ನವದೆಹಲಿ : ಚಂಡಮಾರುತದ ಚಲನೆಯಿಂದಾಗಿ ಬಂಗಾಳಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಪ್ರಕ್ಷುಬ್ಧತೆ ಉಂಟಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ಪ್ರಕಾರ, ಸಮುದ್ರದಲ್ಲಿ  ಚಂಡಮಾರುತ ಚಲನೆಯಿಂದಾಗಿ, ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ನಿರೀಕ್ಷೆಯಿದೆ. ಪಶ್ಚಿಮ ಬಂಗಾಳದಲ್ಲಿ ಸೋಮವಾರ ಮತ್ತು ಮಂಗಳವಾರ ಗಂಟೆಗೆ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


COMMERCIAL BREAK
SCROLL TO CONTINUE READING

ಚಂಡಮಾರುತದ ಪರಿಣಾಮ ಸಮೀಪದ ರಾಜ್ಯಗಳಲ್ಲಿ ಕಾಣಬಹುದು ಎಂದು ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಈ ರಾಜ್ಯಗಳಲ್ಲಿ  ಸಾಧಾರಣ ಮಳೆಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರಿಗೆ ಮತ್ತು ದೋಣಿ ನಿರ್ವಾಹಕರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ಸಮುದ್ರ, ಆಗ್ನೇಯ ಮತ್ತು ಸುತ್ತಮುತ್ತಲಿನ ಮಧ್ಯ ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರ ತೆರಳದಂತೆ ಸೂಚಿಸಲಾಗಿದೆ. 


ಇದನ್ನೂ ಓದಿ : Karnataka Rain Update: ಮುಂದಿನ 3 ದಿನ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಯಾವ್ಯಾವ ಜಿಲ್ಲೆಯಲ್ಲಿದೆ ವರ್ಷಧಾರೆ?


ಯಾವ ರಾಜ್ಯಗಳಲ್ಲಿ ಮಳೆಯಾಗಲಿದೆ? :
IMD ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಹಿಮಾಚಲ, ಉತ್ತರಾಖಂಡ ಮತ್ತು ಜಮ್ಮು ಮತ್ತು ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಮಳೆ ಜೊತೆಗೆ ಹಿಮಪಾತವೂ ಆಗಬಹುದು ಎನ್ನಲಾಗಿದೆ. ಅದೇ ವೇಳೆ ದೆಹಲಿ, ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ, ಪಂಜಾಬ್, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದ ಕೆಲವು ಭಾಗಗಳಲ್ಲಿ ಲಘು ಪ್ರಮಾಣದಲ್ಲಿ ಮಳೆಯಾಗಬಹುದು.


IMD ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ ಮೋಡ ಕವಿದ ವಾತವರಣ ಇರಲಿದೆ. ಗರಿಷ್ಠ ತಾಪಮಾನವು ಸುಮಾರು 38 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು ಸುಮಾರು 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅಂದಾಜಿಸಲಾಗಿದೆ. 


ಇದನ್ನೂ ಓದಿ : Boat Tragedy in Kerala: ಕೇರಳದಲ್ಲಿ ದೋಣಿ ಮುಳುಗಡೆ, ಮಕ್ಕಳು ಸೇರಿ 22 ಮಂದಿ ಸಾವು!


ಕಳೆದ ಎರಡು ವಾರಗಳಲ್ಲಿ ದೆಹಲಿಯಲ್ಲಿ ಸಾಮಾನ್ಯ ಹವಾಮಾನಕ್ಕೆ ಹೋಲಿಸಿದರೆ 200 ಪ್ರತಿಶತಕ್ಕಿಂತ ಹೆಚ್ಚು ಮಳೆಯಾಗಿದೆ. ದೆಹಲಿಯ ಪ್ರಾಥಮಿಕ ಹವಾಮಾನ ಕೇಂದ್ರವಾದ ಸಫ್ದರ್‌ಜಂಗ್ ವೀಕ್ಷಣಾಲಯದ ಪ್ರಕಾರ, ಈ ಅವಧಿಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಸಾಮಾನ್ಯಕ್ಕಿಂತ 221 ರಷ್ಟು ಹೆಚ್ಚು ಮಳೆಯಾಗಿದೆ.


ಹಿಮಾಚಲ ಪ್ರದೇಶದಲ್ಲಿ ಹಿಮಪಾತ :
ಹಿಮಾಚಲ ಪ್ರದೇಶದ ಬುಡಕಟ್ಟು ಪ್ರಾಬಲ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಹಿಮಪಾತವಾಗಿದೆ. ಕೆಲವೆಡೆ ತುಂತುರು ಮಳೆಯಾಗುತ್ತಿದೆ. ರಾಜ್ಯದಲ್ಲಿ ಹಿಮಪಾತ ಮತ್ತು ಮಳೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಸ್ಥಳೀಯ ಹವಾಮಾನ ಇಲಾಖೆಯು ' ಯಲ್ಲೋ ಅಲರ್ಟ್ ನೀಡಲಾಗಿದೆ. ಹಿಮಾಚಲದ ಬಯಲು ಪ್ರದೇಶಗಳು ಸೇರಿದಂತೆ ಕಡಿಮೆ ಮತ್ತು ಮಧ್ಯಮ ಎತ್ತರದ ಪರ್ವತ ಪ್ರದೇಶಗಳಲ್ಲಿ ವಿವಿಧ ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚುಗಳ ಮುನ್ಸೂಚನೆಯನ್ನು ನೀಡಲಾಗಿದೆ. ಮೇ 9 ರಂದು ಎತ್ತರದ ಪ್ರದೇಶಗಳಲ್ಲಿ ಲಘು ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ.


ಇದನ್ನೂ ಓದಿ : ಕೇರಳದ ಮಲಪ್ಪುರಂನಲ್ಲಿ ಹೌಸ್‌ಬೋಟ್ ಮುಳುಗಿ 16 ಜನರು ಸಾವು


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.