ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನಲ್ಲಿ ಬುಧವಾರ ಚಂಡಮಾರುತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ ರಾಜ್ಯದಲ್ಲಿ ತಕ್ಷಣದ ಪರಿಹಾರ ಕ್ರಮಗಳಿಗಾಗಿ 1,000 ಕೋಟಿ ರೂ.ಪರಿಹಾರವನ್ನು ಘೋಷಿಸಿದ್ದಾರೆ.
ವೈಮಾನಿಕ ಸಮೀಕ್ಷೆಯಲ್ಲಿ, ಪಿಎಂ ಮೋದಿ ಗುಜರಾತ್ ಮತ್ತು ಡಿಯುನಲ್ಲಿನ ತೌಕ್ತೆ ಚಂಡಮಾರುತದ ಪೀಡಿತ ಪ್ರದೇಶಗಳಾದ ಉನಾ, ಡಿಯು, ಜಫರಾಬಾದ್ ಮತ್ತು ಮಹುವ ಸೇರಿದಂತೆ ಪ್ರದೇಶಗಳನ್ನು ಪರಿಶೀಲಿಸಿದರು. "ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ಹೆಚ್ಚಿನ ವೈಜ್ಞಾನಿಕ ಅಧ್ಯಯನಗಳತ್ತ ನಾವು ಗಮನ ಹರಿಸಬೇಕಾಗಿದೆ ಎಂದು ಪಿಎಂ ಮೋದಿ (PM Modi) ಹೇಳಿದರು.
ಇದನ್ನೂ ಓದಿ : ನಿಮ್ಮ ಜೀವನದ ಈ ವಿಚಾರಗಳ ಬಗ್ಗೆ ಯಾವತ್ತೂ ಇನ್ನೊಬ್ಬರೊಂದಿಗೆ ಚರ್ಚಿಸದಿರಿ
ಅಂತರ್-ರಾಜ್ಯ ಸಮನ್ವಯವನ್ನು ಹೆಚ್ಚಿಸಲು ಮತ್ತು ಆಧುನಿಕ ಸಂವಹನ ತಂತ್ರಗಳನ್ನು ಬಳಸಿಕೊಂಡು ಪೀಡಿತ ಪ್ರದೇಶಗಳಿಂದ ತ್ವರಿತವಾಗಿ ಸ್ಥಳಾಂತರಿಸುವುದನ್ನು ಖಚಿತಪಡಿಸಿಕೊಳ್ಳಲು ಅವರು ಹೆಚ್ಚಿನ ಗಮನವನ್ನು ನೀಡಬೇಕೆಂದು ಅವರು ಕರೆ ನೀಡಿದರು. ಹಾನಿಗೊಳಗಾದ ಮನೆಗಳು ಮತ್ತು ಆಸ್ತಿಪಾಸ್ತಿಗಳನ್ನು ಹಾನಿಗೊಳಗಾದ ಪ್ರದೇಶಗಳಲ್ಲಿ ದುರಸ್ತಿ ಮಾಡಲು ತಕ್ಷಣ ಗಮನ ಹರಿಸಬೇಕು ಎಂದು ಪ್ರಧಾನಮಂತ್ರಿ ಕಚೇರಿ ಹೇಳಿಕೆ ತಿಳಿಸಿದೆ.
Undertook an aerial survey over parts of Gujarat and Diu to assess the situation in the wake of Cyclone Tauktae. Central Government is working closely with all the states affected by the cyclone. pic.twitter.com/wGgM6sl8Ln
— Narendra Modi (@narendramodi) May 19, 2021
ಇದನ್ನೂ ಓದಿ: ಒಂದೇ ದಿನದಲ್ಲಿ 20 ಲಕ್ಷ ಕೊರೊನಾ ಪರೀಕ್ಷೆ ಕೈಗೊಂಡ ಭಾರತ
ದೇಶದ ವಿವಿಧ ಭಾಗಗಳಲ್ಲಿ ಚಂಡಮಾರುತದಿಂದ ಬಳಲುತ್ತಿರುವ ಎಲ್ಲರಿಗೂ ಪ್ರಧಾನಿ ಸಂಪೂರ್ಣ ಒಗ್ಗಟ್ಟನ್ನು ವ್ಯಕ್ತಪಡಿಸಿದರು ಮತ್ತು ವಿಪತ್ತಿನ ಸಂದರ್ಭದಲ್ಲಿ ಮೃತಪಟ್ಟಿರುವವವರಿಗೆ ತೀವ್ರ ಸಂತಾಪ ಸೂಚಿಸಿದರು.ರಾಜ್ಯದಲ್ಲಿ ಹಾನಿಯ ಪ್ರಮಾಣವನ್ನು ನಿರ್ಣಯಿಸಲು ಕೇಂದ್ರವು ರಾಜ್ಯಕ್ಕೆ ಭೇಟಿ ನೀಡಲು ಅಂತರ-ಮಂತ್ರಿ ತಂಡವನ್ನು ನಿಯೋಜಿಸಲಿದೆ ಮತ್ತು ಹಾನಿಗೊಳಗಾದ ಮೂಲಸೌಕರ್ಯಗಳ ಪುನಃಸ್ಥಾಪನೆಗೆ ನೆರವು ನೀಡುವಂತೆ ಗುಜರಾತ್‌ನಲ್ಲಿ ವಿಜಯ್ ರೂಪಾನಿ ನೇತೃತ್ವದ ಸರ್ಕಾರಕ್ಕೆ ಭರವಸೆ ನೀಡಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ನರೇಂದ್ರ ಮೋದಿ ಹಾಗೂ ಯಡಿಯೂರಪ್ಪನವರ ಸರ್ಕಾರ ನಿದ್ರಾವಸ್ಥೆಯಲ್ಲಿವೆ-ಸಿದ್ದರಾಮಯ್ಯ
ಇದಲ್ಲದೆ, ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ ಮತ್ತು ದಮನ್ ಮತ್ತು ಡಿಯು, ಮತ್ತು ದಾದ್ರಾ ಮತ್ತು ನಗರ ಹವೇಲಿ ಯುಟಿಗಳಂತಹ ರಾಜ್ಯಗಳಲ್ಲಿ ಚಂಡಮಾರುತದಿಂದ ಮೃತಪಟ್ಟವರ ಮುಂದಿನ ಸಂಬಂಧಿಕರಿಗೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂಗಳನ್ನು ಘೋಷಿಸಿದ್ದಾರೆ. ಎಲ್ಲಾ ಪೀಡಿತ ರಾಜ್ಯಗಳು ತಮ್ಮ ಮೌಲ್ಯಮಾಪನಗಳನ್ನು ಕೇಂದ್ರಕ್ಕೆ ಕಳುಹಿಸಿದ ನಂತರ ತಕ್ಷಣದ ಆರ್ಥಿಕ ನೆರವು ನೀಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.