ಭಾರತ-ರಷ್ಯಾ ನಡುವೆ ರಕ್ಷಣಾ ಸಹಕಾರ ಸಂಬಂಧಿತ ಒಪ್ಪಂದ ಸಾಧ್ಯತೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಮೂರು ದಿನಗಳ ರಷ್ಯಾ ಪ್ರವಾಸಕ್ಕೆ ಮಾಸ್ಕೋಗೆ ಆಗಮಿಸಿದ್ದು, ಅಲ್ಲಿ ಉಭಯ ದೇಶಗಳ ನಡುವಿನ ರಕ್ಷಣಾ ಸಹ-ಉತ್ಪಾದನೆಗೆ ಸಂಬಂಧಿಸಿದ ವಿಧಾನಗಳ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

Updated: Nov 5, 2019 , 05:55 PM IST
ಭಾರತ-ರಷ್ಯಾ ನಡುವೆ ರಕ್ಷಣಾ ಸಹಕಾರ ಸಂಬಂಧಿತ ಒಪ್ಪಂದ ಸಾಧ್ಯತೆ

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಮೂರು ದಿನಗಳ ರಷ್ಯಾ ಪ್ರವಾಸಕ್ಕೆ ಮಾಸ್ಕೋಗೆ ಆಗಮಿಸಿದ್ದು, ಅಲ್ಲಿ ಉಭಯ ದೇಶಗಳ ನಡುವಿನ ರಕ್ಷಣಾ ಸಹ-ಉತ್ಪಾದನೆಗೆ ಸಂಬಂಧಿಸಿದ ವಿಧಾನಗಳ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ರಕ್ಷಣಾ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ರಾಜನಾಥ್ ಸಿಂಗ್ ರಷ್ಯಾದಿಂದ ರಕ್ಷಣಾ ಸಚಿವ ಜನರಲ್ ಸೆರ್ಗೆಯ್ ಶೋಯಿಗು ಅವರೊಂದಿಗೆ ಮಿಲಿಟರಿ ಸಹಕಾರ ಮತ್ತು ರಕ್ಷಣಾ ಕೈಗಾರಿಕಾ ಸಹಕಾರದ ಎಲ್ಲ ಕ್ಷೇತ್ರಗಳನ್ನು ಒಳಗೊಂಡಂತೆ ಚರ್ಚೆ ನಡೆಸುವ ನಿರೀಕ್ಷೆಯಿದೆ.

ರಷ್ಯಾ ಕೈಗಾರಿಕಾ ಮತ್ತು ವಾಣಿಜ್ಯ ಸಚಿವ ಡೆನಿಸ್ ಮಾಂಟುರೊವ್ ಅವರೊಂದಿಗೆ 'ಭಾರತ-ರಷ್ಯಾ ರಕ್ಷಣಾ ಕೈಗಾರಿಕಾ ಸಹಕಾರ ಸಮ್ಮೇಳನ' ಉದ್ಘಾಟಿಸಲಿದ್ದಾರೆ. ಮೇಕ್ ಇನ್ ಇಂಡಿಯಾ' ಕಾರ್ಯಕ್ರಮದಡಿ ಭಾರತ ಮತ್ತು ರಷ್ಯಾ ನಡುವಿನ ರಕ್ಷಣಾ ಕೈಗಾರಿಕಾ ಸಹಕಾರ,ತಂತ್ರಜ್ಞಾನ ವರ್ಗಾವಣೆ ಮತ್ತು ರಕ್ಷಣಾ ಉದ್ಯಮದಲ್ಲಿ ಭಾರತದಲ್ಲಿ ಹೂಡಿಕೆ ಮಾಡುವ ಮಾರ್ಗಗಳ ಬಗ್ಗೆ ಸಮ್ಮೇಳನದಲ್ಲಿ ಚರ್ಚಿಸಲಿದ್ದಾರೆ.   

ಇದೇ ವೇಳೆ ರಾಜನಾಥ್ ಸಿಂಗ್ ಅವರು ಸೇಂಟ್ ಪೀಟರ್ಸ್ಬರ್ಗ್ ಗೆ ಭೇಟಿ ನೀಡಿ ಅಲ್ಲಿ ಅವರು ಪಿಸ್ಕರೆವ್ಸ್ಕಿ ಸ್ಮಾರಕದಲ್ಲಿ ಎರಡನೇ ಮಹಾಯುದ್ಧದಲ್ಲಿ ಪ್ರಾಣ ಕಳೆದುಕೊಂಡ ಸೈನಿಕರು ಮತ್ತು ನಾಗರಿಕರನ್ನು ಗೌರವ ಸಲ್ಲಿಸಲಿದ್ದಾರೆ. ಕಳೆದ ವಾರ ರಾಜನಾಥ್ ಸಿಂಗ್ ಅವರು ಉಜ್ಬೇಕಿಸ್ತಾನ್‌ನ ತಾಷ್ಕೆಂಟ್‌ಗೆ ಪ್ರಯಾಣಿಸಿದ್ದರು, ಅಲ್ಲಿ ಅವರು ಶಾಂಘೈ ಸಹಕಾರ ಸಂಘಟನೆಯ ಕೌನ್ಸಿಲ್ ಆಫ್ ಹೆಡ್ಸ್ ಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಭಾರತ ಮತ್ತು ಉಜ್ಬೇಕಿಸ್ತಾನ್ ಮಿಲಿಟರಿ ಶಿಕ್ಷಣ ಮತ್ತು ಮಿಲಿಟರಿಗೆ ಸಂಬಂಧಿಸಿದ ಮೂರು ಒಪ್ಪಂದಗಳಿಗೆ ಸಹಿ ಹಾಕಿದ್ದವು.