ನವದೆಹಲಿ : ಕೋವಿಡ್ ಪ್ರಕರಣಗಳ ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು CBSE ಏಪ್ರಿಲ್ 14 ರಂದು 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿತ್ತು ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿತ್ತು. 12ನೇ ತರಗತಿ ಪರೀಕ್ಷೆಗಳು ಮತ್ತು ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳ ಬಗ್ಗೆ ಚರ್ಚಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಇಂದು ಉನ್ನತ ಮಟ್ಟದ ಸಭೆ ನಡೆಯಲಿದೆ. ಸಭೆಯ ಅಧ್ಯಕ್ಷತೆ ವಹಿಸಲಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಹಿಸಲಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : Yaas Cyclone : ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ!


ಪರೀಕ್ಷೆಗಳನ್ನು ನಡೆಸುವ ಬಗ್ಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಶಿಕ್ಷಣ ಸಚಿವರು ಪತ್ರ ಬರೆದಿದ್ದಾರೆ. 12ನೇ ತರಗತಿ ಪರೀಕ್ಷೆ(Class 12 Exams) ಮತ್ತು ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳ ಪ್ರಸ್ತಾಪಗಳ ಬಗ್ಗೆ ಚರ್ಚಿಸಲು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಶಿಕ್ಷಣ ಸಚಿವರು, ಶಿಕ್ಷಣ ಕಾರ್ಯದರ್ಶಿಗಳು ಮತ್ತು ರಾಜ್ಯ ಪರೀಕ್ಷಾ ಮಂಡಳಿಗಳ ಅಧ್ಯಕ್ಷರು ಮತ್ತು ಮಧ್ಯಸ್ಥಗಾರರೊಂದಿಗೆ ಉನ್ನತ ಮಟ್ಟದ ವರ್ಚ್ಯುಯಲ್‌ ಸಭೆ ಆಯೋಜಿಸಲಾಗಿದೆ.


ಬಹಳ ಹುಷಾರಾಗಿರಿ..!ಈ ನಂಬರಿನಿಂದ ನಿಮಗೆ ಕಾಲ್ ಬರಬಹುದು..!


ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್(Rajnath Singh) ಅಧ್ಯಕ್ಷತೆಯಲ್ಲಿ, ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ಕೇಂದ್ರ ಮಹಿಳಾ ಮತ್ತು ಮಕ್ಕಳ ಸಚಿವೆ ಶ್ರೀಮತಿ ಸ್ಮೃತಿ ಜುಬಿನ್ ಇರಾನಿ ಮತ್ತು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ.


ಇದನ್ನೂ ಓದಿ : ಮಣಿಪುರದಲ್ಲಿ ಕಂಪಿಸಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.3 ರಷ್ಟು ತೀವ್ರತೆ ದಾಖಲು


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.