ನವದೆಹಲಿ : ದೇಶದ ಪೂರ್ವ ಭಾಗದಲ್ಲಿ  ಯಾಸ್ ಚಂಡಮಾರುತ ಭಾರೀ ಪ್ರಮಾಣದಲ್ಲಿ ಆರ್ಭಟಿಸುತ್ತಿದೆ. 145 ಕಿಮೀ.ಗೂ ಅಧಿಕ ವೇಗದಲ್ಲಿ ದಾಳಿ ಮಾಡಿದ ಚಂಡಮಾರುತದ ಹೊಡೆತಕ್ಕೆ ಸಾಕಷ್ಟು ಅನಾಹುತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.


COMMERCIAL BREAK
SCROLL TO CONTINUE READING

ಯಾಸ್​ ಚಂಡಮಾರುತದ ಪರಿಣಾಮವನ್ನು ಪರಿಶೀಲನೆ ನಡೆಸಲಿರುವ ಪ್ರಧಾನಿ ಮೋದಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ. ತೌಕ್ತೆ ಬಂದುಹೋದ ನಂತರ ಗುಜರಾತ್‌ನಲ್ಲಿ ವೈಮಾನಿಕ ಸಮೀಕ್ಷೆ(Aerial Survey) ನಡೆಸಿ ಒಂದು ಸಾವಿರ ಕೋಟಿ ರೂಪಾಯಿ ನೆರವು ಘೋಷಿಸಿದ್ದರು. ಒಡಿಶಾದ ಬಾಲಸೋರ್ ಮತ್ತು ಬದ್ರಾಕ್ ಹಾಗೂ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಎರಡು ರಾಜ್ಯಗಳಲ್ಲೂ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಿದ್ದಾರೆ.


ಇದನ್ನೂ ಓದಿ : ಲಾಕ್ ಡೌನ್ ನಲ್ಲಿ ಮದುವೆಯಾಗುತ್ತಿದ್ದವರಿಗೆ ಎಚ್ಚರಿಕೆ ಸಂದೇಶ ರವಾನಿಸಿದ ಈ ರಾಜ್ಯ...!


ಇನ್ನು ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಸೈಕ್ಲೋನ್(Cyclone Yaas)​ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡ ಕಾರಣ ಹೆಚ್ಚಿನ ಸಾವು ನೋವು ಸಂಭವಿಸಿಲ್ಲ.ಮುನ್ನೆಚ್ಚರಿಕೆ ಕ್ರಮವಾಗಿ ಪಶ್ಚಿಮ ಬಂಗಾಳ, ಒಡಿಶಾ ಹಾಗೂ ಜಾರ್ಖಂಡ್ ರಾಜ್ಯಗಳ ಸುಮಾರು 21 ಲಕ್ಷ ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿತ್ತು. ಹೀಗಾಗಿ ಸಾವು ನೋವಿನ ಪ್ರಮಾಣ ಕಡಿಮೆಯಾಗಿದೆ. ಆದರೆ, ಈ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಗಿದೆ. ಭಾರತದ ಪಶ್ಚಿಮ ಕರಾವಳಿ ಭಾಗಕ್ಕೆ ತೌಕ್ತೆ ಚಂಡಮಾರುತ ಅಪ್ಪಳಿಸಿದ ಒಂದು ವಾರಗಳ ಅಂತರದಲ್ಲಿ ಯಾಸ್ ಚಂಡಮಾರುತ ಕೂಡ ಆಘಾತ ನೀಡಿದೆ.


ಇದನ್ನೂ ಓದಿ : ಕೊರೊನಾ ಸಾವಿನ ಕುರಿತ ನ್ಯೂಯಾರ್ಕ್ ಟೈಮ್ಸ್ ವರದಿಯನ್ನು ತಳ್ಳಿ ಹಾಕಿದ ಕೇಂದ್ರ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.