ನವದೆಹಲಿ / ಲೆಹ್: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುತ್ತಿದ್ದ 370 ನೇ ವಿಧಿಯನ್ನು ರದ್ದುಪಡಿಸಿರುವ ಕೇಂದ್ರ ಸರ್ಕಾರ ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದೆ. ಜಮ್ಮು-ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೊದಲ ಬಾರಿಗೆ ಲಡಾಖ್‌ನ ಕೇಂದ್ರ ಪ್ರದೇಶಕ್ಕೆ (ಯುಟಿ) ಭೇಟಿ ನೀಡಲಿದ್ದಾರೆ.


COMMERCIAL BREAK
SCROLL TO CONTINUE READING

ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ರಚನೆಯಾದ ನಂತರ ಕೇಂದ್ರ ಸರ್ಕಾರದ ಹಿರಿಯ ಸಚಿವರ ಮೊದಲ ಭೇಟಿ ಇದಾಗಿದೆ.


ಡಿಫೆನ್ಸ್ ಇನ್‌ಸ್ಟಿಟ್ಯೂಟ್ ಆಫ್ ಹೈ ಆಲ್ಟಿಟ್ಯೂಡ್ ರಿಸರ್ಚ್ (DIHAR) ಆಯೋಜಿಸಿರುವ ‘26 ನೇ ಲಡಾಖಿ ಕಿಸಾನ್ ಜವಾನ್ ವಿಜಯಾನ್ ಮೇಳ ’ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ನಾನು ಗುರುವಾರ ಲಡಾಖ್‌ನ ಲೇಹ್‌ಗೆ ಭೇಟಿ ನೀಡಲಿದ್ದೇನೆ ಎಂದು ರಕ್ಷಣಾ ಸಚಿವರು ಟ್ವೀಟ್ ಮಾಡಿದ್ದಾರೆ.



ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿದ ಎತ್ತರದ ಪ್ರದೇಶಗಳಲ್ಲಿ ಬೆಳೆಯಲು ಸೂಕ್ತವಾದ ಬೆಳೆಗಳು ಮತ್ತು ಧಾನ್ಯಗಳನ್ನು ಪ್ರದರ್ಶಿಸುವ ವಿಜ್ಞಾನ್ ಮೇಳವನ್ನು ಸಿಂಗ್ ಉದ್ಘಾಟಿಸಲಿದ್ದಾರೆ. ಡಿಫೆನ್ಸ್ ಇನ್‌ಸ್ಟಿಟ್ಯೂಟ್ ಆಫ್ ಹೈ ಆಲ್ಟಿಟ್ಯೂಡ್ ರಿಸರ್ಚ್‌ನಲ್ಲಿ ಈ ಮೇಳವನ್ನು ಆಯೋಜಿಸಲಾಗುತ್ತಿದೆ.


ಲಡಾಖ್‌ ಭೇಟಿ ಸಮಯದಲ್ಲಿ ರಾಜನಾಥ್ ಸಿಂಗ್ ಈ ಪ್ರದೇಶದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸುತ್ತಾರೆ ಮತ್ತು ಸ್ಥಳೀಯರು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸಂವಹನ ನಡೆಸಲಿದ್ದಾರೆ ಎಂದು ರಕ್ಷಣಾ ಅಧಿಕಾರಿಗಳು ಜೀ ನ್ಯೂಸ್‌ಗೆ ತಿಳಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ ಲಡಾಖ್ ಅನ್ನು ಜಮ್ಮು ಮತ್ತು ಕಾಶ್ಮೀರದಿಂದ ವಿಭಜಿಸಿ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿರುವ ಸರ್ಕಾರದ ನಿರ್ಧಾರದಿಂದ ಲಡಾಖ್‌ಗೆ ಹೇಗೆ ಸಹಾಯವಾಗಲಿದೆ ಎಂಬ ಬಗ್ಗೆ ಅವರು ಚರ್ಚಿಸಲಿದ್ದಾರೆ.


ಚೀನಾ ಮತ್ತು ಪಾಕಿಸ್ತಾನದ ಗಡಿಗಳಲ್ಲಿನ ಪರಿಸ್ಥಿತಿಯ ಬಗ್ಗೆ ಸಚಿವರು ಈ ಪ್ರದೇಶದ ರಕ್ಷಣಾ ಮತ್ತು ಮಿಲಿಟರಿ ಅಧಿಕಾರಿಗಳೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದೆ.