ರೆಮಲ್ ಚಂಡಮಾರುತದ ಅಬ್ಬರ: ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್, ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ
Karnataka Weather Report : ಕರ್ನಾಟಕ ಕರಾವಳಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Cyclone Remal Updates: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಚಂಡಮಾರುತ ಬೀಸಿದೆ. ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಈ ಚಂಡಮಾರುತಕ್ಕೆ ರೆಮಲ್ ಎಂದು ಹೆಸರಿಡಲಾಗಿದ್ದು ಮೇ 26 ರ ರಾತ್ರಿ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ಕರಾವಳಿ ತೀರಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹೇಳಲಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳದತ್ತ ವೇಗವಾಗಿ ಚಲಿಸುತ್ತಿದೆ. ಇಂದು ರಾತ್ರಿ ವೇಳೆಗೆ ರೆಮಲ್ ಚಂಡಮಾರುತ ಬಂಗಾಳ ಕರಾವಳಿಗೆ ಅಪ್ಪಳಿಸಲಿದೆ. ರೆಮಲ್ ಚಂಡಮಾರುತದ ಬಗ್ಗೆ ಪಶ್ಚಿಮ ಬಂಗಾಳದಲ್ಲಿ ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆಯು ಕೋಲ್ಕತ್ತಾ, ಹೌರಾ, ನಾಡಿಯಾ ಮತ್ತು ಪೂರ್ವ ಮೇದಿನಿಪುರ ಜಿಲ್ಲೆಗಳಲ್ಲಿ ರೆಡ್ ಮತ್ತು ಆರೆಂಜ್ ಅಲರ್ಟ್‌ಗಳನ್ನು ನೀಡಿದೆ.
ಇಂದು ಪಶ್ಚಿಮ ಬಂಗಾಳದ ಕರಾವಳಿಗೆ ರೆಮಲ್ ಚಂಡಮಾರುತ ಅಪ್ಪಳಿಸಿದಾಗ, ಗಾಳಿಯ ವೇಗ ಗಂಟೆಗೆ 100 ಕಿಲೋಮೀಟರ್ ಮೀರುವ ನಿರೀಕ್ಷೆಯಿದೆ. ರೆಮಲ್ ಚಂಡಮಾರುತದ ಪರಿಣಾಮ ಎದುರಿಸಲು ಹತ್ತಾರು NDRF ತಂಡಗಳನ್ನು ನಿಯೋಜಿಸಲಾಗಿದೆ. ಚಂಡಮಾರುತದ ಪ್ರಭಾವವು ಪಶ್ಚಿಮ ಬಂಗಾಳ, ಉತ್ತರ ಒಡಿಶಾ, ಮಿಜೋರಾಂ, ತ್ರಿಪುರಾ ಮತ್ತು ದಕ್ಷಿಣ ಮಣಿಪುರಕ್ಕೆ ವಿಸ್ತರಿಸುವ ನಿರೀಕ್ಷೆಯಿದೆ. ಈ ರಾಜ್ಯಗಳ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: Delhi fire news: ಶಿಶುಪಾಲನಾ ಕೇಂದ್ರಕ್ಕೆ ಹೊತ್ತಿಕೊಂಡ ಬೆಂಕಿ, 6 ಮಕ್ಕಳು ಸಾವು
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ನಿರಂತರವಾಗಿ ಉತ್ತರಾಭಿಮುಖವಾಗಿ ಚಲಿಸುತ್ತಿದ್ದು, ಇಂದು ರಾತ್ರಿ ಪಶ್ಚಿಮ ಬಂಗಾಳದ ಸಾಗರ್ ದ್ವೀಪ ಮತ್ತು ಬಾಂಗ್ಲಾದೇಶದ ಖೇಪುಪಾರ ಕರಾವಳಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
IMD ಪ್ರಕಾರ, ಮುಂದಿನ 6 ಗಂಟೆಗಳಲ್ಲಿ ರೆಮಲ್ ಚಂಡಮಾರುತ ತೀವ್ರ ಸ್ವರೂಪ ಪಡೆಯಲಿದೆ. ಮೇ 26-27 ರಂದು ಗಂಟೆಗೆ 90 ರಿಂದ 100 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಕೆಲವು ಸ್ಥಳಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.
ಈ ನಡುವೆ ಕರ್ನಾಟಕದ ಕರಾವಳಿಯಲ್ಲಿ ಮೇ 26 ಮತ್ತು 27 ರಂದು ಭಾರೀ ಮಳೆಯಾಗಲಿದೆ. ಬಳಿಕ ಸಾಧಾರಣ ಮಳೆ ಬೀಳಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ ಮಳೆ ಕಡಿಮೆಯಾಗಲಿದೆ. ಕಳೆದ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ 19 ಸೆಂ.ಮೀ., ಉಡುಪಿಯಲ್ಲಿ 13 ಸೆಂ.ಮೀ., ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ 10 ಸೆಂ.ಮೀ., ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ 9 ಸೆಂ.ಮೀ. ಮಳೆಯಾಗಿದೆ ಎಂದ ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: 'ಮೇ 26ರ ವೇಳೆಗೆ ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಕರಾವಳಿಯ ಮೇಲೆ ತೀವ್ರ ಪರಿಣಾಮ ಸಾಧ್ಯತೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.