ನವದೆಹಲಿ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ (West Bengal Election 2021) ಮಮತಾ ಬ್ಯಾನರ್ಜಿ ಗೆಲುವಿನತ್ತ ಸಾಗುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್ (TMC) 205 ಸ್ಥಾನಗಳಲ್ಲಿ ಮುಂದಿದೆ. ಬಿಜೆಪಿ (BJP) ಕೇವಲ 83 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಟಿಎಂಸಿ ಕಾರ್ಮಿಕರು ಬಂಗಾಳದಲ್ಲಿ ಸಂಭ್ರಮಾಚರಿಸುತ್ತಿದ್ದಾರೆ. ಈ ಮಧ್ಯೆ, ಮಮತಾ ಬ್ಯಾನರ್ಜಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.  ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Aravind Kejriwal) ಅವರು ಮಮತಾ ಬ್ಯಾನರ್ಜಿಯನ್ನು ವಿಭಿನ್ನ ರೀತಿಯಲ್ಲಿ ಅಭಿನಂದಿಸಿದ್ದಾರೆ. 


COMMERCIAL BREAK
SCROLL TO CONTINUE READING

ಅರವಿಂದ್ ಕೇಜ್ರಿವಾಲ್ (Aravind Kejriwal) ಟ್ವೀಟ್ ಮಾಡಿ ಮಮತಾ ಬ್ಯಾನರ್ಜಿಗೆ ಅಭಿನಂದಿಸಿದ್ದಾರೆ. ಭರ್ಜರಿ ಗೆಲುವು ಸಾಧಿಸಿದ್ದಕ್ಕಾಗಿ ಶುಭ ಕೋರಿದ್ದಾರೆ. ಇದೇ ವೇಳೆ  ಪಶ್ಚಿಮ ಬಂಗಾಳದ (West Bengal) ಜನತೆಗೂ ಅಭಿನಂದನೆ ಸಲ್ಲಿಸಿದ್ದಾರೆ. 


West Bengal Election Result 2021: ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ನ ಶಾಕಿಂಗ್ ಹೇಳಿಕೆ...!


ಮಮತಾ ಬ್ಯಾನರ್ಜಿ (Mamata Banerjee) ಮೂರನೇ ಬಾರಿಗೆ ಸಿಎಂ ಆಗುವ ಹಾದಿಯಲ್ಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದೆ. ಬಿಜೆಪಿ (BJP) ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಪೂರ್ಣ ಶಕ್ತಿಯೊಂದಿಗೆ ಕಣಕ್ಕಿಳಿದಿತ್ತು. ಪಶ್ಚಿಮ ಬಂಗಾಳದಲ್ಲಿ  200ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಹೊಂದಿತ್ತು. ಆದರೆ ಬಿಜೆಪಿ ಅಂದುಕೊಂಡಥಹ ಫಲಿತಾಂಶ ಲಭಿಸಿಲ್ಲ. 


ಇದನ್ನೂ ಓದಿ : Tamil Nadu Election Result 2021 : ತಮಿಳುನಾಡು ಸಿಎಂ ಆಗಿ ಸ್ಟಾಲಿನ್ ಅಧಿಕಾರಕ್ಕೆ ಮುಹೂರ್ತ ಫಿಕ್ಸ್..! 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.