ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಕೇಜ್ರಿವಾಲ್

Delhi Assembly Elections 2020 : ಅರವಿಂದ್ ಕೇಜ್ರಿವಾಲ್ ನವದೆಹಲಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.

Last Updated : Jan 9, 2020, 09:13 AM IST
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಕೇಜ್ರಿವಾಲ್ title=

ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್(Arvind Kejriwal) ದೆಹಲಿ ವಿಧಾನಸಭಾ ಚುನಾವಣೆ 2020(Delhi Assembly election 2020) ರಲ್ಲಿ ತಮ್ಮ ವಿಧಾನಸಭಾ ಕ್ಷೇತ್ರವನ್ನು ಬಿಟ್ಟು ಬೇರೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ವರದಿಗಳು ಕೇಳಿ ಬರುತ್ತಿತ್ತು. ಆದರೆ ಅವರು ತಮ್ಮ ಪ್ರಸ್ತುತ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಲಿಸಿವೆ. ಅರವಿಂದ್ ಕೇಜ್ರಿವಾಲ್ ನವದೆಹಲಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದು, ಅವರು ಈ ಚುನಾವಣೆಯಲ್ಲೂ ಅದೇ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ. ಅಲ್ಲದೇ ಅರವಿಂದ್ ಕೇಜ್ರಿವಾಲ್ ಅವರು ಕೇವಲ ಒಂದು ಸ್ಥಾನದಿಂದ ಸ್ಪರ್ಧಿಸುವುದಾಗಿ ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

2012 ರಲ್ಲಿ ಆಮ್ ಆದ್ಮಿ ಪಕ್ಷ(AAP) ರಚನೆಯಾದ ನಂತರ, ಅರವಿಂದ್ ಕೇಜ್ರಿವಾಲ್(Arvind Kejriwal) ಅವರು 2013 ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಅಂದಿನ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಎದುರು ಮೊದಲ ಬಾರಿಗೆ ಸ್ಪರ್ಧಿಸಿದರು. ಆ ಸಮಯದಲ್ಲಿ, ದೆಹಲಿಯ ರಾಜಕೀಯದಲ್ಲಿ ದೊಡ್ಡ ಹೆಸರು ಮಾಡಿದ್ದ,  ಸತತ ಮೂರು ಬಾರಿ ದೆಹಲಿಯ ಮುಖ್ಯಮಂತ್ರಿಯಾಗಿದ್ದ ಶೀಲಾ ದೀಕ್ಷಿತ್ ಅವರ ಎದುರು ಸ್ಪರ್ಧಿಸುವುದು ದೊಡ್ಡ ವಿಷಯವೇ ಆಗಿತ್ತು. ಆದ್ದರಿಂದ ಚುನಾವಣಾ ಸ್ಪರ್ಧೆಯು ಅತ್ಯಂತ ಆಸಕ್ತಿದಾಯಕವಾಗಿತ್ತು.

ಆದರೆ ಅಂದಿನ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಶೀಲಾ ದೀಕ್ಷಿತ್ ಅವರನ್ನು 25,864 ಮತಗಳಿಂದ ಸೋಲಿಸಿದರು. ಆದರೆ, ನಂತರ ಕೇಜ್ರಿವಾಲ್ ಅವರು ಕಾಂಗ್ರೆಸ್ ಜೊತೆ ದೆಹಲಿಯಲ್ಲಿ ಸರ್ಕಾರ ರಚಿಸಿದರು. ಈ ಸರ್ಕಾರ 49 ದಿನಗಳ ಕಾಲ ನಡೆಯಿತು. ನಂತರ, ಕೇಜ್ರಿವಾಲ್ ಅವರು ದೆಹಲಿ ವಿಧಾನಸಭೆಯಲ್ಲಿ ಜನ ಲೋಕಪಾಲ್ ಮಸೂದೆಯನ್ನು ತಂದಾಗ, ಕಾಂಗ್ರೆಸ್ ಅವರನ್ನು ಬೆಂಬಲಿಸಲಿಲ್ಲ ಮತ್ತು ಈ ಮಸೂದೆಯನ್ನು ಅಂಗೀಕರಿಸಲಾಗಲಿಲ್ಲ. ಇದರ ನಂತರ ಕೇಜ್ರಿವಾಲ್ ಸರ್ಕಾರಕ್ಕೆ ರಾಜೀನಾಮೆ ನೀಡಿದರು. 

ಇದರ ನಂತರ, ದೆಹಲಿಯಲ್ಲಿ ಮತ್ತೆ ನಡೆದ 2015 ರ ವಿಧಾನಸಭಾ ಚುನಾವಣೆಯಲ್ಲಿ ಕೇಜ್ರಿವಾಲ್ ಈ ಸ್ಥಾನದಿಂದ ಚುನಾವಣಾ ಕ್ಷೇತ್ರಕ್ಕೆ ಪ್ರವೇಶಿಸಿದರು. ಈ ಬಾರಿ ಕಾಂಗ್ರೆಸ್ ಮಾಜಿ ಸಚಿವ ಪ್ರೊಫೆಸರ್ ಕಿರಣ್ ವಾಲಿಯಾ ಅವರನ್ನು ಅವರ ಮುಂದೆ ಕಣಕ್ಕಿಳಿಸಿದರೆ, ಬಿಜೆಪಿ ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ನೂಪುರ್ ಶರ್ಮಾ ಅವರಿಗೆ ಟಿಕೆಟ್ ನೀಡಿತು. ಆದರೆ 2015ರ ಚುನಾವಣಾಯಲ್ಲಿಯೂ ಕೇಜ್ರಿವಾಲ್ ಗೆಲುವು ಸಾಧಿಸಿದರು. ಇದಲ್ಲದೆ 'ಪಾಂಚ್ ಸಾಲ್ ಕ ಕೇಜ್ರಿವಾಲ್' ಎಂಬ ಘೋಷಣೆಯೊಂದಿಗೆ ಚುನಾವಣೆ ಎದುರಿಸಿದ್ದ ಆಮ್ ಆದ್ಮಿ ಪಕ್ಷ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿತು. ಇದರೊಂದಿಗೆ ಅರವಿಂದ್ ಕೇಜ್ರಿವಾಲ್ ಸತತ ಎರಡನೇ ಬಾರಿಗೆ ದೆಹಲಿಯ ಸಿಎಂ ಆದರು. ಅವರು ನೂಪುರ್ ಶರ್ಮಾ ಅವರನ್ನು 31 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲಿಸಿದರು.

Trending News