ನವದೆಹಲಿ: ಹಿಂಸಾಚಾರ ಪೀಡಿತ ರಾಜಸ್ಥಾನದ ಕರೌಲಿಯಲ್ಲಿ ಕರ್ಫ್ಯೂ ಅನ್ನು ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 10 ರವರೆಗೆ ವಿಸ್ತರಿಸಲಾಗಿದೆ. ಆದರೆ ಶುಕ್ರವಾರದಿಂದ ಮೂರು ಗಂಟೆಗಳ ಕಾಲ ಕರ್ಫ್ಯೂ ಸಡಿಲಿಸಲಾಗುವುದು ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ನವ ಸಂವತ್ಸರದಂದು (ಹಿಂದೂ ಹೊಸ ವರ್ಷ) ಬೈಕ್ ರ್ಯಾಲಿಯಲ್ಲಿ ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಶನಿವಾರ ಬೆಂಕಿ ಹಚ್ಚುವಿಕೆ ಮತ್ತು ವಿಧ್ವಂಸಕ ಘಟನೆಗಳ ನಂತರ ಕರ್ಫ್ಯೂ ವಿಧಿಸಲಾಯಿತು. ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ), ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಬಜರಂಗದಳ ಸೇರಿದಂತೆ ಹಲವು ಸಂಘಟನೆಗಳು ರ್ಯಾಲಿಯಲ್ಲಿ ಭಾಗವಹಿಸಿದ್ದವು. ಈಗ  ಹಿಂಸಾಚಾರದಲ್ಲಿ ಸುಮಾರು 35 ಮಂದಿ ಗಾಯಗೊಂಡಿದ್ದಾರೆ.


ಇದನ್ನು ಓದಿ: ಬಾಂಡ್ ರವಿ' ಸಾಥ್ ಕೊಟ್ಟ ಪೊಗರು ಪೋರ-ಯಂಗ್ ಟೈಗರ್... ಪ್ರಮೋದ್ ಬೆನ್ನು ತಟ್ಟಿದ ಧ್ರುವ-ವಿನೋದ್


ಕಾಂಗ್ರೆಸ್ ಇದನ್ನು ಜನರನ್ನು ಧ್ರುವೀಕರಿಸುವ ಪ್ರಯತ್ನ ಎಂದು ಕರೆದಿದೆ ಆದರೆ ಪ್ರತಿಪಕ್ಷ ಬಿಜೆಪಿ ಹಿಂಸಾಚಾರವನ್ನು "ಯೋಜಿತ ಪಿತೂರಿ" ಎಂದು ಬಣ್ಣಿಸಿದೆ. ಬಿಜೆಪಿಯ ಏಳು ಸದಸ್ಯರ ನಿಯೋಗ ಇಂದು ತನ್ನ ವರದಿಯನ್ನು ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಸಲ್ಲಿಸಿದೆ.ಪೊಲೀಸರು ರ್ಯಾಲಿಯ ವೀಡಿಯೋಗ್ರಫಿ ಮಾಡಿದ್ದಾರೆ, ಆದರೆ ಹಿಂಸಾಚಾರದ ನಂತರ ಶಾಂತಿ ಸಮಿತಿಯ ಸಭೆಯ ಭಾಗವಾಗಿದ್ದರೂ ಪ್ರಮುಖ ಆರೋಪಿಗಳಾದ ಅಮಿಮುದ್ದೀನ್ ಮತ್ತು ಮತ್ಲೂಬ್ ಖಾನ್ ವಿರುದ್ಧ ಕ್ರಮಕೈಗೊಂಡಿಲ್ಲ ಎಂದು ರಾಥೋಡ್ ಹೇಳಿದರು.


ಇದನ್ನೂ ಓದಿ: Career: ಅಮೃತ್ ಮುನ್ನಡೆ ಯೋಜನೆಯಡಿ ಉಚಿತ ಕೋರ್ಸ್ : ಅರ್ಜಿ ಆಹ್ವಾನ


ಪಿಎಫ್‌ಐನಂತಹ ಸಂಘಟನೆಗಳಿಗೆ ಸಂಬಂಧಿಸಿದವರು ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ರಾಥೋಡ್ ಹೇಳಿದ್ದಾರೆ.ಆಡಳಿತವು ದುಷ್ಕರ್ಮಿಗಳ ವಿರುದ್ಧ ವರದಿಯನ್ನು ಸಲ್ಲಿಸುವುದಾಗಿ ಭರವಸೆ ನೀಡಿದೆ. ಆದರೆ, ರಾಜಸ್ಥಾನ ಸರ್ಕಾರ ಮತ್ತು ಕಾಂಗ್ರೆಸ್ ನಾಯಕರ ಒತ್ತಡದಿಂದ, ಸರ್ಕಾರ ಮತ್ತು ಆಡಳಿತದಿಂದ ಸಂತ್ರಸ್ತರಿಗೆ ಅನ್ಯಾಯವಾಗುತ್ತಿದೆ,"ಎಂದು ಅವರು ಹೇಳಿದರು.


ಕಾಂಗ್ರೆಸ್ ತನಿಖಾ ತಂಡದಲ್ಲಿದ್ದ ಡಾ.ಜಿತೇಂದ್ರ ಸಿಂಗ್, ಶಾಸಕ ರಫೀಕ್ ಖಾನ್ ಮತ್ತು ಲಲಿತ್ ಯಾದವ್ ಅವರು ಕರೌಲಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಚರ್ಚಿಸಿದರು ಮತ್ತು ಸ್ಥಳೀಯ ಜನರಲ್ಲಿ ಘಟನೆಯ ಬಗ್ಗೆ ವಿಚಾರಿಸಿದರು.ಜನರ ಧ್ರುವೀಕರಣಕ್ಕೆ ಸಂಚು ರೂಪಿಸಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ಸ್ವರ್ಣಿಂ ಚತುರ್ವೇದಿ ಹೇಳಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.