ನವದೆಹಲಿ:  ಸಂವಿಧಾನದ 370 ನೇ ವಿಧಿಯನ್ನು ತೆಗೆದುಹಾಕುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಸ್ವಾಗತಿಸಿದ್ದಾರೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಕೇಜ್ರಿವಾಲ್, ಜಮ್ಮು-ಕಾಶ್ಮೀರದ ಬಗ್ಗೆ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾವು ಬೆಂಬಲಿಸುತ್ತೇವೆ. ಸರ್ಕಾರದ ಹೊಸ ಪ್ರಸ್ತಾಪವು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹೆಚ್ಚಿಸಿ, ಅಭಿವೃದ್ಧಿಯ ವೇಗವನ್ನು ಹೆಚ್ಚಿಸುತ್ತದೆ" ಎಂದಿದ್ದಾರೆ.



ಸೋಮವಾರ ರಾಜ್ಯಸಭೆಯಲ್ಲಿ ಸಂವಿಧಾನದ 370 ನೇ ವಿಧಿಯನ್ನು ತೆಗೆದುಹಾಕುವ ಪ್ರಸ್ತಾಪವನ್ನು ಮಂಡಿಸಿದ ಕೇಂದ್ರ ಸರ್ಕಾರ, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ, ಜಮ್ಮು-ಕಾಶ್ಮೀರವನ್ನು ಲಡಾಖ್ ನಿಂದ ಬೇರ್ಪಡಿಸಿ ಎರಡನ್ನೂ ಕೇಂದ್ರಾಡಳಿತ ಪ್ರದೇಶವಾಗಿಸುವ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. 


ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ರಚನೆಯಾಗಲಿದ್ದು, ಲಡಾಖ್ ನಲ್ಲಿ ಯಾವುದೇ ವಿಧಾನಸಭೆಗೆ ಅವಕಾಶವಿರುವುದಿಲ್ಲ. ಗಡಿಯಾಚೆಗಿನ ನಿರಂತರ ಭಯೋತ್ಪಾದನೆಯ ದಾಳಿಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ್ ಈ ನಿರ್ಧಾರ ಕೈಗೊಂಡಿದೆ  ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.