ನವದೆಹಲಿ: ಕರ್ನಾಟಕದಲ್ಲಿ ಸಮಿಶ್ರ ಸರ್ಕಾರ ರಚಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಡಿಕೆ ಶಿವಕುಮಾರ್ ಅವರಿಗೆ ಈಗ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಜವಾಬ್ದಾರಿಯನ್ನು ವಹಿಸಿದೆ.


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಪಕ್ಷದ ವಲಯದಲ್ಲಿ ಟ್ರಬಲ್ ಶೂಟರ್ ಎಂದು ಗುರುತಿಸಿಕೊಂಡಿರುವ ಡಿಕೆಶಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಒಂದೆಡೆ ಕೂಡಿಟ್ಟು ಬಿಜೆಪಿ ಆಪರೇಶನ್ ಕಮಲಕ್ಕೆ ಒಳಗಾಗದಂತೆ ತಂತ್ರ ರೂಪಿಸಿದ್ದರು.ಈ ಹಿನ್ನಲೆಯಲ್ಲಿ ಈಗ ಅವರ ರಾಜಕೀಯ ನೈಪುಣ್ಯತೆ  ಶಬಾಶ್ ಹೇಳಿರುವ ಹೈಕಮಾಂಡ್ ನೆರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಅವರಿಗೆ ಉಸ್ತುವಾರಿ ನೀಡಲಾಗಿದೆ.


ಇನ್ನೊಂದು ವಿಶೇಷವೆಂದರೆ ಇತ್ತೀಚೆಗಷ್ಟೇ ಮುಗಿದ ಬಳ್ಳಾರಿ ಉಪಚುನಾವಣೆಯಲ್ಲಿ 14 ವರ್ಷಗಳ ನಂತರ ರೆಡ್ಡಿ ಸಹೋದರರ ಕಪಿಮುಷ್ಟಿಯಲ್ಲಿದ್ದ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷಕ್ಕೆ ಮರಳಿ ಬರುವಲ್ಲಿ ಮಹತ್ವದ ಪಾತ್ರವಹಿಸಿದ್ದರು.


ಈ ಬಾರಿ ಕೆಸಿಆರ್ ಅವರ ತೆಲಂಗಾಣ ರಾಷ್ಟ್ರೀಯ ಸಮಿತಿಗೆ ಕೌಂಟರ್ ಕೊಡುವ ನಿಟ್ಟಿನಲ್ಲಿ ಕಾಂಗ್ರೆಸ್ ಮತ್ತು ತೆಲುಗು ದೇಶಂ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ.ಆ ಮೂಲಕ ಗೆಲ್ಲುವ ಉತ್ಸಾಹದಲ್ಲಿ ಎರಡು ಪಕ್ಷಗಳು ಇವೆ.ಈಗ ಕರ್ನಾಟಕದ ಡಿಕೆಶಿಯವರಿಗೆ ಉಸ್ತುವಾರಿ ನೀಡುವ ಮೂಲಕ ಗೆಲ್ಲುವ ಸಾಧ್ಯತೆಯನ್ನು ಹೆಚ್ಚಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಉದ್ದೇಶವಾಗಿದೆ.