Arvind Kejriwal ED Summons: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷದ ನಾಯಕರು ಹೇಳಿದ್ದಾರೆ.
ಇದನ್ನೂ ಓದಿ: ಇದು ಅಂತಿಂಥಾ ಮನೆಯಲ್ಲ ಸ್ವಾಮಿ…? ಎಷ್ಟೊಂದು ವೈಭವದಿಂದಿದೆ ನೋಡಿ ವರ್ತೂರ್ ಸಂತೋಷ್ ಅರಮನೆ
ಇಡಿ ಗುರುವಾರ ಬೆಳಗ್ಗೆ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಮನೆಗೆ ತಲುಪಿ ಅವರನ್ನು ಬಂಧಿಸಲಿದೆ ಎಂದು ಪಕ್ಷದ ಹಿರಿಯ ನಾಯಕ ಮತ್ತು ದೆಹಲಿ ಸರ್ಕಾರದ ಸಚಿವ ಸೌರಭ್ ಭಾರದ್ವಾಜ್ ಟ್ವೀಟ್ ಮಾಡಿದ್ದಾರೆ. ಇದೆಲ್ಲದರ ನಡುವೆ ಸಿಎಂ ಕೇಜ್ರಿವಾಲ್ ನಿವಾಸದ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅವರ ನಿವಾಸಕ್ಕೆ ತೆರಳುವ ಎರಡೂ ರಸ್ತೆಗಳನ್ನು ಬಂದ್ ಮಾಡಲಾಗಿದೆ.
ಸಿಎಂ ನಿವಾಸಕ್ಕೆ ತೆರಳುವ ಎಲ್ಲಾ ರಸ್ತೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದ್ದು, ದೆಹಲಿ ಪೊಲೀಸರು 300 ಮೀಟರ್ ಮುಂಚಿತವಾಗಿ ಬ್ಯಾರಿಕೇಡ್ ಹಾಕಿ ಭದ್ರತೆಯನ್ನು ಸಿದ್ಧಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಹಿತಿ ಪ್ರಕಾರ ಸಿಬ್ಬಂದಿ ಸಿಎಂ ನಿವಾಸದ ಒಳಗೆ ಹೋಗಲು ಸಹ ಅವಕಾಶ ನೀಡುತ್ತಿಲ್ಲ.
ದೆಹಲಿಯಲ್ಲಿ ನಡೆದಿದೆ ಎನ್ನಲಾದ ಮದ್ಯ ಹಗರಣ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮೂರನೇ ಸಮನ್ಸ್’ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಜರಾಗಲಿಲ್ಲ. ಸಿಎಂ ಅರವಿಂದ್ ಕೇಜ್ರಿವಾಲ್ ಬುಧವಾರ ತನಿಖಾ ಸಂಸ್ಥೆಗೆ ಪತ್ರ ಬರೆದು ತನಿಖಾ ಸಂಸ್ಥೆಯ ಮುಂದೆ ಏಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ವಿವರಿಸಿದ್ದಾರೆ.
ರಾಜ್ಯಸಭಾ ಚುನಾವಣೆಯ ಕಾರಣದಿಂದ ಬ್ಯುಸಿಯಾಗಿದ್ದೇನೆ, ಆದರೆ ಯಾವುದೇ ಪ್ರಶ್ನೆಗೆ ಉತ್ತರಿಸಲು ಸಿದ್ಧ ಎಂದು ಹೇಳಿದ್ದರು.
ಇದನ್ನೂ ಓದಿ: ಮದುವೆಯಾದ ಎರಡೇ ತಿಂಗಳಿಗೆ ಗರ್ಭಿಣಿಯಾದ ಖ್ಯಾತ ನಟಿ: 1+1=3… ಎನ್ನುತ್ತಾ ಫೋಟೋ ಶೇರ್
ದೆಹಲಿ ಅಬಕಾರಿ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಅನಗತ್ಯವಾಗಿ ಗೌಪ್ಯತೆಯನ್ನು ಕಾಯ್ದುಕೊಳ್ಳುತ್ತಿದ್ದಾರೆ. ನಿರಂಕುಶವಾಗಿ ವರ್ತಿಸುತ್ತಿದ್ದಾರೆ. ಸಮನ್ಸ್ ತನಗೆ ತಲುಪುವ ಮೊದಲೇ ಅದು ಎಲ್ಲೆಡೆ ಪ್ರಸಾರವಾಗಿತು ಎಂದು ಅವರು ಹೇಳಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.