ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ; ಗುವಾಹಟಿಯಲ್ಲಿ ಕರ್ಫ್ಯೂ ಸಡಿಲ, ಇಂಟರ್ನೆಟ್...

ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಅಂತರ್ಜಾಲ ಸೇವೆಗಳನ್ನು ಮಂಗಳವಾರ ಸಂಜೆ 5 ಗಂಟೆಯವರೆಗೆ ಸ್ಥಗಿತಗೊಳಿಸಲಾಗುವುದು.

Last Updated : Dec 17, 2019, 09:23 AM IST
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ; ಗುವಾಹಟಿಯಲ್ಲಿ ಕರ್ಫ್ಯೂ ಸಡಿಲ, ಇಂಟರ್ನೆಟ್... title=

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಹಿನ್ನೆಲೆಯಲ್ಲಿ ಗುವಾಹಟಿಯಲ್ಲಿ ವಿಧಿಸಲಾಗಿದ್ದ ಕರ್ಫ್ಯೂವನ್ನು ಮಂಗಳವಾರ ಬೆಳಗ್ಗೆ ತೆಗೆದುಹಾಕಲಾಗಿದೆ. ದಿಬ್ರುಗರ್ ಅಧಿಕಾರಿಗಳು ಕೂಡ ಜಿಲ್ಲೆಯ ಕರ್ಫ್ಯೂ ಅನ್ನು ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಸಡಿಲಗೊಳಿಸಿದರು. ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ಪರಿಶೀಲನೆ ನಡೆಸಲು ಸಭೆ ನಡೆಸಿದ ನಂತರ ರಾಜ್ಯ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಈ ನಿರ್ಧಾರ ಕೈಗೊಂಡಿದ್ದಾರೆ. "ಗುವಾಹಟಿ(Guwahati)ಯಲ್ಲಿ ಮಂಗಳವಾರ ಬೆಳಿಗ್ಗೆ 6 ಗಂಟೆಯಿಂದ ಕರ್ಫ್ಯೂ ಅನ್ನು ಸಂಪೂರ್ಣವಾಗಿ ತೆಗೆದುಹಾಕಲು ನಿರ್ಧರಿಸಲಾಗಿದೆ" ಎಂದು ಸಿಎಂಒ ಹೇಳಿಕೆ ಮಂಗಳವಾರ ತಿಳಿಸಿದೆ. ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಅಂತರ್ಜಾಲ ಸೇವೆಗಳನ್ನು ಮಂಗಳವಾರ ಸಂಜೆ 5 ಗಂಟೆಯವರೆಗೆ ಸ್ಥಗಿತಗೊಳಿಸಲಾಗುವುದು ಎಂದು ಹೇಳಲಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕರಿಸಿದ ನಂತರ ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಎರಡೂ ರಾಜ್ಯಗಳು ಹಿಂಸಾತ್ಮಕ ಪ್ರತಿಭಟನೆಗಳಿಗೆ ಸಾಕ್ಷಿಯಾಯಿತು. ಅಸ್ಸಾಂ ತನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ಮೂರು ರೈಲು ನಿಲ್ದಾಣಗಳು, ಅಂಚೆ ಕಚೇರಿ, ಬ್ಯಾಂಕ್, ಬಸ್ ಟರ್ಮಿನಸ್, ಅಂಗಡಿಗಳು, ಡಜನ್ಗಟ್ಟಲೆ ವಾಹನಗಳು ಮತ್ತು ಇತರ ಅನೇಕ ಸಾರ್ವಜನಿಕ ಆಸ್ತಿ ಹಾನಿಗೊಳಗಾಗಿರುವುದಕ್ಕೆ ಮತ್ತು ಸಾರ್ವಜನಿಕರ ಅತ್ಯಂತ ಹಿಂಸಾತ್ಮಕ ಪ್ರತಿಭಟನೆಗೆ ಸಾಕ್ಷಿಯಾಗಿದೆ. ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ ನಾಲ್ವರು ಸೇರಿದಂತೆ ಐವರು ವ್ಯಕ್ತಿಗಳು ಪ್ರಾಣ ಕಳೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ(Narendra Modi) ಸೇರಿದಂತೆ ಹಲವು ಗಣ್ಯರು ಮತ್ತು ಸಚಿವರು ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಏತನ್ಮಧ್ಯೆ, ಶಿಕ್ಷಣ ತಜ್ಞರು ಮತ್ತು ಕಾರ್ಯಕರ್ತರು ಈ ಕಾಯ್ದೆಯ ವಿರುದ್ಧ ಹೋರಾಡಲು ಕಾನೂನು ಮಾರ್ಗವನ್ನು ತೆಗೆದುಕೊಳ್ಳುತ್ತಿದ್ದಾರೆ.

ಕಾರ್ಯಕರ್ತರಾದ ಹರ್ಷ್ ಮಾಂಡರ್, ಅರುಣಾ ರಾಯ್, ನಿಖಿಲ್ ಡೇ, ಇತಿಹಾಸಕಾರ ಇರ್ಫಾನ್ ಹಬೀಬ್, ಅರ್ಥಶಾಸ್ತ್ರಜ್ಞ ಪ್ರಭಾತ್ ಪಟ್ನಾಯಕ್ ಮತ್ತು ಕೆಲವು ಸಂಸ್ಥೆಗಳು ಸೋಮವಾರ 2019 ರ ಪೌರತ್ವ (ತಿದ್ದುಪಡಿ) ಕಾಯ್ದೆ(Citizenship Amendment Act)ಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ. ವಕೀಲ ಪ್ರಶಾಂತ್ ಭೂಷಣ್ ಅವರ ಮೂಲಕ ಸಲ್ಲಿಸಿದ ಮನವಿಯು ಈ ಕಾಯ್ದೆಯನ್ನು ಅಸಂವಿಧಾನಿಕ ಮತ್ತು ಕಾನೂನುಬಾಹಿರ ಎಂದು ಘೋಷಿಸಲು ಮನವಿ ಮಾಡಿವೆ.

“ಈ ಅಧಿಸೂಚನೆಗಳು ಮತ್ತು ತಿದ್ದುಪಡಿ ಕಾಯ್ದೆ ಅಸಂವಿಧಾನಿಕ .ಏಕೆಂದರೆ ಅವು ತಾರತಮ್ಯ ಮತ್ತು ಸಂವಿಧಾನದ ಯೋಜನೆಯಡಿ ಎಲ್ಲ ವ್ಯಕ್ತಿಗಳ ಸಮಾನತೆಯ ಹಕ್ಕನ್ನು ಉಲ್ಲಂಘಿಸುತ್ತವೆ. ಅವರು ಮೂರು ದೇಶಗಳನ್ನು ಹೊರತುಪಡಿಸಿ ಭಾರತದ ನೆರೆಹೊರೆಯ ಇತರ ದೇಶಗಳಿಂದ ಅಕ್ರಮವಾಗಿ ವಲಸೆ ಬಂದವರ ಬಗ್ಗೆ ತಾರತಮ್ಯ ಹೊಂದಿದ್ದಾರೆ ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಮರು, ಯಹೂದಿಗಳು, ಅಹ್ಮದಿಯರು ಅಥವಾ ನಾಸ್ತಿಕರು ಧಾರ್ಮಿಕ ಗುಂಪಿನೊಂದಿಗೆ ಗುರುತಿಸಿಕೊಳ್ಳದವರ ಬಗ್ಗೆ ತಾರತಮ್ಯ ಹೊಂದಿದ್ದಾರೆ ”ಎಂದು ಮನವಿಯಲ್ಲಿ ತಿಳಿಸಲಾಗಿದೆ.

Trending News