ಭೂಪಾಲ್: ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರದಂತಹ ಹೇಯ ಕೃತ್ಯಗಳಿಗೆ ಕಡಿವಾಣ ಹಾಕಲು ರೇಪಿಸ್ಟ್ ಗಳಿಗೆ ಗಲ್ಲುಶಿಕ್ಷೆ ವಿಧಿಸುವಂತಹ  ಮಹತ್ವದ ನಿರ್ಧಾರವನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರ್ಕಾರ ಕೈಗೊಂಡಿದೆ.


COMMERCIAL BREAK
SCROLL TO CONTINUE READING

ಮಧ್ಯಪ್ರದೇಶ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಧ್ಯಪ್ರದೇಶದಲ್ಲಿ 12 ಅಥವಾ ಅದಕ್ಕಿಂತಲೂ ಕಡಿಮೆ ವಯಸ್ಸಿನ ಮುಗ್ಧ ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ಗಲ್ಲುಶಿಕ್ಷೆ ಅನುಭವಿಸಬೇಕಾಗುತ್ತದೆ. 


ನ. 5 ರಂದು 12 ವರ್ಷದ ಬಾಲಕಿಯ ಮೇಲೆ ಕೆಲ ದುಷ್ಕರ್ಮಿಗಳು ಅತ್ಯಾಚಾರವೆಸಗಿ ಆಕೆಯ ಸಾವಿಗೆ ಕಾರಣರಾಗಿದ್ದರು. ಆ ಘಟನೆಗೆ ಸಂಬಂಧಿಸಿದ ಆರೋಪಿಗಳಿಗೂ ಕೂಡ ಗಲ್ಲುಶಿಕ್ಷೆ ನೀಡುವ ತೀರ್ಮಾನವನ್ನು ಸಚಿವ ಸಂಪುಟ ಸಭೆ ಕೈಗೊಂಡಿದೆ. ಅದಲ್ಲದೆ ಕಳೆದ ತಿಂಗಳು ಐಎಎಸ್ ಆಕಾಂಕ್ಷಿ ಮೇಲೆ ನಡೆದಿರುವಂತಹ ಅತ್ಯಾಚಾರ, ವಿಕಲಚೇತನ ಬಾಲಕಿಯ ಮೇಲೆ ನಡೆದಿರುವಂತಹ ಅತ್ಯಾಚಾರಕ್ಕೆ ಕಾರಣವಾದ ಆರೋಪಿಗಳಿಗೂ ಈ ಶಿಕ್ಷೆ ನೀಡುವಂತಹ ಸಾಧ್ಯತೆ ಇದೆ.