ಇನ್ನು ಮುಂದೆ 12ರೊಳಗಿನ ಮಗುವಿನ ಮೇಲಿನ ಅತ್ಯಾಚಾರಕ್ಕೆ ಮರಣ ದಂಡನೆ

   

Updated: Apr 21, 2018 , 04:16 PM IST
ಇನ್ನು ಮುಂದೆ 12ರೊಳಗಿನ ಮಗುವಿನ ಮೇಲಿನ ಅತ್ಯಾಚಾರಕ್ಕೆ ಮರಣ ದಂಡನೆ

ನವದೆಹಲಿ: ಕೇಂದ್ರ ಸರ್ಕಾರವು ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಇನ್ನು ಮುಂದೆ 12 ರ ಹರೆಯದ ಮಗುವಿನ ಮೇಲೆ ಹತ್ಯಾಚಾರ ಮಾಡಿದ್ದಲ್ಲಿ ಅಂತವರಿಗೆ ಮರಣ ದಂಡನೆ ಶಿಕ್ಷೆಯನ್ನು ವಿಧಿಸಿಲಾಗುವುದು ಎಂದು ಸರ್ಕಾರ  ತುರ್ತು ಆದೇಶವನ್ನು ಜಾರಿಗೆ ತಂದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ಸೇರಿ ಸರ್ಕಾರ ಈ ಮಹತ್ವದ ನಿರ್ಧಾರಕ್ಕೆ ಬಂದಿದೆ.

ರಾಷ್ಟ್ರಾದ್ಯಂತ ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರದ ಪ್ರಕರಣಗಳ ವರದಿಗಳು ಹೆಚ್ಚುತ್ತಿದ್ದು, ಇದಕ್ಕೆ ಸಂಬಂಧಪಟ್ಟ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರದ ಮೇಲೆ ಸಾಕಷ್ಟು ಪ್ರತಿಭಟನೆಗಳ ಮೂಲಕ ಒತ್ತಡವನ್ನು ಹೇರಲಾಗಿತ್ತು, ಕಡೆಗೂ ಎಚ್ಚೆತ್ತು ಕೊಂಡಿರುವ ಸರ್ಕಾರವು ಈ ಆದೇಶವನ್ನು ಜಾರಿಗೆ ತಂದಿದೆ.

ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರಕ್ಕೆ ಮರಣದಂಡನೆ ವಿಧಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಮೇನಕಾ ಗಾಂಧಿ ಮೊದಲ ಬಾರಿಗೆ ಈ ವಿಚಾರವನ್ನು ಪ್ರಸ್ತಾಪಿಸಿದ್ದರು.