ನವದೆಹಲಿ: ತಮಿಳುನಾಡು, ಪುದುಚೇರಿ ಮತ್ತು ಆಂಧ್ರಪ್ರದೇಶ ಕರಾವಳಿ ಪ್ರದೇಶಗಳಲ್ಲಿ 'ನಿವಾರ್' ಚಂಡಮಾರುತ ಅಪ್ಪಳಿಸುತ್ತಿದೆ. ನವೆಂಬರ್ 25ರಂದು ಚಂಡಮಾರುತವು ತಮಿಳುನಾಡು ಮತ್ತು ಪುದುಚೇರಿ ತೀರಗಳನ್ನು ದಾಟಲಿದೆ ಎಂದು ಅಂದಾಜಿಸಲಾಗಿದೆ. ಚಂಡಮಾರುತದ ಪ್ರಭಾವದಿಂದಾಗಿ ತಮಿಳುನಾಡಿನ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ. 


COMMERCIAL BREAK
SCROLL TO CONTINUE READING

ಏತನ್ಮಧ್ಯೆ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ (Edappadi K Palaniswami) ಮತ್ತು ಪುದುಚೇರಿ ಸಿಎಂ ವಿ.ನಾರಾಯಣಸಾಮಿ (V Narayanasamy) ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.


Cyclone Nivar: ದಕ್ಷಿಣ ಭಾರತದ ಈ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ


ಕೇಂದ್ರದಿಂದ ಅಗತ್ಯ ನೆರವಿನ ಅಭಯ:
'ನಿವಾರ್' ಚಂಡಮಾರುತದ (Cyclone Nivar) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ  (Narendra Modi) ತಮಿಳುನಾಡು ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಪುದುಚೇರಿ ಸಿಎಂ ವಿ.ನಾರಾಯಣಸಾಮಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು ಚಂಡಮಾರುತದಿಂದ ಎದುರಾಗುವ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ನೆರವನ್ನು ಒದಗಿಸುವುದಾಗಿ ಭರವಸೆ ನೀಡಿದರು. 


ಪೀಡಿತ ಪ್ರದೇಶಗಳಲ್ಲಿ ವಾಸಿಸುವವರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.



ಎನ್‌ಡಿಆರ್‌ಎಫ್‌ನ 6 ತಂಡಗಳನ್ನು ನಿಯೋಜಿಸಲಾಗಿದೆ :
ಐಎಂಡಿ ಚಂಡಮಾರುತದ ಬಗ್ಗೆ ಎಚ್ಚರಿಕೆ ನೀಡಿದ ನಂತರ  ಎನ್‌ಡಿಆರ್‌ಎಫ್ (NDRF) ತಂಡಗಳನ್ನು ತಮಿಳುನಾಡಿನ ನಾಗಪಟ್ಟಣಂ ಮತ್ತು ಕಾರೈಕಲ್ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ಅದೇ ಸಮಯದಲ್ಲಿ 18 ತಂಡಗಳು ಇತರ ರಾಜ್ಯಗಳಲ್ಲಿ ಮತ್ತು ಪುದುಚೇರಿಯ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಿಯೋಜನೆಗೆ ಸಿದ್ಧವಾಗಿವೆ. ಈ ತಂಡಗಳು ಸ್ಥಳೀಯ ಜನರನ್ನು ಪೀಡಿತ ಪ್ರದೇಶಗಳಿಂದ ಸ್ಥಳಾಂತರಿಸಲು ಸಹಾಯ ಮಾಡುತ್ತವೆ ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳೀಯ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತವೆ.