ನಿರಂತರ ಕಿರುಕುಳದಿಂದ ಬೇಸತ್ತು ಕಾಲೇಜನ್ನೇ ತೊರೆದ ದಲಿತ ಮಹಿಳೆ
ಕಿರುಕುಳ ನೀಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೋಲಿಸ್ ಅಧೀಕ್ಷಕ ದಿನೇಶ್ ಕುಮಾರ್ ತಿಳಿಸಿದ್ದಾರೆ.
ಮುಜಾಫರನಗರ: ವ್ಯಕ್ತಿಯೊಬ್ಬನ ನಿರಂತರ ಕಿರುಕುಳ ಸಹಿಸಲಾಗದೆ ದಲಿತ ಮಹಿಳೆಯೊಬ್ಬಳು ಕಾಲೇಜನ್ನೇ ತೊರೆದ ಘಟನೆ ಉತ್ತರಪ್ರದೇಶದ ಮುಜಾಫರನಗರದಲ್ಲಿ ನಡೆದಿದೆ.
ಈ ಬಗ್ಗೆ ಮಹಿಳೆಯ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ಸಲ್ಲಿಸಿದ್ದಾರೆ. ಕಾಲೇಜಿನಲ್ಲಿ ಆ ವ್ಯಕ್ತಿಯು ಮಹಿಳೆಗೆ ನಿರಂತರ ಕಿರುಕುಳ ನೀಡಿದ್ದಾನೆ. ಅಲ್ಲದೆ, ಆತನ ನಡೆಗೆ ಮಹಿಳೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆಕೆಗೆ ಮತ್ತು ಕುಟುಂಬದವರಿಗೆ ತೊಂದರೆ ನೀಡುವುದಾಗಿ ಬೆದರಿಕೆ ಒಡ್ಡಿರುವುದಾಗಿ ಕುಟುಂಬಸ್ಥರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಕಿರುಕುಳ ನೀಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೋಲಿಸ್ ಅಧೀಕ್ಷಕ ದಿನೇಶ್ ಕುಮಾರ್ ತಿಳಿಸಿದ್ದಾರೆ.
ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್'ಗಳ ಅಡಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿ ಬಂಧನಕಾಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.