮೊದಲ ಬಾರಿಗೆ 4 ಲಕ್ಷ ಗಡಿ ದಾಟಿದ ಕೊರೊನಾ ಚೇತರಿಕೆ ಪ್ರಕರಣಗಳು


ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ಜಮ್ಮು ಮತ್ತು ಕಾಶ್ಮೀರ (Jammu and Kashmir) ಕೇಂದ್ರಾಡಳಿತ ಪ್ರದೇಶದಲ್ಲಿ 3,967 ಹೊಸ ಸೋಂಕು ಪ್ರಕರಣಗಳು ಕಂಡುಬಂದಿದ್ದು, 71 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹೊಸ ಪ್ರಕರಣಗಳೊಂದಿಗೆ, ಇಲ್ಲಿ ಸೋಂಕಿತರ ಸಂಖ್ಯೆ 2,51,919 ಕ್ಕೆ ತಲುಪಿದೆ ಮತ್ತು ಒಟ್ಟು 3,967 ಜನರು ಸಾವನ್ನಪ್ಪಿದ್ದಾರೆ.


ಹೊಸ ಪ್ರಕರಣಗಳಲ್ಲಿ, ಜಮ್ಮು ವಿಭಾಗದಲ್ಲಿ 1,704 ಪ್ರಕರಣಗಳು ಕಂಡುಬಂದಿದ್ದರೆ, ಕಾಶ್ಮೀರ ವಿಭಾಗದಲ್ಲಿ 2,263 ಪ್ರಕರಣಗಳು ಪತ್ತೆಯಾಗಿವೆ. ಶ್ರೀನಗರ ಜಿಲ್ಲೆಯಲ್ಲಿ ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ 666 ಕರೋನಾ ರೋಗಿಗಳು ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂತೆಯೇ, ಜಮ್ಮುವಿನಲ್ಲಿ 522 ಕರೋನಾ ರೋಗಿಗಳು ಮತ್ತು ಬುಡ್ಗಾಮ್ನಲ್ಲಿ 454 ಹೊಸ ಕರೋನಾ ಸೋಂಕಿತರು ಪತ್ತೆಯಾಗಿದ್ದಾರೆ. 


ಇದನ್ನೂ ಓದಿ - ಹೆಚ್ಚಿನ ಕಂಪನಿಗಳಿಗೆ ಲಸಿಕೆ ತಯಾರಿಸುವ ನಿಟ್ಟಿನಲ್ಲಿ ಕಾನೂನು ತರಲು ಪ್ರಧಾನಿ ಮೋದಿಗೆ ಗಡ್ಕರಿ ಮನವಿ


ಅಧಿಕಾರಿಗಳ ಪ್ರಕಾರ, ಕೇಂದ್ರಾಡಳಿತ ಪ್ರದೇಶದಲ್ಲಿ ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ಎರಡನೇ ಬಾರಿಗೆ 71 ಜನರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಸಾವಿನ ಸಂಖ್ಯೆ 3,293 ಕ್ಕೆ ಏರಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.