ನವದೆಹಲಿ: ಅಯೋಧ್ಯೆಯಲ್ಲಿ ಮಸೀದಿ ನಿರ್ಮಿಸಲು ಐದು ಎಕರೆ ಭೂಮಿಯನ್ನು ಸ್ವೀಕರಿಸಬೇಕೆ ಎಂಬ ಬಗ್ಗೆ ನವೆಂಬರ್ 26 ರಂದು ನಡೆಯುವ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸುನ್ನಿ ಕೇಂದ್ರ ವಕ್ಫ್ ಮಂಡಳಿ ಭಾನುವಾರ ತಿಳಿಸಿದೆ.
ಸುಪ್ರೀಂ ಕೋರ್ಟ್ ತನ್ನ ಸರ್ವಾನುಮತದ ತೀರ್ಪಿನಲ್ಲಿ ಅಯೋಧ್ಯೆಯಲ್ಲಿನ ವಿವಾದಿತ ಸ್ಥಳದಲ್ಲಿ ರಾಮ್ ದೇವಾಲಯ ನಿರ್ಮಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. ಇನ್ನೊಂದೆಡೆಗೆ ಸುಪ್ರೀಂ ಕೋರ್ಟ್ ಮಸೀದಿ ನಿರ್ಮಿಸಲು ಸುನ್ನಿ ವಕ್ಫ್ ಮಂಡಳಿಗೆ ಐದು ಎಕರೆ ಜಾಗವನ್ನು ಮಂಜೂರು ಮಾಡಲು ಕೇಂದ್ರಕ್ಕೆ ನಿರ್ದೇಶನ ನೀಡಿದೆ.ಈಗ ಈ ವಿಚಾರವಾಗಿ ಮಾತನಾಡಿದ ಉತ್ತರ ಪ್ರದೇಶ ಸುನ್ನಿ ಕೇಂದ್ರ ವಕ್ಫ್ ಮಂಡಳಿ ಅಧ್ಯಕ್ಷ ಜುಫರ್ ಫಾರೂಕಿ "ನವೆಂಬರ್ 26 ರಂದು ಮಂಡಳಿಯ ಸಾಮಾನ್ಯ ಮಂಡಳಿಯ ಸಭೆಯನ್ನು ನಿರೀಕ್ಷಿಸಲಾಗಿದೆ, ಇದರಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಐದು ಎಕರೆ ಭೂಮಿಯನ್ನು ತೆಗೆದುಕೊಳ್ಳಬೇಕೆ ಅಥವಾ ಬೇಡವೇ ಎಂದು ನಿರ್ಧರಿಸಲಾಗುತ್ತದೆ" ಎಂದು ಅವರು ಹೇಳಿದರು.
"ಸಭೆಯನ್ನು ಈ ಮೊದಲು ನವೆಂಬರ್ 13 ರಂದು ನಿಗದಿಪಡಿಸಲಾಗಿತ್ತು, ಆದರೆ ಅದನ್ನು ಮುಂದೂಡಲಾಯಿತು ಮತ್ತು ಈಗ ನವೆಂಬರ್ 26 ರಂದು ನಿರೀಕ್ಷಿಸಲಾಗಿದೆ. ಭೂಮಿಯನ್ನು ತೆಗೆದುಕೊಳ್ಳುವ ಬಗ್ಗೆ ನಾನು ವೈವಿಧ್ಯಮಯ ಅಭಿಪ್ರಾಯಗಳನ್ನು ಪಡೆಯುತ್ತಿದ್ದೇನೆ ಆದರೆ ನಕಾರಾತ್ಮಕತೆಯನ್ನು ಸಕಾರಾತ್ಮಕತೆಯಿಂದ ಮಾತ್ರ ಗೆಲ್ಲಬಹುದು ಎಂದು ನಾನು ವೈಯಕ್ತಿಕವಾಗಿ ಭಾವಿಸುತ್ತೇನೆ" ಎಂದು ಫಾರೂಕಿ ಹೇಳಿದರು. ಬಾಬರಿ ಮಸೀದಿಗೆ ಭೂಮಿಯನ್ನು ತೆಗೆದುಕೊಳ್ಳಬಾರದು ಎಂದು ಕೆಲವು ವ್ಯಕ್ತಿಗಳು ಸಲಹೆ ನೀಡುತ್ತಿದ್ದಾರೆ ಆದರೆ 'ಇದು ನಕಾರಾತ್ಮಕತೆಯನ್ನು ಹೆಚ್ಚಿಸುತ್ತದೆ ಎಂದು ನಾನು ಭಾವಿಸುತ್ತೇನೆ' ಎಂದು ಅವರು ಹೇಳಿದರು.